ಮೋದಿ-ಶಾ ಮುಂದಿನ ಗುರಿ ಏಕರೂಪ ನಾಗರಿಕ ಸಂಹಿತೆ..?!

0
108

ನರೇಂದ್ರ ಮೋದಿ ದೇಶದ ಪ್ರಧಾನಿಯಾದ ನಂತರ ಅನೇಕ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದ್ದಾರೆ. ಈ ಹಿಂದೆ ನೋಟ್ ಬ್ಯಾನ್ ಮೂಲಕ ಕಪ್ಪು ಕುಳಗಳಿಗೆ ಶಾಕ್ ಕೊಟ್ಟಿದ್ದ ಮೋದಿ, ಸರ್ಜಿಕಲ್ ಸ್ಟೈಕ್ ಮೂಲಕ ಪಾಪಿ ಪಾಕಿಸ್ತಾನಕ್ಕೂ ತಕ್ಕ ಪಾಠ ಕಲಿಸಿದ್ರು. ಮೇಲ್ವರ್ಗದ ಬಡವರಿಗೆ ಶೇಕಡಾ 10ರಷ್ಟು ಮೀಸಲಾತಿ, ಇತ್ತೀಚೆಗೆ ತ್ರಿವಳಿ ತಲಾಖ್ ನಿಷೇಧ ಇದೀಗ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಆರ್ಟಿಕಲ್ 370 ಮತ್ತು 25(ಎ)ಗಳನ್ನು ರದ್ದುಗೊಳಿಸಿದೆ.

ಮೋದಿ ಸರ್ಕಾರದ ಈ ನಿರ್ಧಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಮೋದಿ ಹಾಗೂ ಅಮಿತ್ ಶಾ ಮುಂದಿನ ಗುರಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವ ಸಾಧ್ಯತೆ ಇದೆ ಎನ್ನುವ ಚರ್ಚೆಯೂ ಹೆಚ್ಚಿದೆ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಕುರಿತು ಬಿಜೆಪಿ ದಶಕಗಳಿಂದ ಆಸಕ್ತಿ ತೋರುತ್ತಾ ಬಂದಿದೆ. ಆದರೆ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿ ಪಕ್ಷಗಳು ಏಕರೂಪ ನಾಗರಿಕ ಸಂಹಿತೆಯ ವಿರೋಧಿಸುತ್ತಿವೆ. ಟಿಡಿಪಿ, ಬಿಎಸ್ಪಿ, ಎಎಪಿ ಕೂಡಾ ಆರ್ಟಿಕಲ್ 370 ರದ್ದು, ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿವೆ, ಹೀಗಾಗಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಲು ಬಿಜೆಪಿಗೆ ಇದು ಸಕಾಲ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಲೋಕಸಭೆಯಲ್ಲಿ ಅಗತ್ಯ ಬೆಂಬಲ ಹೊಂದಿರುವ ಬಿಜೆಪಿಗೆ ರಾಜ್ಯಸಭೆಯಲ್ಲಿ ಇನ್ನು ಸಂಪೂರ್ಣ ಬಹಮತ ಸಿಕ್ಕಿಲ್ಲ, ಹೀಗಾಗಿ, ಅನ್ಯಪಕ್ಷ ಬೆಂಬಲ ಅಗತ್ಯ. ಸಂವಿಧಾನದ 44ನೇ ವಿಧಿಯನ್ವಯ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು ಸರ್ಕಾರದ ಕರ್ತವ್ಯ” ಎಂದು ನ್ಯಾಯಮೂರ್ತಿ ವಿ.ಎಸ್ ಖಾರೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು 2003ರಲ್ಲಿ ಅಭಿಪ್ರಾಯಪಟ್ಟಿದೆ.

ಏಕರೂಪ ನಾಗರಿಕ ನೀತಿಸಂಹಿತೆ ಎಂದರೇನು?

ಜನರು ಒಳಪಡುವ ಧರ್ಮ, ಜಾತಿ ಮತ್ತು ಜನಾಂಗ/ಬುಡಕಟ್ಟುಗಳ ಹೊರತಾಗಿ ಎಲ್ಲಾ ಜನರಿಗೆ ಅನ್ವಯಿಸುವ ಒಂದೇ ವರ್ಗದ ಜಾತ್ಯತೀತ ಪೌರ ಕಾನೂನುಗಳ ಮೂಲಕ ಆಡಳಿತ ನಡೆಸುತ್ತದೆ. ಈ ಕಾನೂನು ತಮ್ಮ ಧರ್ಮ ಅಥವಾ ಜಾತಿ ಅಥವಾ ಜನಾಂಗ/ಬುಡಕಟ್ಟುಗಳ ಮೇಲೆ ಆಧಾರಿತವಾಗಿ ಪ್ರತ್ಯೇಕ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ಆಡಳಿತಕ್ಕೊಳಪಡುವ ನಾಗರಿಕರ ಹಕ್ಕನ್ನು ರದ್ದುಗೊಳಿಸುತ್ತದೆ. ಅಂತಹಾ ಸಂಹಿತೆಗಳು ಬಹುತೇಕ ಆಧುನಿಕ ರಾಷ್ಟ್ರಗಳಲ್ಲಿ ಈಗಾಗಲೇ ಜಾರಿಯಲ್ಲಿವೆ.

LEAVE A REPLY

Please enter your comment!
Please enter your name here