ಮೋದಿ ಸರ್ಕಾರದಲ್ಲಿರುವ 89 ಕಾರ್ಯದರ್ಶಿಗಳಲ್ಲಿ ಕೇವಲ ಒರ್ವ ದಲಿತ..!

0
104

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 89 ಕಾರ್ಯದರ್ಶಿಗಳ ಪೈಕಿ ಕೇವಲ ಒಬ್ಬರು ಮಾತ್ರ ದಲಿತ ವರ್ಗಕ್ಕೆ ಸೇರಿದವರಾಗಿದ್ದಾರೆ ಎಂಬ ಅಚ್ಚರಿಯ ಮಾಹಿತಿಯೊಂದು ಇದೀಗ ಹೊರಬಿದ್ದಿದೆ. ಇನ್ನು ಮೂವರು ಪರಿಶಿಷ್ಟ ಪಂಗಡಗಳಿಗೆ ಸೇರಿದ್ದಾರೆನ್ನಲಾಗಿದೆ. ಅದೇ ರೀತಿ ಆದರೆ ಯಾವೊಬ್ಬ ಕಾರ್ಯದರ್ಶಿಯೂ ಇತರ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿಲ್ಲ ಎಂದು ಕೇಂದ್ರ ಸರಕಾರ ಸಂಸತ್ತಿಗೆ ನೀಡಿದ ಮಾಹಿತಿಯಲ್ಲಿ ತಿಳಿಸಿದೆ.

ಇನ್ನು ಕೇಂದ್ರ ಸರ್ಕಾರದ ಸಚಿವಾಲಯ ಹಾಗೂ ಇಲಾಖೆಗಳಲ್ಲೂ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಹಾಗೂ ನಿರ್ದೇಶಕ ಹುದ್ದೆಗಳಲ್ಲೂ ಪರಿಶಿಷ್ಟ ಜಾತಿ/ಪಂಗಡ, ಒಬಿಸಿ ಅಧಿಕಾರಿಗಳು ಅತ್ಯಂತ ಕಡಿಮೆ ಸಂಖ್ಯೆಯಲ್ಲಿದ್ದಾರೆ ಎನ್ನಲಾಗಿದೆ. ಒಟ್ಟು 275 ಜಂಟಿ ಕಾಂರ್ದರ್ಶಿಗಳ ಪೈಕಿ 13 ಮಂದಿ ಪರಿಶಿಷ್ಟ ಜಾತಿಗೆ ಸೇರಿದವರು, ಒಂಬತ್ತು ಮಂದಿ ಪರಿಶಿಷ್ಟ ಪಂಗಡಗಳಿಗೆ ಸೇರಿದವರು ಹಾಗೂ 19 ಮಂದಿ ಒಬಿಸಿ ವಿಭಾಗಕ್ಕೆ ಸೇರಿದವರಾಗಿದ್ದಾರೆ.

LEAVE A REPLY

Please enter your comment!
Please enter your name here