ಕುರುಕ್ಷೇತ್ರ ಸಿನಿಮಾ ಸಂಭಾವನೆಯನ್ನು ಪ್ರವಾಹ ಸಂತ್ರಸ್ತರಿಗೆ ನೀಡಿದ ನಿಖಿಲ್ ಕುಮಾರಸ್ವಾಮಿ.!

0
389

ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತಾವು ನಟಿಸಿದ ಕುರುಕ್ಷೇತ್ರ ಚಿತ್ರದಿಂದ ಬಂದ ಸಂಭಾವನೆಯನ್ನು ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ನೆರವಿಗೆ ನೀಡಿದ್ದಾರೆ. ಆ ಮೂಲಕ ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ಮಿಡಿದಿದ್ದಾರೆ.

ಇನ್ನು “ಕುರುಕ್ಷೇತ್ರ ಸಿನಿಮಾದಿಂದ ಬಂದ ಸಂಭಾವನೆಯನ್ನು ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರ ನೆರವಿಗೆಂದು ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ. ಆದರೆ ಎಷ್ಟು ಸಂಭಾವನೆ ಬಂದಿದೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಕುರುಕ್ಷೇತ್ರ ಸಿನಿಮಾದಲ್ಲಿ ಅಭಿಮನ್ಯು ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ಇನ್ನು ನಿಖಿಲ್ ಕುಮಾರಸ್ವಾಮಿ ಮಾತ್ರವಲ್ಲದೆ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರೂ ಸಹ ತಮ್ಮ ಒಂದು ತಿಂಗಳ ಸಂಬಳವನ್ನು ಪ್ರವಾಹ ಸಂತ್ರಸ್ತರ ನೆರವಿಗೆ ನೀಡಿದ್ದಾರೆ. ಅದೇ ರೀತಿ ದೇವೇಗೌಡ ಅವರು ತಮ್ಮ ಸ್ವಂತ ಖಾತೆಯಿಂದ ಎರಡು ಲಕ್ಷ ರೂಪಾಯಿ ಹಣವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಅವರು ನೆರೆ ಸಂತ್ರಸ್ತರಿಗಾಗಿ ಪಕ್ಷದ ವತಿಯಿಂದ ಹಲವು ಅಗತ್ಯ ಸಾಮಗ್ರಿಗಳನ್ನು ನೆರೆ ಪೀಡಿತ ಜಿಲ್ಲೆಗಳಿಗೆ ಕೆಲವು ದಿನಗಳ ಹಿಂದಷ್ಟೆ ಕಳುಹಿಸಿದ್ದರು. ಅಗತ್ಯ ವಸ್ತುಗಳ ತುಂಬಿದ್ದ ಲಾರಿಗಳು ಜೆಪಿ ನಗರದ ಪಕ್ಷದ ಕಚೇರಿಯಿಂದ ನೆರೆ ಪೀಡಿತ ಪ್ರದೇಶಗಳಿಗೆ ತೆರಳಿದ್ದವು.

LEAVE A REPLY

Please enter your comment!
Please enter your name here