“ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರ್ ಅವ್ರನ್ನೇ ಸೋಲಿಸಿದ ಕುತಂತ್ರಿ ಸಿದ್ದರಾಮಯ್ಯ ನೀವಲ್ಲವೇ”.!?

0
66

ಬೆಂಗಳೂರು: ಚುನಾವಣೆ ಎದುರಾಗ್ತಿದ್ದಂತೆ ಆಡಳಿತ, ವಿರೋಧ ಪಕ್ಷಗಳ ನಾಯಕರ ನಡುವೆ ಮಾತಿನ ಸಮರದ ಭರಾಟೆ ಕೇಳ್ಬೇಕೆ.. ಜನರನ್ನು ಮೆಚ್ಚಿಸಲು ಫಂಚಿಂಗ್ ಪದಗಳ ಬಳಕೆ ಮಾಡಿ ಭುಜ ತಟ್ಟಿಕೊಳ್ಳುತ್ತಾರೆ.ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸರಣಿ ಟ್ವೀಟ್ ಮಾಡುವ ಮೂಲಕ ಖಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಟ್ವಿಟರ್ ಘಟಕ, ಸಿದ್ದರಾಮಯ್ಯನವರೇ, ನೀವು ಬಳಸುತ್ತಿರುವ ಪದಗಳೇ ಯಾರು ʼಕಾಡು ಮನುಷ್ಯʼ ಎಂಬುದನ್ನು ಸಾಬೀತು ಪಡಿಸುತ್ತಿದೆ. ಕಾಡುಮನುಷ್ಯ, ನಾಲಾಯಕ್, ಬೀದಿ ಅಲೆಯುತ್ತಿದ್ದವ, ಎಲುಬಿಲ್ಲದವ ಎಂಬ ನಿಮ್ಮ ಮಾತುಗಳೇ ಸಂಸ್ಕೃತಿಯನ್ನು ಬಿಂಬಿಸುತ್ತಿದೆ. ನೀವು ವಿದೂಷಕ ಇದ್ದ ಹಾಗೆ ಹಾಗಿದೆ. ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರ್ ರನ್ನು ಸೋಲಿಸಿದ ಕುತಂತ್ರಿ ನೀವಲ್ಲವೇ..? ಎಂದು ಟೀಕೆ ಮಾಡಿದರು.

“ಚಾಮುಂಡೇಶ್ವರಿಯ ಮತದಾರರು ʼಬೀದಿಯಲ್ಲಿ ಅಲೆಯುವಂತೆ” ಮಾಡಿ ಆಗಿದೆ”

ಜನರ ಭಾವನೆಗೆ ಸ್ಪಂದಿಸದ ನಿಮ್ಮನ್ನು ಸ್ವಕ್ಷೇತ್ರ ಚಾಮುಂಡೇಶ್ವರಿಯ ಮತದಾರರು ʼಬೀದಿಯಲ್ಲಿ ಅಲೆಯುವಂತೆʼ ನಿಮ್ಮನ್ನು ಮಾಡಿದ್ದಾರೆ ಎಂಬುದನ್ನು ಮರೆಯಬೇಡಿ. ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ಸ್ಥಿತಿ ಉಗುರು ಮತ್ತು ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಂತಾಗಿದೆ. ಕಾಂಗ್ರೆಸ್ ಸೇರುವುದುಕ್ಕೂ ಮುನ್ನ ಮೊದಲು ಜೆಡಿಎಸ್ ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ, ಅವರಿಗೇ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದೆಂದು ನೀವೇ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು. ನಳಿನ್ ಕುಮಾರ್ ಅವರು 2019 ರಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನುಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ. ಗೆದ್ದದ್ದು ಕೇವಲ 1,696 ಮತಗಳಿಂದ! ಸ್ವಲ್ಪ ವ್ಯತ್ಯಾಸ ಆಗಿದ್ದರೂ ನೀವು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು ಎಂದು ಟೀಕೆ ಮಾಡಿದರು.

ಈ ಹಿಂದಿನ ಉಪಚುನಾವಣೆಯಲ್ಲಿ ಕಟೀಲ್ ಅವರ ನಾಯಕತ್ವದಲ್ಲಿ 15 ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಯಡಿಯೂರಪ್ಪ ಅವರ ಗದ್ದುಗೆ ಬಲಪಡಿಸಿದ್ದೇವೆ. ಈ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿಜೆ ಹಳ್ಳಿ ಗಲಭೆ ನಡೆಸಿದವರ ಪರವಾಗಿ ನೀವು ಯಾಕೆ ವಕಾಲತ್ತು ವಹಿಸಿದ್ದೀರಿ? ಆರೋಪಿಗಳನ್ನು ಅಮಾಯಕರು ಎಂದು ಬಿಂಬಿಸಿದ ನೀವು, ಈಗ ಗಲಭೆಯ ರೂವಾರಿ ಸಂಪತ್ ರಾಜ್ ಅವರಿಗೆ ಚುನಾವಣಾ ಜವಾಬ್ದಾರಿ ಹೊರಿಸಿದ್ದೀರಿ. ನಿಮ್ಮದೇ ದಲಿತ ಶಾಸಕರ ಪರ ನಿಲ್ಲುವ ತಾಕತ್ತು ನಿಮಗಿಲ್ಲವೇ? ಎಂದು ಪ್ರಶ್ನಸಿಸಿದರು.

LEAVE A REPLY

Please enter your comment!
Please enter your name here