ಬಸ್ ಅ’ಪಘಾತ ತಡೆಗೆ ಆಧುನಿಕ ವ್ಯವಸ್ಥೆ ಜಾರಿ: ಡಿಸಿಎಂ ಸವದಿ

0
147

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಅ’ಪಘಾತಗಳನ್ನು ತಪ್ಪಿಸಲು ವಿಶೇಷ ವ್ಯವಸ್ಥೆ ಜಾರಿಗೆ ಬರಲಿವೆ ಎಂದು ಸಾರಿಗೆ ಸಚಿವ ಲಕ್ಷಣ್ ಸವದಿ ತಿಳಿಸಿದರು.

ಬೆಂಗಳೂರಿನಲ್ಲಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಅವರು, ಬಸ್ಸುಗಳ ಎದುರು ಆ’ಕಸ್ಮಿಕವಾಗಿ ಇತರ ವಾಹನಗಳು ಅಥವಾ ವ್ಯಕ್ತಿಗಳು ಅಡ್ಡ ಬಂದಲ್ಲಿ ಚಾಲಕರಿಗೆ ಎ’ಚ್ಚರಿಕೆಯ ಸೂಚನೆ ನೀಡುವ ಮತ್ತು ಸ್ವಯಂಚಾಲಿತವಾಗಿಯೇ ಬ್ರೇಕ್ ಹಾಕಿ ಅ’ಪಘಾತ ತಪ್ಪಿಸುವುದಕ್ಕೆ ಸಹಾಯವಾಗುವಂತ ಪ್ರಯೋಗಗಳು ಪ್ರಾಯೋಗಿಕ ಹಂತದಲ್ಲಿದೆ ಎಂದು ತಿಳಿಸಿದರು.

ಅ’ಪಘಾತಗಳ ಪರಿಹಾರವಾಗಿ ರಾಜ್ಯದಲ್ಲಿ ಪ್ರತಿವರ್ಷ ಸುಮಾರು 100 ಕೋಟಿ ರೂಪಾಯಿಗಿಂತ ಹೆಚ್ಚು ಹಣ ನಮ್ಮ ಸಾರಿಗೆ ಸಂಸ್ಥೆಗಳಿಂದ ವ್ಯಯವಾಗುತ್ತಿದೆ. ಅಷ್ಟೇಅಲ್ಲ, ಅನೇಕ ಸಾವು-ನೋವುಗಳಿಗೂ ಈ ಅಪಘಾತಗಳು ಕಾರಣವಾಗುತ್ತಿವೆ. ಹಲವು ಸಂದರ್ಭಗಳಲ್ಲಿ ಇತರ ವಾಹನ ಚಾಲಕರು ನಡೆಸುವ ನಿರ್ಲಕ್ಷ್ಯದ ಚಾಲನೆಯಿಂದಾಗಿ ಉಂಟಾಗುವ ಅ’ಪಘಾತಗಳಲ್ಲಿ ವಿನಾಕಾರಣ ನಮ್ಮ ಸರ್ಕಾರಿ ಸಾರಿಗೆ ಸಂಸ್ಥೆಗಳು ಪರಿಹಾರ ನೀಡುವಂತಹ ಸಂದರ್ಭಗಳೂ ಎದುರಾಗಿವೆ. ಇವುಗಳನ್ನು ತಪ್ಪಿಸಲು ಅಪಘಾತಗಳ ಮುನ್ಸೂಚನೆ ನೀಡುವಂಥ ಉಪಕರಣಗಳನ್ನು ಬಸ್ಸುಗಳಲ್ಲಿ ಅಳವಡಿಸಲು ಸೂಚಿಸಲಾಗಿತ್ತು. ಅದರಂತೆ ಕೆಲವು ಹೈಟೆಕ್ ಸಂಸ್ಥೆಗಳೊಂದಿಗೆ ನಮ್ಮ ಸಾರಿಗೆ ಅಧಿಕಾರಿಗಳು ಕಾರ್ಯನಿರತರಾಗಿದ್ದಾರೆ. ಈಗಾಗಲೇ ಇಂತಹ ಉಪಕರಣಗಳನ್ನು ಅಭಿವೃದ್ಧಿಪಡಿಸಿದ ಸಂಸ್ಥೆಗಳ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಈ ತಂತ್ರಜ್ಞಾನವನ್ನು ಶೀಘ್ರದಲ್ಲಿಯೇ ಪಡೆದುಕೊಳ್ಳಲು ಚಿಂತಿಸಲಾಗಿದೆ ಎಂದು ಸವದಿ ಅವರು ಸ್ಪಷ್ಟಪಡಿಸಿದರು.

