‘ಸಿದ್ದರಾಮಯ್ಯನವರೇ ನಮ್ಮ ಮೊದಲ ಶತ್ರು’ ಸಿದ್ದು ವಿರುದ್ಧ ಗುಡುಗಿದ ಎಚ್‍ಡಿಕೆ..!

0
282

ಮಾಜಿ ಸಿಎಂ ಸಿದ್ದರಾಮಯ್ಯನವರೇ ನಮ್ಮ ಮೊದಲ ಶತ್ರು. ನಾನು ಮುಖ್ಯಮಂತ್ರಿಯಾಗಿದ್ದು ಸಿದ್ದರಾಮಯ್ಯ ಅವರಿಗೆ ಇಷ್ಟ ಇರಲಿಲ್ಲ. ನನ್ನ ಏಳಿಗೆಯನ್ನು ಸಹಿಸಿಕೊಳ್ಳಲು ಅವರಿಗೆ ಆಗಲಿಲ್ಲ. ಇದೇ ಕಾರಣಕ್ಕಾಗಿ ನಾನು ಮುಖ್ಯಮಂತ್ರಿಯಾಗಿದ್ದಾಗ ಹೆಜ್ಜೆ, ಹೆಜ್ಜೆಗೂ ನನಗೆ ತೊಂದರೆ ಕೊಟ್ಟರು. ತಮ್ಮ ಆಪ್ತರನ್ನು ಛೂ ಬಿಟ್ಟು ಬಂಡಾಯ ಎಬ್ಬಿಸಿದ್ರು. ಹೀಗಾಗಿ ಬಿಜೆಪಿಗಿಂದ ಸಿದ್ದರಾಮಯ್ಯನವರೇ ನಮಗೆ ಮೊದಲ ಶತ್ರು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ದ ಗುಡುಗಿದ್ದಾರೆ.

ಮೈತ್ರಿ ಸರ್ಕಾರ ಪತನವಾದ ಬಳಿಕ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಾಯಕ ವಾಕ್ ಸಮರ ಮುಂದುವರೆದಿದೆ. ಈ ನಡುವೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ನೇರವಾಗೇ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ.

ನನ್ನ ಮುಖ್ಯಮಂತ್ರಿ ಕುರ್ಚಿ ಹೋಗಲು ಸಿದ್ದರಾಮಯ್ಯ ಅವರೇ ಕಾರಣ. ಪೋನ್ ಟ್ಯಾಪಿಂಗ್‍ನಲ್ಲಿ ನನ್ನನ್ನು ಸಿಲುಕಿಸಲು ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದಾರೆ. ಹೀಗಾಗಿಯೇ ಅದನ್ನು ಸಿಬಿಐಗೆ ವಹಿಸಲು ಆಗ್ರಹಿಸಿದ್ರು. ಇನ್ನೂ ಸಿದ್ದರಾಮಯ್ಯ ಸೂಚನೆಯಂತೆ ಅತೃಪ್ತ ಶಾಸಕರು ರಾಜೀನಾಮೆ ನೀಡಿದ್ದರು. ಇಂತಹ ಶಾಸಕರನ್ನು ವಿಶೇಷ ವಿಮಾನದಲ್ಲಿ ಮುಂಬೈಗೆ ಕಳುಹಿಸಿಕೊಟ್ಟಿದ್ದೇ ಸಿದ್ದರಾಮಯ್ಯ ಎಂದು ಆರೋಪಿಸಿದರು.

LEAVE A REPLY

Please enter your comment!
Please enter your name here