ಎಸ್‍ಎಸ್‍ಎಲ್‍ಸಿಯಲ್ಲಿ ಪಿ.ಯು. ಮಂಡಳಿ ವಿಲೀನ

0
384

ರಾಜ್ಯದ ಎಸ್‍ಎಸ್‍ಎಲ್ ಮಂಡಳಿಯಲ್ಲಿ ಪಿಯ ಮಂಡಳಿಯನ್ನು ವಿಲೀನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಈ ವಿಲೀನ ಪ್ರಕ್ರಿಯೆ ಡಿಸೆಂಬರ್ ವೇಳೆಗೆ ಕೊನೆಗೊಳ್ಳಲಿದೆ. ನಂತರ 2020ರ ಎಸ್‍ಎಸ್‍ಎಲ್‍ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳನ್ನು ಒಂದೇ ಮಂಡಳಿ ನೆಡಸಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶಿಕ್ಷಣ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಕರ್ನಾಟಕ ಮಾಧ್ಯಮಿಕ ಶಾಲಾ ಪರೀಕ್ಷಾ ಮಂಡಳಿಯೇ ಎಸ್‍ಎಸ್‍ಎಲ್‍ಸಿ ಮತ್ತು ಪಿಯು ಪರೀಕ್ಷೆಗಳನ್ನು ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು ಎರಡೂ ಮಂಡಳಿಗಳನ್ನು ವಿಲೀನಗೊಳಿಸುವ ಪ್ರಸ್ತಾವದ ಬಗ್ಗೆ ಚರ್ಚೆ ನಡೆದಿದೆ. ಎರಡೂ ಮಂಡಳಿಗಳನ್ನು ವಿಲೀನಗೊಳಿಸುವ ಸಲುವಾಗಿ ಈಗಾಗಲೇ 50 ಕೋಟಿ ರೂಪಾಯಿಗಳನ್ನು ತೆಗೆದಿರಿಸಲಾಗಿದೆ.

LEAVE A REPLY

Please enter your comment!
Please enter your name here