ಮದ್ಯಂತರ ಚುನಾವಣೆ ಬರುತ್ತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಸಿ.ಟಿ ರವಿ ಬೆಂಗಳೂರಿನಲ್ಲಿ ಟಾಂಗ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಸಿ.ಟಿ ರವಿ ಅವರು ಸಿದ್ದರಾಮಯ್ಯನವರು ಮೂಡನಂಬಿಕೆ ನಿಷೇದ ಮಸೂದೆ ತರೋದಕ್ಕೆ ಹೊರಟಿದ್ದರು. ಅವರು ಭವಿಷ್ಯ ಹೇಳುವುದನ್ನು ಯಾವಾಗಿಂದ ಶುರು ಮಾಡಿದ್ದಾರೋ ಗೊತ್ತಿಲ್ಲ, ಎಂದು ವ್ಯಂಗ್ಯ ಮಾಡಿದ್ದಾರೆ.

ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಪ್ರಶ್ನಾತೀತ ನಾಯಕರು ಅಂದುಕೊಂಡಿದ್ದೆ, ಆದರೆ ಅವರ ಪಕ್ಷದಲ್ಲಿ,ವಿರೋದ ಪಕ್ಷದ ನಾಯಕರನ್ನು ನೇಮಕ ಮಾಡಿಲ್ಲ ಎಂದು ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಮಾತು ಮುಂದುವರೆಸಿದ ಅವರು ನಮ್ಮ ಸರ್ಕಾರ ಮೂರು ವರುಷ ಒಂಬತ್ತು ತಿಂಗಳು ಇರುತ್ತದೆ.ದೀರ್ಘವಧಿಯ ಯೋಜನೆಗಳನ್ನು ಜಾರಿಗೆ ತರುತ್ತೇವೆ ಇದರ ಬಗ್ಗೆ ಅನುಮಾನ ಬೇಡ ಎಂದು ಸಚಿವರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.