ಬಿಜೆಪಿಯಲ್ಲಿ ಭಾರೀ ಬಂಡಾಯ, ಸಿದ್ದು ಭೇಟಿಗೆ ಮುಂದಾದ ಉಮೇಶ್ ಕತ್ತಿ..!

0
328

ಮಹತ್ವದ ಬೆಳವಣಿಗೆಯೊಂದರಲ್ಲಿ ಹುಕ್ಕೆರಿ ಶಾಸಕ ಉಮೇಶ್ ಕತ್ತಿ ರಾಜ್ಯ ಬಿಜೆಪಿ ನಾಯಕರ ವಿರುದ್ದ ತಿರುಗಿ ಬಿದ್ದಿದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನಲೇ ಬಂಡಾಯವೆದ್ದಿರುವ ಕತ್ತಿ, ಸರ್ಕಾರ ಉರುಳಿಸಲು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ಪ್ರಯತ್ನ ನಡೆಸಿದ್ದಾರೆ.

ಇನ್ನು ಉಮೇಶ್ ಕತ್ತಿ ಮತ್ತು ಸಿದ್ದರಾಮಯ್ಯ ಭೇಟಿಯಾದರೆ ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ಸಿಗುವ ಸಾಧ್ಯತೆ ಇದೆ. ಇನ್ನು ಉಮೇಶ್ ಕತ್ತಿ ಅವರು ಹೊಸ ಪಕ್ಷ ಸ್ಥಾಪನೆಗೆ ಯೋಜನೆ ಹಾಕಿದ್ದಾರೆ ಎಂಬ ಸುದ್ದಿಯೂ ಎಲ್ಲೆಡೆ ಕೇಳಿ ಬರುತ್ತಿದೆ. ಉಮೇಶ್ ಕತ್ತಿ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ನಡೆಸಿದ ಮಾತುಕತೆ ಫಲಪ್ರದವಾಗಲಿಲ್ಲವೆನ್ನಲಾಗಿದೆ. ತನ್ನ ಬಳಿ 6 ಮಂದಿ ಶಾಸಕರಿದ್ಧಾರೆ ಎಂದು ಉಮೇಶ್ ಕತ್ತಿ ಎಚ್ಚರಿಕೆಯ ಸಂದೇಶ ರವಾನಿಸಲು ನೋಡಿದ್ದಾರೆ. ಆದರೆ, ಅದಕ್ಕೂ ಯಡಿಯೂರಪ್ಪ ಸೊಪ್ಪು ಹಾಕಿಲ್ಲ. ಹೀಗಾಗಿ ಬಂಡಾಯ ತೀವ್ರ ಸ್ವರೂಪ ಪಡೆದಿದೆ ಎನ್ನಲಾಗಿದೆ.

ಯಡಿಯೂರಪ್ಪ ಮಾತಿನಿಂದ ಸಿಡಿದೆದ್ದಿರುವ ಉಮೇಶ್ ಕತ್ತಿ ಅವರು ಹೊಸ ಪಕ್ಷದ ಸ್ಥಾಪನೆಗೆ ಮುಂದಾಗಿದ್ದಾರೆನ್ನಲಾಗಿದೆ. ಜನತಾ ಪರಿವಾರದ ಮಾಜಿ ನಾಯಕರಾಗಿರುವ ಉಮೇಶ್ ಕತ್ತಿ ಅವರಿಗೆ ಉತ್ತರ ಕರ್ನಾಟಕ ಜನತಾ ಪಕ್ಷ ಎಂಬ ಹೊಸ ಪಕ್ಷ ಹುಟ್ಟು ಹಾಕುವ ಐಡಿಯಾ ಇದೆ. ಇನ್ನು ಉಮೇಶ್ ಕತ್ತಿ ಅವರ ಮುಂದಿನ ನಡೆ ಹಾಗೂ ಅವರ ಜೊತೆ ಎಷ್ಟು ಮಂದಿ ಬಿಜೆಪಿ ಶಾಸಕರು ಹೆಜ್ಜೆ ಹಾಕುತ್ತಾರೆ ಎಂಬುದು ಮುಂಬರುವ ದಿನಗಳಲ್ಲಿ ಸ್ಪಷ್ಟವಾಗಲಿದೆ.

LEAVE A REPLY

Please enter your comment!
Please enter your name here