45 ದಿನಗಳಲ್ಲಿ 8 ಪ್ರಕರಣಗಳ ತನಿಖೆಗೆ ಆದೇಶ, ದ್ವೇಷದ ರಾಜಕೀಯಕ್ಕಿಳಿದ ಯಡ್ಡಿ..!?

0
469

ಮೈತ್ರಿ ಸರ್ಕಾರ ಉರುಳಿಸಿ ಅಧಿಕಾರದ ಗದ್ದುಗೆ ಏರಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಇದೀಗ ತಮ್ಮ ರಾಜಕೀಯ ವಿರೋಧಿಗಳನ್ನು ಹಣಿಯಲು ‘ಮರು ತನಿಖೆ’ ಎಂಬ ಹೊಸ ಅಸ್ತ್ರವನ್ನು ಬಳಸುತ್ತಿದೆ. ದ್ವೇಷದ ರಾಜಕೀಯದ ಮೂಲಕ ವಿರೋಧ ಪಕ್ಷಗಳ ನಾಯಕರನ್ನು ಕಟ್ಟಿ ಹಾಕಲು ಮುಂದಾಗಿದೆ. ಬಿಜೆಪಿ ಸರ್ಕಾರದ ಈ ಕುತಂತ್ರವನ್ನು ಅರಿತ ಮಾಜಿ ಸಿಎಂ ಕುಮಾರಸ್ವಾಮಿ ಪದೇ ಪದೇ ಬಿಜೆಪಿ ಸರ್ಕಾರ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಇನ್ನು ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರಮುಖ ಕಾರಣವೆಂದರೆ ಬಿಜೆಪಿ ಸರ್ಕಾರ ಅದಿಕಾರಕ್ಕೆ ಬಂದ 45 ದಿನಗಳಲ್ಲಿ ಸರ್ಕಾರ 8 ಪ್ರಕರಣಗಳ ಮರು ತನಿಖೆಗೆ ಆದೇಶಿಸಿದೆ. ಈ ಮೂಲಕ ದ್ವೇಷದ ರಾಜಕೀಯ ಸೇಡಿಗೆ ಮುಂದಾಗಿದೆ. ಹೌದು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಕೇಳಿ ಬಂದ ಫೋನ್ ಕದ್ದಾಲಿಕೆ ಪ್ರಕರಣವನ್ನು ಬಿಎಸ್‍ವೈ ಸಿಐಬಿಗೆ ವಹಿಸಿದರು. ರಾಜಕೀಯವಾಗಿ ಕುಮಾರಸ್ವಾಮಿ ಅವರನ್ನು ಕಟ್ಟಿ ಹಾಕಲು ಫೋನ್ ಕದ್ದಾಲಿಕೆ ಪ್ರಕರಣವನ್ನು ಬಳಸಿಕೊಳ್ಳಲಾಯಿತು.

ಅದಾದ ನಂತರ ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ನಾಯಕ ಯೋಗೇಶ್ ಗೌಡ ಅವರ ಕೊಲೆ ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಕೈವಾಡವಿದೆ ಎಂಬ ಅನುಮಾನವಿದ್ದು, ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಇದರ ಮಧ್ಯೆ ಸಿದ್ದರಾಮಯ್ಯನವರ ಸರ್ಕಾರದ ಸಂದರ್ಭದಲ್ಲಿನ ‘ಕೃಷಿ ಭಾಗ್ಯ’ ‘ಕೃಷಿ ಹೊಂಡ’ ಯೋಜನೆಯ ಕುರಿತ ತನಿಖೆಗೂ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ. ಹೀಗೆ ಒಟ್ಟು 8 ಪ್ರಕರಣಗಳನ್ನು ಬಿಜೆಪಿ ಸರ್ಕಾರ ತನಿಖೆಗೆ ಆದೇಶಿಸಿದೆ.

ಇನ್ನು ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಸದನದಲ್ಲಿ ಮಾತು ನೀಡುತ್ತಲೇ ಅಧಿಕಾರಕ್ಕೆ ಏರಿದ ಬಿ.ಎಸ್. ಯಡಿಯೂರಪ್ಪ ಸಾಲು ಸಾಲು ಪ್ರಕರಣಗಳನ್ನು ಸಿಬಿಐಗೆ ನೀಡುವ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಕಿಡಿಕಾರುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಿಗಳನ್ನು ನಂಬದೇ ಕೇವಲ ಕೇಂದ್ರ ತನಿಖಾ ಸಂಸ್ಥೆಗಳಿಂದಲೇ ಪ್ರಕರಣಗಳ ತನಿಖೆ ನಡೆಸಲು ಮುಂದಾಗಿರೋದು ಯಾಕೆ? ಎಂದು ವಿಪಕ್ಷ ನಾಯಕರು ಕಿಡಿಕಾರುತ್ತಿದ್ದಾರೆ.

LEAVE A REPLY

Please enter your comment!
Please enter your name here