‘ಜಂತಕಲ್ ಗಣಿ ಹಗರಣ’ದಲ್ಲಿ ಕುಮಾರಸ್ವಾಮಿಯವರ ಪಾತ್ರವಿಲ್ಲ ಎಂದ ಎಸ್‍ಐಟಿ..!

0
1221

ಈ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರೀ ಸುದ್ದಿಯಾಗಿದ್ದ ಜಂತಕಲ್ ಗಣಿ ಹಗರಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಕುಮಾರಸ್ವಾಮಿಯವರ ಹೆಸರನ್ನು ಎಸ್‍ಐಟಿ ಪ್ರಕರಣದಿಂದ ಕೈ ಬಿಟ್ಟು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ.

ಇನ್ನು ಈ ಪ್ರಕರಣದಲ್ಲಿ ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ವಿನೋದ್ ಘೋಯಲ್‍ಗೆ ಭೂಮಿ ಮಂಜೂರು ಮಾಡುವಂತೆ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾಗೆ ಮೌಖಿಕವಾಗಿ ಆದೇಶಿಸಿದ್ದರು ಎನ್ನುವ ಆರೋಪವಿತ್ತು. ಆದರೆ ತನಿಖೆಯ ನಂತರ ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಿಗೆ ನವೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿನೋದ್ ಘೋಯಲ್ ಹಾಗೂ ಗಗನ್ ಬಡೇರಿಯಾ ಮೇಲೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೆಸರನ್ನು ಕೈಬಿಡಲಾಗಿದೆ. ಈ ಮೂಲಕ ಜಂತಕಲ್ ಗಣಿ ಹಗರಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪಾತ್ರವಿಲ್ಲ ಎಂದು ಎಸ್‍ಐಟಿ ಅಭಿಪ್ರಾಯಪಟ್ಟಿದೆ.

ಇನ್ನು ಬಡೇರಿಯಾ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರನ್ನು ಎಸ್‍ಐಟಿ ವಿಚಾರಣೆಗೆ ಒಳಪಡಿಸಿದ್ದರು. ವಿಚಾರಣೆ ಬಳಿಕ ಕುಮಾರಸ್ವಾಮಿ ಅವರ ಮೇಲೆ ಯಾವುದೇ ಸಾಕ್ಷ್ಯಗಳು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿನೋದ್ ಘೋಯಲ್ ಮತ್ತು ಗಗನ್ ಬಡೇರಿಯಾ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

LEAVE A REPLY

Please enter your comment!
Please enter your name here