ಆತ್ಮೀಯ ಗೆಳೆಯ ಸಿದ್ದಾರ್ಥ್ ಸಾವಿನ ಸುದ್ದಿ ನನಗೆ ಆಘಾತ ತಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿದ್ದಾರ್ಥ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, “ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ್ ಅವರ ನಿಧನದ ಸುದ್ಧಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ್ ಅವರು ಕರ್ನಾಟಕ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸಿದವರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಗಳಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ” ಎಂದು ಟ್ವೀಟ್ ಮಾಡಿದ್ದಾರೆ.