ಸುಪ್ರೀಂ ತೀರ್ಪು : ಅನರ್ಹ ಶಾಸಕರ ಕನಸು ಭಗ್ನ…!

0
592

೧೫ ಅನರ್ಹ ಶಾಸಕರ ವಿಚಾರಣೆ ಇನ್ನು ಸುಪ್ರೀಂ ಕೋರ್ಟ್ ನಲ್ಲಿರುವಾಗಲೇ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಹಾಗೂ ಸದ್ಯ ಘೋಷಣೆಯಾಗಿರುವ ರಾಜ್ಯದ 15 ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್‌ಗೆ ತಡೆಯಾಜ್ಞೆ ನೀಡಬೇಕೆಂದು ಅನರ್ಹ ಶಾಸಕರು ಸಲ್ಲಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ಎನ್‌.ವಿ ರಮಣ ಅವರ ನೇತ್ವದ ತ್ರಿಸದ್ಯಸ ಪೀಠ ವಿಚಾರಣೆಯನ್ನು ಸೆಪ್ಟಂಬರ್ 25ಕ್ಕೆ ಮುಂದೂಡಿದೆ. ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಕನಸು ಕಂಡಿದ್ದ ಅನರ್ಹ ಶಾಸಕರಿಗೆ ಭಾರೀ ಹಿನ್ನಡೆಯಾಗಿದೆ.

ಇನ್ನು 15 ಕ್ಷೇತ್ರಗಳ ಉಪಚುನಾವಣೆಗೆ ಸಂಬಂಧಪಟ್ಟಂತೆ ಇಂದಿನಿಂದ ನಾಮಮತ್ರ ಸಲ್ಲಿಕೆ ಪ್ರಾರಂಭವಾಗಿದ್ದು, ಸೆ. 30ರ ವರೆಗೆ ನಾಮಪತ್ರ ಸಲ್ಲಿಸಲು ಕಾಲಾವಕಾಶವಿದೆ, ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, 24ಕ್ಕೆ ಫಲಿತಾಂಶ ಹೊರಬರಲಿದೆ. ಹೀಗಾಗಿ ಚುನಾವಣೆ ಸ್ಪರ್ಧಿಸುವ ಕನಸು ಕಂಡಿದ್ದ ಅನರ್ಹ ಶಾಸಕರ ಕನಸು ಭಗ್ನವಾಗಿದೆ.

ಇನ್ನು ಇಂದು ಸರ್ವೋಚ್ಚ ನ್ಯಾಯಾಲಯದ ಎನ್‌.ವಿ ರಮಣ ಅವರ ನೇತ್ವದ ತ್ರಿಸದ್ಯಸ ಪೀಠದಲ್ಲಿ ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿ ಈ ಮಹತ್ವದ ತೀರ್ಪು ನೀಡಲಾಗಿದೆ.

LEAVE A REPLY

Please enter your comment!
Please enter your name here