ಕುಣಿಗಲ್ ಶಾಸಕ ಡಿಕೆಶಿಗೆ ಇಡಿ ಕಸ್ಟಡಿ ವೈದ್ಯನಾಗಿದ್ದು ಏಕೆ ಗೊತ್ತಾ..?!

0
1259

ರಾಜ್ಯ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು 10 ದಿನಗಳ ಕಾಲ ಜಾರಿ ನಿರ್ದೇಶನಾಲಯದ ಕಸ್ಟಡಿಗೆ ನೀಡಿ ಇಡಿ ವಿಶೇಷ ಕೋರ್ಟ್ ನಿನ್ನೆ ಆದೇಶ ಪ್ರಕಟಿಸಿದೆ. ಈ ನಡುವೆ ಡಿಕೆಶಿ ಆರೋಗ್ಯದಲ್ಲಿಯೂ ಸಾಕಷ್ಟು ಏರುಪೇರಾಗಿದ್ದು, ಪರ್ಸನಲ್ ವೈದ್ಯರನ್ನು ಹೊಂದಲು ಡಿಕೆಶಿ ಪರ ವಕೀಲರು ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಕೋರ್ಟ್ ಅನುಮತಿ ನೀಡಿದೆ. ಅದರೆ ಅಚ್ಚರಿ ಎಂದರೆ ಡಿಕೆ ಶಿವಕುಮಾರ್ ಅವರಿಗೆ ಪರ್ಸನಲ್ ವೈದ್ಯರಾಗಿರುವವರು ಅವರ ನಾದನಿಯ ಪತಿ ಡಾ. ರಂಗನಾಥ್.

ಹೌದು, ಇಡಿ ಕಸ್ಟಡಿಯಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಚಿಕಿತ್ಸೆ ನೀಡುತ್ತಿದ್ದಾರೆ. ಕಳೆದ ಅನೇಕ ವರ್ಷಗಳಿಂದ ಡಿಕೆಶಿ ಅವರಿಗೆ ಡಾ. ರಂಗನಾಥ್ ಚಿಕಿತ್ಸೆಯನ್ನು ನೀಡುತ್ತಿದ್ದು, ಹೈ ಶೂಗರ್. ಲೋ ಬಿಪಿ ಸೇರಿದಂತೆ ಕೆಲ ಸಮಸ್ಯೆಗಳನ್ನು ಡಿಕೆಶಿ ಅನುಭವಿಸುತ್ತಿದ್ದಾರೆ. ಹೀಗಾಗಿಯೇ ಡಿಕೆ ಶಿವಕುಮಾರ್ ಅವರು ಡಾ ರಂಗನಾಥ್ ಅವರನ್ನೇ ಕಸ್ಟಡಿ ವೈದ್ಯರನ್ನಾಗಿ ನೇಮಿಸಿಕೊಂಡಿದ್ದಾರೆ.

ಇನ್ನು ಡಾ. ರಂಗನಾಥ್ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದಲ್ಲದೇ ಅವರ ಗೆಲುವಿಗೂ ಡಿಕೆಶಿ ಸಾಕಷ್ಟು ಶ್ರಮಿಸಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಡಾ. ರಂಗನಾಥ್ ಅವರು ವಿಧಾನಸಭಾ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದರು.

ಇನ್ನು ಇಡಿ ವಿಚಾರಣೆಗೆ ತಡೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿವನ್ನು ಹೈಕೋರ್ಟ್ ವಜಾಗೊಳಿಸಿದ ನಂತರ ಸತತ ನಾಲ್ಕು ದಿನಗಳ ಕಾಲ ದೆಹಲಿಯಲ್ಲಿ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ನಿನ್ನೆ ರಾತ್ರಿ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿದ್ದರು. ಆ ಬಳಿಕ ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಆರ್‍ಎಂಎಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನಂತರ ಸಂಜೆ 7ಗಂಟೆಗೆ 9 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿತ್ತು.

ಮತ್ತಷ್ಟು ಸುದ್ದಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು.(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here