ಅವಕಾಶವಾದಿ ರಾಜಕಾರಣ ಜೆಡಿಎಸ್‌ ನೈಜ ಸಿದ್ಧಾಂತ: ಸಿದ್ದರಾಮಯ್ಯ

0
30

ಬೆಂಗಳೂರು: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಒಪ್ಪಂದ ಮಾಡಿಕೊಳ್ಳುತ್ತಿದೆ. ಜೆಡಿಎಸ್ ನವರದ್ದು ಒಂದು ರೀತಿ ಅವಕಾಶವಾದಿ ರಾಜಕಾರಣ ಸಿದ್ದಾಂತ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್‌ನ ಒಳ‌ ಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರೆಸಿದ್ದಾರೆ ಎಂದು ಆರೋಪಿಸಿದರು.

“ಸಂಪತ್ ರಾಜ್ ಪರವೂ ಇಲ್ಲ, ವಿರುದ್ಧವೂ ಇಲ್ಲ’

ಸಂಪತ್‌ರಾಜ್ ಬಂಧನ ಕುರಿತು ಮಾತನಾಡಿದ ಅವರು, ಸಂಪತ್ ರಾಜ್ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆಯಷ್ಟೆ, ವಿಚಾರಣೆ ನಡೆಯುವ ಮೊದಲೆ ಅವರನ್ನು ಅಪರಾಧಿ ಅಥವಾ ನಿರಪರಾಧಿ ಎಂದು ನಿರ್ಧರಿಸಲಾಗುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಈ ಹಂತದಲ್ಲಿ ನಾವು ಅವರ ಪರವೂ ಇಲ್ಲ, ವಿರುದ್ಧವೂ ಇಲ್ಲ ಎಂದರು.

“ಪೂರ್ವ ತಯಾರಿ ಇಲ್ಲದೇ ಕಾಲೇಜು ಆರಂಭ”

ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರ್ಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರ್ಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರ್ಕಾರವೇ ವಿದ್ಯಾರ್ಥಿಗಳ ಸೋಂಕು ಪರೀಕ್ಷೆಯನ್ನು ಮಾಡಬೇಕು ಎಂದು ಒತ್ತಾಯಿಸಿದರು.

“ಮತ ಓಲೈಕೆಗೆ ಅಭಿವೃದ್ಧಿ ಪ್ರಾಧಿಕಾರ”

ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರು ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ. ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರ್ಕಾರಕ್ಕೆ ಇಲ್ಲ.
ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು ರೂ.25,000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವುದು ರೂ.577 ಕೋಟಿ ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರ್ಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು? ಎಂದು ಪ್ರಶ್ನಿಸಿದರು.

ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರ್ಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ ಎಂದು ದೂರಿದರು.

ಮಕ್ಕಳ ಜ್ಞಾಪಕ ಶಕ್ತಿ, ಏಕಾಗ್ರತೆ, ಚುರುಕುತನ ಮತ್ತು ಕೌಶಲ್ಯ ಅಭಿವೃದ್ಧಿ ವೃದ್ಧಿಸಲು ಆಯುರ್ವೇದದ ಉತ್ಪನ್ನವಾದ ‘ಬ್ರಹ್ಮ ಶಂಕರ ‘ ಪರಿಹಾರ ಒದಗಿಸುತ್ತದೆ . ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನುರಿತ ಮತ್ತು ಅನುಭವಿ ಆಯುರ್ವೇದದ ತಜ್ಞ ವೈದ್ಯರ ಸಹಾಯದಿಂದ ನಿರಂತರ ಸಂಶೋಧನೆಗೆ ಪ್ರೋತ್ಸಾಹ ನೀಡಿದ ಪರಿಣಾಮವಾಗಿ ನೈಸರ್ಗಿಕವಾಗಿ ಬ್ರಹ್ಮ ಶಂಕರ ರೂಪುಗೊಂಡಿದೆ.

ಬ್ರಹ್ಮ ಶಂಕರದಲ್ಲಿ ಪ್ರಧಾನವಾಗಿ ಬ್ರಾಹ್ಮೀ ಎಲೆ, ಮಂಡೂಕ ಪರಿಣಿ,ಶಂಖ ಪುಷ್ಟಿ, ಅಶ್ವಗಂಧ,ಮಾಲ್ಕಂಗನಿ,ಜಟಮಾನಸಿ,ತಗರ್ ಅಥವಾ ಸುಗಂಧ ಬಾಲಾ, ಅಮೃತ ಬಳ್ಳಿ,ಸಂಜೆ,ವೀಟ್ ಜರ್ಮ್ ಅಥವಾ ಗೋಧಿ ಭ್ರೂಣವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಂಪೂರ್ಣ ನೈಸರ್ಗಿಕವಾಗಿ ಬ್ರಹ್ಮಶಂಕರದಲ್ಲಿ ಸೇರಿಸಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿದೆ.ಬ್ರಾಹ್ಮೀ ಎಂದರೆ ಸರಸ್ವತಿ . ಮಕ್ಕಳು ಬ್ರಾಹ್ಮೀ ಮುಹೂರ್ತದಲ್ಲಿ ಓದಿದರೆ ಮರೆಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಮಕ್ಕಳ ದೇಹ ಬಹಳ ಸೂಕ್ಷ್ಮವಾಗಿದ್ದು ಬಹುಬೇಗ ಜ್ವರ,ಕೆಮ್ಮು,ಸೋಂಕುಗಳಿಗೆ ತುತ್ತಾಗುತ್ತಾರೆ.ಬ್ರಹ್ಮಶಂಕರ ನಿಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರನ್ನು ಸಧೃಡ ರನ್ನಾಗಿ ಮಾಡುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.

ಒಂದು ಆರೋಗ್ಯವಂತ, ಜ್ಞಾನವಂತ , ಬುದ್ಧಿವಂತ ಸಮಾಜಕ್ಕಾಗಿ ‘ಬ್ರಹ್ಮ ಶಂಕರ ‘ ನಿಮ್ಮ ಮಕ್ಕಳಿಗೆ ಅತ್ಯವಶ್ಯಕವಾಗಿದೆ

BUY NOW

LEAVE A REPLY

Please enter your comment!
Please enter your name here