ರಾಜ್ಯೋತ್ಸವ ಪಟ್ಟಿ ಫೈನಲ್: ಕೊರೊನಾ ಪರಿಸ್ಥಿತಿ ನೋಡ್ಕೊಂಡು ಬಿಡುಗಡೆಗೆ ನಿರ್ಧಾರ

0
129

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗಳ ಅಂತಿಮ ಆಯ್ಕೆಯ ಪಟ್ಟಿಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನೀಡಲಾಗಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಶುಕ್ರವಾರ ಸಭೆ ನಡೆಸಿದ್ದು, 70 ಜನರ ಪಟ್ಟಿಯನ್ನು ಸಿದ್ದಪಡಿಸಿದೆ ಎಂದು ತಿಳಿದು ಬಂದಿದೆ. ಇನ್ನೆರಡು ದಿನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳ ಜೊತೆ ಚರ್ಚಿಸಿ ಅಂತಿಮ ಪಟ್ಟಿ ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್ 1 ರಂದು ಘೋಷಣೆ ಸಾಧ್ಯತೆ

ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸರಳ ಸಮಾರಂಭ ಮಾಡಲು ನಿರ್ಧರಿಸಲಾಗಿದ್ದು, ನವೆಂಬರ್ 1 ರಂದು ಪ್ರಶಸ್ತಿ ನೀಡುವ ಬಗ್ಗೆ ಇನ್ನೂ ಅಧಿಕೃತ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಪರಿಸ್ಥಿತಿ ನೋಡಿಕೊಂಡು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಕ್ರೀಡಾ ಕ್ಷೇತ್ರವನ್ನು ಹೊರತು ಪಡೆಸಿ 60 ವರ್ಷ ಮೀರಿದವರಿಗೆ ಮಾತ್ರ ಪ್ರಶಸ್ತಿ

ಪ್ರಶಸ್ತಿಗೆ ಸುಮಾರು 22 ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಪರಿಗಣಿಸಲಾಗಿದ್ದು, ರಾಜ್ಯೋತ್ಸವ ಸಲಹಾ ಸಮಿತಿ 110 ಸಾಧಕರ ಪಟ್ಟಿಯನ್ನು ಸಿದ್ದಪಡಿಸಿ ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿಗೆ ನೀಡಿತ್ತು. ಶುಕ್ರವಾರ ನಡೆದ ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹೈಕೋರ್ಟ್ ಆದೇಶದಂತೆ ಈ ವರ್ಷದ ರಾಜ್ಯೋತ್ಸವದ ಲೆಕ್ಕಾಚಾರದಲ್ಲಿ 65 ಜನರಿಗೆ ಮಾತ್ರ ಪ್ರಶಸ್ತಿ ನೀಡುವುದು, ಕ್ರೀಡಾ ಕ್ಷೇತ್ರವನ್ನು ಹೊರತು ಪಡೆಸಿ 60 ವರ್ಷ ಮೀರಿದವರಿಗೆ ಮಾತ್ರ ಪ್ರಶಸ್ತಿ ನೀಡುವುದು ಹಾಗೂ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆಯುವಂತೆ ನೋಡಿಕೊಂಡು ಪಟ್ಟಿ ಸಿದ್ದಪಡಿಸಲಾಗಿದೆ ಎಂಬುದು ತಿಳಿದು ಬಂದಿದೆ.

ಸಚಿವರು, ಅಕಾಡೆಮಿ ಅಧ್ಯಕ್ಷರಿಲ್ಲದ ಸಮಿತಿ ಪ್ರತಿ ವರ್ಷ ಮುಖ್ಯಮಂತ್ರಿ ಅಧ್ಯಕ್ಷತೆಯ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿರುವ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರನ್ನು ಸೇರಿಸಲಾಗುತ್ತಿತ್ತು. ಆದರೆ, ಈ ವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಹೊರತು ಪಡೆಸಿ ಬೇರೆ ಯಾವುದೇ ಹಿರಿಯ ಸಚಿವರನ್ನು ಈ ಸಮಿತಿಗೆ ಸೇರ್ಪಡೆ ಮಾಡಿಲ್ಲ. ಅಂತಿಮ ಆಯ್ಕೆ ಸಮಿತಿಯಲ್ಲಿ ಸಲಹಾ ಸಮಿತಿಯಲ್ಲಿದ್ದ ಜೊತೆಗೆ ಡಾ. ವಾಮನಾಚಾರ್ಯ, ಸಾಹಿತಿ ದೊಡ್ಡರಂಗೇಗೌಡ, ವಾರ್ತಾ ಇಲಾಖೆ ನಿವೃತ್ತ ನಿರ್ದೇಶಕ ಭೃಂಗೇಶ್, ಆಯೇಷಾ ಖಾನಂ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

LEAVE A REPLY

Please enter your comment!
Please enter your name here