1 ತಿಂಗಳ ಕಾಲ ಚಾರ್ಮಾಡಿಯಲ್ಲಿ ರಸ್ತೆ ಸಂಚಾರ ನಿಷೇಧ

0
135

ಮಲೆನಾಡು ಪ್ರದೇಶದಲ್ಲಿ ಮತ್ತೆ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್ ನಲ್ಲಿ ಒಂದು ತಿಂಗಳ ಕಾಲ ಸಂಚಾರವನ್ನು ನಿಷೇಧಿಸಲಾಗಿದೆ. ಭಾರೀ ಮಳೆಯಿಂದ ಈಗಾಗಲೇ ಸತತವಾಗಿ ಗುಡ್ಡ ಕುಸಿಯುತ್ತಿದೆ. ಇದರ ಬೆನ್ನಲ್ಲೇ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು ಕೊಡಗು, ಚಿಕ್ಕಮಗಳೂರು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ರೆಡ್ ಅಲರ್ಟ್ ಘೋಷಣೆಯಾಗುತ್ತಿದ್ದಂತೆ ಮಂಗಳೂರು ಜಿಲ್ಲಾಧಿಕಾರಿ ಆಗಸ್ಟ್ 15ರಿಂದ ಸೆಪ್ಟೆಂಬರ್ 14ರವರೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತದಿಂದ ಈಗಾಗಲೇ 20ಕ್ಕೂ ಹೆಚ್ಚು ಮನೆಗಳು ಬಿದ್ದಿವೆ. ಅಲ್ಲದೇ ರಸ್ತೆಯಲ್ಲಿ ಬಿದ್ದಿದ್ದ ಮಣ್ಣು ತೆರವು ಮಾಡುವ ಕಾರ್ಯಾಚರಣೆಗೆ ಮತ್ತೆ ಅಡ್ಡಿಯುಂಟಾಗಿದೆ.

ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಂಚಾರ ನಿಷೇಧಿಸಲಾಗಿದೆ. ಚಿಕ್ಕಮಗಳೂರು ರಸ್ತೆಯಲ್ಲಿ ಸಂಚಾರ ದುರಸ್ತಿಗೆ ಸುಮಾರು ಒಂದು ತಿಂಗಳ ಸಮಯವಕಾಶ ಅಗತ್ಯವಿದೆ. ಕೆಲವೆಡೆ ರಸ್ತೆಗಳು ಸಂಪೂರ್ಣ ಹಾಳಾಗಿವೆ.

LEAVE A REPLY

Please enter your comment!
Please enter your name here