ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ಹಾಗೂ 35(ಎ) ವಿಧಿಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರದ್ದುಗೊಳಿಸುವ ಮೂಲಕ, ಭಾರತದ ಪ್ರಜಾತಾಂತ್ರಿಕ ಇತಿಹಾಸದಲ್ಲಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿದೆ. ರಾಜ್ಯದ ಸ್ಥಾನಮಾನ ಹೊಂದಿದ್ದ ಜಮ್ಮು ಕಾಶ್ಮೀರ ಎರಡು ಭಾಗಗಳಾಗಿ ವಿಂಗಡಿಸಿ, ಕೇಂದ್ರಾಡಳಿತ ಪ್ರದೇಶವಾಗಿ ಪುನರ್ ನಿರ್ಮಾಣಗೊಂಡಿವೆ. ಸಾಮಾಜಿಕ ಜಾಲತಾಣದಲ್ಲಿ ಜಮ್ಮು ಕಾಶ್ಮೀರದ ವಿಷಯ ಕಾಡ್ಗಿಚ್ಚಿನಂತೆ ಹಬ್ಬಿ, ಸಾಕಷ್ಟು ಚರ್ಚೆ ಕಾರಣವಾಗಿದೆ. ಇನ್ನು ಅದರಲ್ಲಿ ಹಲವು ಸುಳ್ಳು ಸುದ್ದಿಗಳೂ ಹರಿದಾಡುತ್ತಿವೆ.

ಆರ್ಟಿಕಲ್ 30ಎ ಕುರಿತಾಗಿ ಫೇಸ್ಬುಕ್, ಟ್ವಿಟ್ಟರ್, ವಾಟ್ಸ್ಆಫ್ಗಳಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದೆ. ಸಂವಿಧಾನದ ಆರ್ಟಿಕಲ್ 35 ಪ್ರಕಾರ ಮದರಸಾಗಳಲ್ಲಿ ಕುರಾನ್ ಕಲಿಸಬಹುದು, ಆದರೆ ಆರ್ಟಿಕಲ್ 30(ಎ) ಪ್ರಕಾರ ಭಗವದ್ಗೀತೆಯನ್ನು ಶಾಲೆಗಳಲ್ಲಿ ಕಲಿಸುವಂತಿಲ್ಲ, ಇದಕ್ಕೆ ಕಾಂಗ್ರೆಸ್ ನಾಯಕ ಜವಾಹಾರ್ಲಾಲ್ ನೆಹರು ಕಾರಣ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಈ ಮಾಹಿತಿ ಸಂಪೂರ್ಣ ಸುಳ್ಳಾಗಿದೆ. ಸಂವಿಧಾನದ 30 ನೇ ವಿಧಿಯಲ್ಲಿ ಆರ್ಟಿಕಲ್ 30(ಎ) ಎಂಬುದೇ ಇಲ್ಲ. ಬದಲಿಗೆ 30 (1ಎ) ಎಂದಿದೆ.