ಆರ್‍ಎಸ್‍ಎಸ್ ವಿರುದ್ದ ಗುಡುಗಿದ ಸಂಸದ ಶ್ರೀನಿವಾಸ್ ಪ್ರಸಾದ್..!

0
260

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಹಿರಿಯ ರಾಜಕಾರಣಿ ಶ್ರೀನಿವಾಸ್ ಪ್ರಸಾದ್ ಆರ್‍ಎಸ್‍ಎಸ್ ನಾಯಕರ ವಿರುದ್ದ ಬಹಿರಂಗವಾಗಿ ಗುಡುಗಿದ್ದಾರೆ. ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಳಗೆ ನಡೆಯುತ್ತಿರುವ ಕೆಲ ಬೆಳವಣಿಗೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್‍ಗೆ ಸವಾಲು ಹಾಕಿದ್ದಾರೆ.

ಇತ್ತೀಚೆಗೆ ದಲಿತ ಸಮುದಾಯಕ್ಕೆ ನೀಡಿರುವ ಮೀಸಲಾತಿ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶ್ರೀನಿವಾಸ್ ಪ್ರಸಾದ್, “ಆರ್‍ಎಸ್‍ಎಸ್ ಮುಖ್ಯಸ್ಥ ಭಾಗವತ್ ಅವರು ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ಜಾತೀಯತೆ ಬಗ್ಗೆ ಮಾತನಾಡಬೇಕು. ಮೀಸಲಾತಿಯ ವಿಚಾರವನ್ನೇ ವಿರೋಧಿಸುವವರ ಜೊತೆ ಚರ್ಚೆ ಮಾಡುವುದು ಏನಿದೆ..?” ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ ಮೀಸಲಾತಿ ಬಗ್ಗೆ ಮಾತನಾಡಿದರೆ ಅದನ್ನು ನಾನು ಆಕ್ಷೇಪಿಸುವುದು ನಿಶ್ಚಿತ. ಭಾಗವತ್ ಹೇಳಿಕೆ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಂತವರೂ ಮೌನ ವಹಿಸಿದರೂ ನಾವು ಮೌನ ವಹಿಸಲು ಸಾಧ್ಯವಿಲ್ಲ. ಪರಿಶಿಷ್ಟಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸಲು ನಾನು ವಿರೋಧಿಸುವುದಿಲ್ಲ. ಒಳಮೀಸಲಾತಿಯ ಅನುಷ್ಠಾನಕ್ಕೆ ಸಂವಿಧಾನದ ಮಾನ್ಯತೆ ಬೇಕಿದೆ. ಇದನ್ನು ವೈಜ್ಞಾನಿಕ ತಳಹದಿಯ ಮೇಲೆ ರೂಪಿಸಬೇಕಿದೆ. ಮೀಸಲಾತಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಮಂಡಲ್ ಆಯೋಗದ ರೀತಿ ಉನ್ನತ ಮಟ್ಟದ ಆಯೋಗ ರಚಿಸಬೇಕು. ಜಾತೀಯತೆ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೂ ಮೀಸಲಾತಿ ಇರಲೇಬೇಕು ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here