ಡಿಕೆಶಿಯನ್ನು ಬಂಧಿಸುವಂತೆ ಇಡಿಗೆ ಫೋನ್, ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಕುಮಾರಸ್ವಾಮಿ..!

0
4249

ಡಿಕೆ ಶಿವಕುಮಾರ್ ಅವರನ್ನು ಸತತ ನಾಲ್ಕು ದಿನಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದರು. ಆದರೆ ಕೊನೆಯ ವೇಳೆಯಲ್ಲಿ ಬಂದ ಒಂದು ಫೋನ್ ಕರೆ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆಯುವಂತೆ ಮಾಡಿತ್ತು ಎಂಬ ಸ್ಪೋಟಕ ಮಾಹಿತಿಯನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಚ್ಚಿಟ್ಟಿದ್ದಾರೆ.

ಹೌದು, ಡಿಕೆಶಿ ಅವರನ್ನು ವಶಕ್ಕೆ ಪಡೆಯಬೇಕು ಎಂದು ಇಡಿ ಅಧಿಕಾರಿಗಳ ಮೇಲೆ ಫೋನ್ ಮೂಲಕ ಒತ್ತಡ ಹೇರಲಾಗಿದೆ. ಪ್ರಭಾವಿ ವ್ಯಕ್ತಿಯೊಬ್ಬರು ಇದರ ಹಿಂದಿದ್ದಾರೆ. ಅವರು ಯಾರೆಂದು ನನಗೆ ಗೊತ್ತಿದೆ ಎನ್ನುವ ಮೂಲಕ ಎಚ್‍ಡಿಕೆ ಹೊಸ ಬಾಂಬ್ ಸಿಡಿಸಿದ್ದಾರೆ.

ಇನ್ನು ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರನ್ನು ಉರುಳಿಸಲು ಆಪರೇಷನ್ ಕಮಲ ನಡೆಸಿದ ಬಿಜೆಪಿ ನಾಯಕರು 15-20 ಕೋಟಿ ರೂಪಾಯಿಗಳ ವ್ಯವಹಾರ ನಡೆಸಿದ್ರು. ಆಗ ಐಟಿ ಮತ್ತು ಇಡಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದರೆ ಇದೀಗ ಡಿಕೆಶಿ ಅವರನ್ನು ರಾಜಕೀಯ ದುರುದ್ದೇಶದಿಂದ ಬಂಧಿಸಲಾಗಿದೆ. ಆದಾಯ ತೆರಿಗೆಗೆ ಸಂಬಂಧಿಸಿದ ಅಪರಾಧವಾಗಿದ್ದರೆ ದಂಡ ಕಟ್ಟಿಸಿಕೊಳ್ಳಲಿ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿ, ಐಟಿ ಮಾರ್ಗಸೂಚಿ ಅನ್ವಯ ನಡೆದುಕೊಳ್ಳಲಿ. ಅದನ್ನು ಬಿಟ್ಟು ಬಂಧಿಸುವ ಅಗತ್ಯ ಏನಿತ್ತು..? ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡರೆ ಮಾತ್ರ ಉಳಿಗಾಲ ಎಂಬ ಸಂದೇಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಬಿಜೆಪಿ ವಿರುದ್ದ ಕಿಡಿಕಾರಿದರು.

ಇನ್ನು ಸಿಎಂ ಯಡಿಯೂರಪ್ಪನವರು ಮಹಾರಾಷ್ಟ್ರದ ಸಿಎಂ ದೇವೆಂದ್ರ ಫಡ್ನವೀಸ್ ಜೊತೆ ಮಹದಾಯಿ ಮತ್ತು ಕೃಷ್ಣ ಕುರಿತು ಚರ್ಚಿಸಲು ಹೋಗಿದ್ದಾರಾ..? ಅಥವಾ 17 ಅತೃಪ್ತ ಶಾಸಕರನ್ನು ಮುಂಬೈನಲ್ಲಿ ರಕ್ಷಿಸಿದ್ದಕ್ಕಾಗಿ ಧನ್ಯವಾದ ಹೇಳಲು ಹೋಗಿದ್ದಾರಾ..? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.

ಮತ್ತಷ್ಟು ಸುದ್ದಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು.(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here