ಮಹಾತ್ಮ ಗಾಂಧಿಯನ್ನು ಅವಮಾನಿಸಿದ್ದಕ್ಕಾಗಿ ನಳಿನ್‍ಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ..?!

0
193

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಸಾರ್ವಜನಿಕವಾಗಿ ಅವಹೇಳನ ಮಾಡಿದ್ದಕ್ಕಾಗಿ ಕರಾವಳಿಯ ಬಿಜೆಪಿ ಮುಖಂಡ ಮತ್ತು ದಕ್ಷಿಣ ಕನ್ನಡ ಸಂಸದ ನಳಿನ್‍ಕುಮಾರ್ ಕಟೀಲ್‍ಗೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ದೊರೆತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಟೀಕಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಹೇಳಿದ್ದರು, ಆದರೆ ಇದೀಗ ತಾವು ಹೇಳಿದ ಮಾತು ಮರೆತು ಮಹಾತ್ಮ ಗಾಂಧೀಜಿಗೆ ಅವಮಾನ ಮಾಡಿದ ನಳಿನ್ ಕುಮಾರ್ ಕಟೀಲ್ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡುವ ಮೂಲಕ ತಾವು ಪೊಳ್ಳು ಗಾಂಧಿವಾದಿಗಳು ಎಂಬುದನ್ನು ಸಾಭೀತು ಪಡಿಸಿದ್ದಾರೆ. ಇನ್ನು ‘ಭಾರತೀಯ ಜೂಟ್ ಪಾರ್ಟಿ’ಗೆ ಮಾತ್ರ ಇಂತಹ ಶಕ್ತಿ ಇರುವುದು ಎಂದು ಕಾಂಗ್ರೆಸ್ ಮುಖಂಡ ರಮಾನಾಥ್ ರೈ ವ್ಯಂಗ್ಯವಾಡಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದ ನಳಿನ್ ಕುಮಾರ್ ಹೇಳಿಕೊಳ್ಳುವಂತ ಯಾವುದೇ ಸಾಧನೆ ಮಾಡಿಲ್ಲ. ಆದರೂ ಅವರಿಗೆ ಪ್ರಮೋಷನ್ ಸಿಕ್ಕಿದೆ. ನಳಿನ್ ಕುಮಾರ್ ಕಟೀಲ್ ಯಾವುದೇ ಸಾಧನೆ ಮಾಡಿದ ಚರಿತ್ರೆ ಇತಿಹಾಸವೂ ಇಲ್ಲ. ಇದು ನಿಜಕ್ಕೂ ವಿಪರ್ಯಾಸವೇ ಸರಿ ಎಂದು ಟೀಕಿಸಿದರು. ಇನ್ನು ನಮ್ಮ ಪ್ರಧಾನಿಗೆ ಭೂತಾನ್‍ಗೆ ಭೇಟಿ ನೀಡಲು ಸಮಯವಿದೆ. ಆದರೆ ರಾಜ್ಯದ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಸಮಯವಿಲ್ಲ. ರಾಜ್ಯದ ಜನತೆ 25 ಸಂಸದರನ್ನು ನೀಡಿದರು ಮೋದಿ ಸರ್ಕಾರ ರಾಜ್ಯವನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂದು ಹರಿಹಾಯ್ದರು.

LEAVE A REPLY

Please enter your comment!
Please enter your name here