ಚಿರಂಜೀವಿ ಜೊತೆ ಸುಮಲತಾ ಡ್ಯಾನ್ಸ್, ವಿಡಿಯೋ ವೈರಲ್..!

0
414

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಜೊತೆ ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ. ಈ ವಿಡಿಯೋ ಇದೀಗ ಎಲ್ಲೆಡೆ ಶೇರ್ ಆಗುತ್ತಿದ್ದು, ಸಂಸದೆ ಸುಮಲತಾ ಅಂಬರೀಶ್ ವಿಡಿಯೋ ಹರಿ ಬಿಟ್ಟವರ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಸಂಸದೆ ಸುಮಲತಾ ಅಂಬರೀಶ್, “ಇದು 4 ವರ್ಷಗಳ ಹಿಂದಿನ ಹಳೆಯ ವಿಡಿಯೋ ಆಗಿದೆ. ನನ್ನ ಹೆಸರಿನ ನಕಲಿ ಅಕೌಂಟ್‍ಗಳಲ್ಲಿ ಕಿಡಿಗೇಡಿಗಳು ವಿಡಿಯೋ ಹಾಕಿದ್ದಾರೆ. ಈ ವಿಡಿಯೋ ಹರಿ ಬೀಡುವ ಮೂಲಕ ನನ್ನ ತೇಜೋವಧೆಗೆ ಯತ್ನಿಸಿದ್ದಾರೆ. ಫೇಸ್‍ಬುಕ್‍ನಲ್ಲಿ ನಕಲಿ ಅಕೌಂಟ್ ತೆಗೆದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಕುರಿತು ಸೈಬರ್ ಪೊಲೀಸರಿಗೆ ದೂರು ನೀಡುತ್ತೇನೆ ಎಂದು ಸಂಸದೆ ಸುಮಲತಾ ತಿಳಿಸಿದ್ದಾರೆ.

ಇನ್ನು ನಾಲ್ಕು ವರ್ಷಗಳ ಹಿಂದೆ ಮೆಗಾಸ್ಟಾರ್ ಚಿರಂಜೀವಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಲತಾ ಅಂಬರೀಶ್ ಚಿರಂಜೀವಿ ಜೊತೆ ಡ್ಯಾನ್ಸ್ ಮಾಡಿದ್ದಾರೆ. ಸುಮಲತಾ ಅವರ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋ ಇದೆ. ಆದರು ಕಿಡಿಗೇಡಿಗಳು ಅದನ್ನು ತೇಜೋವಧೆಗೆ ಬಳಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here