ಕೆಲವು ದುಬಾರಿ ಖಾಸಗಿ ಕಾರುಗಳಲ್ಲಿ ಇಂತಹ ತಂತ್ರಜ್ಞಾನ ಅಳವಡಿಸಿರುವುದರಿಂದ ರಾತ್ರಿ ವೇಳೆಯಲ್ಲಿ ಒಂದು ವೇಳೆ ಚಾಲಕರಿಗೆ ನಿದ್ದೆಯ ಮಂಪರು ಕವಿದಂತಾದರೆ ತಕ್ಷಣವೇ ಎಚ್ಚರಿಕೆಯ ಸೂಚನೆ ನೀಡುವಂತಹ ಮತ್ತು ಆಕಸ್ಮಿಕವಾಗಿ ವಾಹನಗಳು ಅಥವಾ ವ್ಯಕ್ತಿಗಳು ಎದುರಿಗೆ ಅಡ್ಡಬಂದರೆ ತಂತಾನಾಗಿಯೇ ಬ್ರೇಕ್ ಹಾಕುವಂತಹ ವ್ಯವಸ್ಥೆ ಜಾರಿಗೆ ಬಂದಿದೆ. ಇಂತಹ ಆಧುನಿಕ ಪ್ರಯೋಗ ನಮ್ಮ ಸರ್ಕಾರಿ ಸಾರಿಗೆ ಬಸ್ಸುಗಳಲ್ಲೂ ಯಶಸ್ವಿಯಾದರೆ ಹಲವು ರೀತಿಯ ಅನುಕೂಲ ಸಾಧ್ಯವೆಂದು ತಿಳಿಸಿದರು

ಕೊರಿಯರ್ ಸೇವೆಯನ್ನೂ ಪ್ರಾರಂಭಿಸುವುದಕ್ಕೆ ಚಿಂತನೆ

ಲಾಕ್‍ಡೌನ್ ನಂತರದಲ್ಲಿ ಈಗಾಗಲೇ ಶೇಕಡಾ 60 ರಷ್ಟು ಬಸ್ ಸಂಚಾರಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ತಿಂಗಳು ಕೊರಿಯರ್ ಸೇವೆಯನ್ನೂ ನಮ್ಮ ಸಾರಿಗೆ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿ ಉಳಿತಾಯದ ಕ್ರಮವಾಗಿ ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕಲಾಗಿದೆ. ಹೊಸ ಸಿಬ್ಬಂದಿಗಳ ನೇಮಕವನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ ಎಂದು ವಿವರಿಸಿದರು.

ಇನ್ನು ಸಭೆಯಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಅಂಜುಂ ಪರ್ವೇಜ್, ಕ.ರಾ.ರ.ಸಾ.ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶಿವಯೋಗಿ ಕಳಸದ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಭದ್ರತಾ ಮತ್ತು ಜಾಗೃತಾ ನಿರ್ದೇಶಕರಾದ ಡಾ. ಅರುಣ್ ಸೇರಿದಂತೆ ಅನೇಕ ಭಾಗಿಯಾಗಿದ್ದರು

LEAVE A REPLY

Please enter your comment!
Please enter your name here