ಸಿದ್ದರಾಮಯ್ಯನಂತ ಅದೆಷ್ಟೋ ಗಿಣಿಗಳನ್ನು ದೇವೇಗೌಡರು ಬೆಳೆಸಿದ್ದಾರೆ – ಸಿದ್ದುಗೆ ಭರ್ಜರಿ ಗುದ್ದು ಕೊಟ್ಟ ಕುಮಾರಣ್ಣ..!

0
286

ರಾಜ್ಯ ರಾಜಕೀಯದಲ್ಲಿ ಇದೀಗ ಮಾಜಿ ದೋಸ್ತಿಗಳ ಕಾಳಗ ಭಾರೀ ಸದ್ದು ಮಾಡುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಗಿಣಿ ಎಂದುಕೊಂಡು ಮೈತ್ರಿ ಮಾಡಿಕೊಂಡೆವು. ಆದರೆ ಅವು ಹದ್ದಾಗಿ ಕುಕ್ಕಿದವು ಎಂದು ಸಿದ್ದರಾಮಯ್ಯ ಪರೋಕ್ಷವಾಗಿ ದೇವೇಗೌಡರನ್ನು ಹದ್ದಿಗೆ ಹೋಲಿಕೆ ಮಾಡಿದ್ರು. ಸಿದ್ದರಾಮಯ್ಯನವರ ಈ ಹೇಳಿಕೆಗೆ ಭರ್ಜರಿ ಟಾಂಗ್ ಕೊಟ್ಟಿರುವ ಮಾಜಿ ಸಿಎಂ ಕುಮಾರಸ್ವಾಮಿ ಸಿದ್ದರಾಮಯ್ಯನವರ ರಾಜಕೀಯ ಪಯಣವನ್ನು ಒಮ್ಮೆ ನೆನಪಿಸಿಕೊಟ್ಟಿದ್ದಾರೆ.

ಸಿದ್ದರಾಮಯ್ಯನವರ ಹದ್ದಿನ ಹೇಳಿಕೆಗೆ ಚನ್ನಪಟ್ಟಣದಲ್ಲಿ ಪ್ರತಿಕ್ರಿಯಿಸಿದ ಎಚ್.ಡಿ. ಕುಮಾರಸ್ವಾಮಿ, “ಎಚ್.ಡಿ. ದೇವೇಗೌಡರು ಸಿದ್ದರಾಮಯ್ಯನವರಂತಹ ಅನೇಕ ಗಿಣಿಗಳನ್ನ ಸಾಕಷ್ಟು ಬೆಳೆಸಿದ್ದಾರೆ. ಆದರೆ ಅವುಗಳೇ ಹೇಗೆ ಕುಕ್ಕಿದ್ದಾವೆಂದು ನನಗೆ ಗೊತ್ತಿದೆ. ರಾಜ್ಯದ ರಾಜಕೀಯ ಇತಿಹಾಸ ಕೆದಕಿದರೆ ಅನೇಕ ಪುರಾವೆಗಳು ಸಿಗುತ್ತವೆ. ಇನ್ನು ನಾನು ಸಿದ್ದರಾಮಯ್ಯ ಸಾಕಿರುವ ಗಿಣಿ ಅಲ್ಲ. ರಾಮನಗರ ಜಿಲ್ಲೆಯ ಜನ ನನ್ನನ್ನ ಬೆಳೆಸಿದ್ದಾರೆ. ಸಿದ್ದರಾಮಯ್ಯರಿಂದ ನಾನೇನು ಬೆಳೆದಿಲ್ಲ” ಎಂದು ಭರ್ಜರಿ ತಿರುಗೇಟು ನೀಡಿದ್ದಾರೆ.

ಇನ್ನು ನಾನು ಮುಖ್ಯಮಂತ್ರಿಯಾಗಿದ್ದು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡ ತೀರ್ಮಾನದಿಂದಲೇ ಹೊರತು ಸಿದ್ದರಾಮಯ್ಯನವರಿಂದಲ್ಲ. ಹೀಗಾಗಿಯೇ ನಾನು ಸಿಎಂ ಆಗಿದ್ದನ್ನು ಅವರಿಂದ ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ಮೈತ್ರಿ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯ ಮುಂದಾದರು. ನಾವು ರಾಜ್ಯದಲ್ಲಿ ಒಂದು ಪ್ರಾದೇಶಿಕ ಪಕ್ಷವನ್ನ ಕಟ್ಟಿ ಬೆಳೆಸಿದ್ದೇವೆ. ಇವರು ಕಾಂಗ್ರೆಸ್ ಪಕ್ಷಕ್ಕೆ ಹೋಗಿ, ಅಲ್ಲಿನ ಶಕ್ತಿಯನ್ನ ಧಾರೆ ಎರೆಸಿಕೊಂಡು ಬೆಳೆದವರು. ಅವರಿಗೆ ಜನಶಕ್ತಿ ಇದ್ದರೆ ಕಾಂಗ್ರೆಸ್ ನಿಂದ ಹೊರಬಂದು ಪಕ್ಷ ಕಟ್ಟಿ ಬೆಳೆಸಲಿ” ಎಂದು ಕುಮಾರಣ್ಣ ಸವಾಲು ಹಾಕಿದರು.

LEAVE A REPLY

Please enter your comment!
Please enter your name here