ಶಿರಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ

0
292

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ನಿಂದ ದಿವಂಗತ ಸತ್ಯನಾರಾಯಣ ಪತ್ನಿ ಅಮ್ಮಾಜಮ್ಮನೇ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಶಾಸಕರಾಗಿದ್ದ ಸತ್ಯನಾರಾಯಣ ಅವರು ಇತ್ತೀಚೆಗೆ ನಿಧನರಾಗಿದ್ದರು. ಹೀಗಾಗಿ ಇಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಪಕ್ಷವು ಸತ್ಯನಾರಾಯಣ ಅವರ ಪತ್ನಿಗೆ ಟಿಕೆಟ್ ನೀಡಿದೆ. ಈ ಕುರಿತು ಸ್ಪಷ್ಟನೆ ನೀಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಸತ್ಯ ನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಜೆಡಿಎಸ್ ಅಭ್ಯರ್ಥಿ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಸ್ಪಷ್ಟನೆ ನೀಡಿದರು.

“ಜೆಡಿಎಸ್ ಬಗ್ಗೆ ಯಾರಿಗೂ ಅನುಕಂಪ ಬೇಡ”

ಈ ಕುರಿತು ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಹೆಚ್.ಡಿ ದೇವೇಗೌಡ, ದಿ. ಸತ್ಯನಾರಾಯಣ ಅವರ ಮಗ ತುಂಬಾ ಆಕ್ಟೀವ್ ಆಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ನಮ್ಮ ಪಕ್ಷದವರನ್ನು ಕಾಂಗ್ರೆಸ್, ಬಿಜೆಪಿ ಅವರು ಕರೆದು ಕೊಂಡಿದ್ದಾರೆ. ಈ ಬಗ್ಗೆ ನಾನು ಮಾತಾಡೋದಿಲ್ಲ. ಜೆಡಿಎಸ್ ಬಗ್ಗೆ ಯಾರಿಗೂ ಅನುಕಂಪ ಬೇಡ. ಅವ್ರು ಗೆಲ್ಲೋಕೆ ಏನು ಬೇಕೋ ಅದನ್ನ ಮಾಡುತ್ತಿದ್ದಾರೆ. ನಾವು ನಮ್ಮ ಪ್ರಾಮಾಣಿಕ ಪ್ರಯತ್ನ ಮಾಡ್ತೀವಿ ಎಂದು ಟಾಂಗ್ ನೀಡಿದರು.

ಅಮ್ಮಾಜ್ಜಮ್ಮಗೆ ಉಪ ಚುನಾವಣೆಗೆ ಸ್ಪರ್ಧೆ ಮಾಡೋ ಆಸಕ್ತಿ ಇಲ್ಲ ಅನ್ನೋ ವಿಚಾರದ ಕುರಿತು ಮಾತನಾಡಿದ ಹೆಚ್ ಡಿ ದೇವೇಗೌಡ, ಆ ರೀತಿಯ ಕಲ್ಪನೆ ಬೇಡ. ಎಲ್ಲರೂ ಸ್ಪರ್ಧೆಗೆ ಒಪ್ಪಿದ್ದಾರೆ. ಮಗ, ಪಕ್ಷದ ಕಾರ್ಯಕರ್ತರು ಎಲ್ಲರೂ ಒಪ್ಪಿದ್ದಾರೆ ಎಂದು ತಿಳಿಸಿದರು.


ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಮಾಜಿ ಸಚಿವ ಟಿ ಬಿ ಜಯಚಂದ್ರಗೆ ಟಿಕೆಟ್ ನೀಡಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದರೆ ಕೆಲ ದಿನಗಳ ಹಿಂದೆ ಡಾ ರಾಜೇಶ್ ಗೌಡ ಬಿಜೆಪಿ ಗೆ ಸೇರ್ಪಡೆಯಾಗಿದ್ದು, ಅವರಿಗೆ ಬಿಜೆಪಿ ಮಣೆ ಹಾಕಲಿದೆ ಎನ್ನಲಾಗಿದೆ. 2018ರ ಚುನಾವಣೆಯಲ್ಲಿ ಜೆಡಿಎಸ್ ನ ಸತ್ಯನಾರಾಯಣ ಅವರು ಕೈ ಪಕ್ಷದ ಟಿ ಬಿ ಜಯಚಂದ್ರ ಅವರ ವಿರುದ್ಧ ಗೆಲುವು ಸಾಧಿಸಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಹೀಗಾಗಿ ಅವರ ಪತ್ನಿಗೆ ಟಿಕೆಟ್ ಹಂಚಿಕೆ ಮಾಡುವ ಮೂಲಕ

ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಅನುಕಂಪದ ಆಧಾರ ಮೇಲೆ ಚುನಾವಣೆ ಎದುರಿಸಲು ಜೆಡಿಎಸ್ ನಿರ್ಧರಿಸಿದೆ. ಇನ್ನು ಶಿರಾ ಕ್ಷೇತ್ರ ಜೆಡಿಎಸ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಗಳ ನಡುವೆ ಟಫ್ ಫೈಟ್ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಹೆಚ್.ಡಿ ಕುಮಾರಸ್ವಾಮಿಗೆ ಜ್ವರ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಜ್ವರ ಶುರುವಾಗಿದೆ. ನೆನ್ನೆ ಶಿರಾ ಕ್ಷೇತ್ರದ ಜೆಡಿಎಸ್ ಸಭೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಭಾಗಿಯಾಗಿದ್ದರು. ಆದ್ರೆ ಇಂದು ಬೆಳಿಗ್ಗೆಯಿಂದ ಹೆಚ್.ಡಿ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಮನೆಯಲ್ಲಿಯೇ ಕುಮಾರಸ್ವಾಮಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here