ದೀಪಾವಳಿಯ ಪಟಾಕಿ ಸಂಭ್ರಮಕ್ಕೆ ತಡೆ ಹೊಡ್ಡಿದ ಸರ್ಕಾರ

0
80

ಪಟಾಕಿ ಸಿಡಿಸುವುದರಿಂದ ಕೊರೊನಾ ರೋಗಿಗಳು ಹಾಗೂ ಜನಸಾಮಾನ್ಯರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ದೀಪಾವಳಿಯ ಸಂದರ್ಭದಲ್ಲಿ ಪಟಾಕಿಗಳ ಮಾರಾಟವನ್ನು ನಿಷೇಧಿಸಿರುವುದಾಗಿ ರಾಜಸ್ಥಾನ ಸರ್ಕಾರ ತಿಳಿಸಿದೆ.

ದೀಪಾವಳಿ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಸರ್ಕಾರ ಮಹತ್ವದ ನಿರ್ಧಾರವನ್ನು ಘೋಷಿಸಿದೆ. ಕೊರೋನಾ ಸೊಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಇನ್ನು ಸೂಕ್ತ ಲಸಿಕೆ ದೊರಕದ ಕಾರಣ ಕೊರೋನಾ ಸೊಂಕಿನ ರೋಗಿಗಲು ಹೆಚ್ಚಾಗಿ ಉಸಿರಾಟಕ್ಕೆ ಸಂಬಂಧಿಸಿದ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದು, ದೀಪಾವಳಿ ಸಂದರ್ಭದಲ್ಲಿ ಸಿಡಿಸುವ ಪಟಾಕಿಯ ಹೊಗೆ ರೋಗಿಗಳ ಮೇಲೆ ಇನ್ನಷ್ಟು ಕೆಟ್ಟ ಪರಿಣಾಮ ಬೀರುವ ಸಂಭವ ಹೆಚ್ಚಾಗಿದೆ ಎಂದು ತಿಳಿಸಿದೆ. ಪಟಾಕಿಯಿಂದ ವಾಯು ಮಾಲಿನ್ಯ ಉಂಟಾಗುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರವನ್ನು ಪ್ರಕಟಿಸಿರುವುದಾಗಿ ರಾಜಸ್ತಾನ ಸರ್ಕಾರ ತಿಳಿಸಿದೆ.


ಸಿಎಂ ಅಶೋಕ್ ಗೆಹ್ಲೋಟ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೋಳ್ಳಲಾಗಿದ್ದು, ಕೊರೊನಾದಂತಹ ಸಂದರ್ಭದಲ್ಲಿ ಜನರು ದೀಪಾವಳಿಯಂದು ಪಟಾಕಿ ಬಳಕೆ ಮಾಡುವುದನ್ನು ತಪ್ಪಿಸಬೇಕು. ಇದು ಜನ ಸಾಮಾನ್ಯರು, ಮಕ್ಕಳು, ವೃದ್ಧರ ಮೇಲೆ ಹೆಚ್ಚಾಗಿ ಕೆಟ್ಟ ಪರಿಣಾಮ ಬೀರುತ್ತದೆ ಇದೆಲ್ಲವನ್ನು ಪರಿಗಣಿಸಿ ತಜ್ಞರ ಸಲಹೆಯನ್ನು ಪಡೆದು ಈ ನಿರ್ಧಾರ ಕೈ ಗೊಳ್ಳಲಾಗಿದೆ. ಪಟಾಕಿ ತಯಾರಕರಿಗಾಗಿರುವ ನಷ್ಟಕ್ಕೆ ಸಂಬಂಧಿಸಿದಂತೆ ತಜ್ಞರೊಂದಿಗೆ ಸಮಾಲೋಚಿಸಿ ನಿರ್ಧಾರ ಕೈ ಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.

ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಹೆಚ್ಚಿನ ಮಹತ್ವ ಪಡೆದು ಕೊಂಡಿದೆ. ಇದರ ಜೊತೆಯಲ್ಲಿ ಫಿಟ್ನೆಸ್ ಪ್ರಮಾಣಪತ್ರವಿಲ್ಲದೇ ರಸ್ತೆಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ನಿರ್ಬಂಧ ಹೇರಿದ್ದು ನಿಯಮ ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಗೆಹ್ಲೋಟ್ ಸರ್ಕಾರ ತೀರ್ಮಾನ ಮಾಡಿದೆ.
ಕೊರೋನಾ ವೈರಸ್ ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಯಂತ್ರಿಸಲು ನೋ ಮಾಸ್ಕ್ ನೋ ಎಂಟ್ರಿ, ವಾರ್ ಫಾರ್ ಪ್ಯೂರ್ ಎಂಬ ಅಭಿಯಾನವನ್ನು ರಾಜಸ್ಥಾನ ಸರ್ಕಾರ ಕೈಗೊಂಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ವಾಯು ಮಾಲಿನ್ಯ ಹೆಚ್ಚಾಗಿದ್ದು, ದೆಹಲಿ ಸರ್ಕಾರವೂ ಕೂಡ ದೀಪಾವಳಿಯ ಸಂದರ್ಭದಲ್ಲಿ ಪಟಾಕಿ ನಿಷೇಧಿಸುವ ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಕೊರೋನಾ ಸಂದರ್ಭದಲ್ಲಿ ಕಡಿಮೆಯಾಗಿದ್ದ ವಾಯು ಮಾಲಿನ್ಯ ಕಾರ್ಖಾನೆಗಳ ಪುನರಾರಂಭದಿಂದ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ವಾಯುಮಾಲಿನ್ಯ ಇಲಾಖೆ ಇತ್ತೀಚೆಗಷ್ಟೆ ತನ್ನ ವರದಿ ನೀಡಿತ್ತು. ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಕೂಡ ಮಾಲಿನ್ಯದಿಂದ ಹೊರತಾಗಿಲ್ಲದಿರುವುದರಿಂದ ಮುಖ್ಯ ಮಂತ್ರಿಗಳು ದೀಪಾವಳಿಯ ಪಟಾಕಿ ಸಂಭ್ರಮಕ್ಕೆ ತಡೆ ಹೊಡ್ಡುವ ಮಹತ್ವ ತೀವ್ರ ಕುತೂಹಲ ಮೂಡಿಸಿದೆ.

LEAVE A REPLY

Please enter your comment!
Please enter your name here