ಲಡಾಕ್ ಮತ್ತು ಜಮ್ಮು-ಕಾಶ್ಮೀರ ಇನ್ನು ಕೇಂದ್ರಾಡಳಿತ ಪ್ರದೇಶಗಳು…!

0
127

ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ಜಮ್ಮು- ಕಾಶ್ಮೀರದಲ್ಲಿನ ಬೆಳವಣಿಗೆಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ. ಕಣಿವೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಜಮಾವಣೆ ಮಾಡಿದ್ದ ಕೇಂದ್ರ ಸರ್ಕಾರ ಇದೀಗ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ೩೭೦ ಮತ್ತು ೩೫A ಆರ್ಟಿಕಲ್ಸ್ ರದ್ದುಗೊಳಿಸಲಾಗಿದೆ. ಒಟ್ಟು ನಾಲ್ಕು ಮಸೂದೆಗಳನ್ನು ಮಂಡಿಸಿರುವ ಗೃಹ ಸಚಿವ ಅಮಿತ್ ಶಾ ವಿಶೇಷ ಸ್ಥಾನಮಾನ ರದ್ದು ಹಾಗೂ ಲಡಾಖ್ ಮತ್ತು ಜಮ್ಮು- ಕಾಶ್ಮೀರವನ್ನು ಕೇಂದ್ರಡಳಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಆದರೆ ಲಡಾಖ್ಗೆ ವಿಧಾನಸಭೆ ಇರುವುದಿಲ್ಲ, ಜಮ್ಮ- ಕಾಶ್ಮೀರದಲ್ಲಿ ವಿಧಾ‌ನಸಭೆಯೂ ಅಸ್ತಿತ್ವದಲ್ಲಿ ಇರುತ್ತದೆ. ಒಟ್ಟಾರೆಯಾಗಿ ಮೋದಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ಕಳೆದ ೭೦ ವರ್ಷಗಳಿಂದ ಭಾರತದಿಂದ ಕಾಶ್ಮೀರವನ್ನು ಪ್ರತ್ಯೇಕಿಸುವ ವಿಧಿಗಳನ್ನು ರದ್ದುಗೊಳಿಸುವ ಮೂಲಕ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕೇಂದ್ರದ ಈ ನಡೆ ಮುಂದಿನ ದಿನಗಳಲ್ಲಿ ಕಾಶ್ಮೀರದಲ್ಲಿ ಭಾರೀ ಪ್ರಮಾಣದ ಹಿಂಸಾಚಾರಕ್ಕೆ ಕಾರ‌ಣವಾಗುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here