ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ…!

0
359

ಮೈತ್ರಿ ಸರ್ಕಾರವನ್ನು ಉರುಳಿಸಿ, ಬಿಜೆಪಿ ಜೊತೆ ಸೇರಿ ಮಂತ್ರಿಯಾಗಿ ಅಧಿಕಾರ ಅನುಭವಿಸಬೇಕು ಎಂಬ ಲೆಕ್ಕಾಚಾರದಲ್ಲಿದ್ದ ರಾಜ್ಯದ ೧೭ ಅನರ್ಹ ಶಾಸಕರಿಗೆ ಸರ್ವೋಚ್ಚ ನ್ಯಾಯಾಲಯ ಬಿಗ್ ಶಾಕ್ ನೀಡಿದೆ.ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಅನರ್ಹತೆ ಆದೇಶ ಪ್ರಶ್ನಿಸಿ  ಸುಪ್ರೀಂಕೋರ್ಟ್ ಮೆಟ್ಟಿಲೇರಿರುವ  ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನೆಡೆಯಾಗಿದೆ.

ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯನ್ನ ತುರ್ತು ವಿಚಾರಣೆ ಮಾಡುವಂತೆ ಅನರ್ಹ ಶಾಸಕರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆದರೆ ಅರ್ಜಿ ತುರ್ತು ವಿಚಾರಣೆಗೆ ಕೋರ್ಟ್ ನಿರಾಕರಿಸಿದೆ.ಅನರ್ಹ ಶಾಸಕರಿಗೆ ಖಡಕ್ ಸೂಚನೆ ನೀಡಿರುವ ಕೋರ್ಟ್ ಮೊದಲು ರಿಜಿಸ್ಟ್ರಾರ್ ಅರ್ಜಿ ಪರಿಶೀಲನೆ ನಡೆಸಲಿ. ಬಳಿಕ ಅರ್ಜಿ ವಿಚಾರಣೆ ನಡೆಸುವ ಬಗ್ಗೆ ನಿರ್ಧರಿಸಲಾಗುವುದು  ಎಂದು ತಿಳಿಸಿದೆ. ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.

ಇನ್ನು ಸುಪ್ರೀಂ ನೀಡಿರುವ ಆದೇಶದಿಂದ ಅನರ್ಹ ಶಾಸಕರಿಗೆ ಹಿನ್ನಡೆ ಉಂಟಾಗಿದ್ದು, ತಮ್ಮ ಅನರ್ಹತೆ ಆದೇಶ ರದ್ದುಗೊಂಡರೆ, ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಬಹುದು ಎಂದುಕೊಂಡಿದ್ದ ಅನರ್ಹ ಶಾಸಕರಿಗೆ ಪ್ರಾರಂಭದಲ್ಲಿಯೇ ಹಿನ್ನಡೆಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ತುರ್ತು ವಿಚಾರಣೆ ಸಾಧ್ಯವಿಲ್ಲ ಎಂದು ಸುಪ್ರೀಂ ನೇರವಾಗಿ ಹೇಳಿರುವುದರಿಂದ ಅನರ್ಹ ಶಾಸಕರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಾಕಷ್ಟು ಸಮಯ ತೆಗೆದುಕೊಳ್ಳಬಹುದು ಎನ್ನಲಾಗಿದೆ. ಹೀಗಾಗಿ ಸದ್ಯ ಅನರ್ಹ ಶಾಸಕರು ತ್ರಿ ಶಂಕು ಸ್ಥಿತಿಯಲ್ಲಿದ್ದಾರೆ.

LEAVE A REPLY

Please enter your comment!
Please enter your name here