ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೀಡಲಾಗುವಂತ ‘ರಾಷ್ಟ್ರ ಮಟ್ಟದ ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ರಾಜ್ಯದ ಇಬ್ಬರು ಪ್ರೌಢಶಾಲಾ ಶಿಕ್ಷಕರು ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಎಲೆಕ್ಯಾತನ ಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ಬಿ.ಎಸ್. ಶಶಿಕುಮಾರ್ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬೆಸೂರು ಸರ್ಕಾರಿ ಪ್ರೌಢ ಶಾಲೆಯ ಸುರೇಶ್ ಮರಕಾಲ ಅವರನ್ನು 2018ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಕೇಂದ್ರ ಮಾನವ ಸಂಪನ್ಮೂಲ ಮಂತ್ರಾಲಯ ಆಯ್ಕೆ ಮಾಡಿದೆ.
ಈ ಕುರಿತು ಮಾಹಿತಿ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ, 2018ರ ಅತ್ಯುತ್ತಮ ರಾಷ್ಟ್ರ ಪ್ರಶಸ್ತಿ ಈ ಬಾರಿ ರಾಜ್ಯದ ಇಬ್ಬರು ಶಿಕ್ಷಕರಿಗೆ ಲಭಿಸಿದ್ದು, ರಾಜ್ಯದ ಶಿಕ್ಷಕರಿಗೆ ಸಿಕ್ಕ ಮನ್ನಣೆ ಇದಾಗಿದೆ. ಕಲಿಯಲ್ಲಿ ಅಳವಡಿಕೊಂಡ ಗುಣಮಟ್ಟ ಮತ್ತು ಸಂಪನ್ಮೂಲಗಳ ಸದ್ಬಳಕೆಯಲ್ಲಿ ಈ ಶಿಕ್ಷಕರು ದೇಶಕ್ಕೆ ಮಾದರಿಯಾಗಿದ್ದಾರೆ ಎನ್ನಲಾಗಿದೆ.