“ಮರಾಠ ಅಭಿವೃದ್ದಿ ಘೋಷಿಸಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನವನ್ನು ರಾಜ್ಯಸರ್ಕಾರ ಮಾಡಿದೆ”

0
37

ಬೆಂಗಳೂರು: ಮರಾಠ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನವನ್ನು ರಾಜ್ಯಸರ್ಕಾರ ಮಾಡಿದೆ. ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಹೊಣೆಯಾಗುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಗಡಿಭಾಗದಲ್ಲಿ ಕನ್ನಡ ಮತ್ತು ಮರಾಠಿಗರ ನಡುವೆ ಆಗಾಗ ಸಂಘರ್ಷ ನಡೆದರೂ ರಾಜ್ಯದಾದ್ಯಂತ ಕನ್ನಡಿಗರು ಮತ್ತು ಮರಾಠಿಗರು ಪರಸ್ಪರ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಈಗ ಮರಾಠ ಅಭಿವೃದ್ದಿ ಪ್ರಾಧಿಕಾರವನ್ನು ಘೋಷಿಸಿ ಅನಗತ್ಯವಾಗಿ ಕನ್ನಡಿಗರನ್ನು ಕೆರಳಿಸುವ ಮೂರ್ಖತನವನ್ನು ರಾಜ್ಯಸರ್ಕಾರ ಮಾಡಿದೆ. ಇದರಿಂದಾಗಿ ರಾಜ್ಯದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ಅದಕ್ಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಹೊಣೆಯಾಗುತ್ತಾರೆ ಎಂದು ಆರೋಪಿಸಿದರು.

ಯಾವುದೇ ವೈಜ್ಞಾನಿಕ ಅಧ್ಯಯನಗಳಿಲ್ಲದೆ ಜಾತಿ ಆಧಾರಿತ ನಿಗಮ-ಪ್ರಾಧಿಕಾರ ಸ್ಥಾಪನೆ ಸಮಾಜ ವಿರೋಧಿ ಮಾತ್ರವಲ್ಲ ಪ್ರಜಾಪ್ರಭುತ್ವ ವಿರೋಧಿ ತೀರ್ಮಾನ ಕೂಡಾ ಹೌದು. ಚುನಾವಣೆಗಳನ್ನು ಸಾಧನೆಯ ಬಲದಿಂದ ಗೆಲ್ಲಲಾಗದ ರಾಜ್ಯದ ಮತಿಹೀನ ಬಿಜೆಪಿ ಸರ್ಕಾರ ಇಂತಹ ಅಗ್ಗದ ತಂತ್ರ-ಕುತಂತ್ರಗಳನ್ನು ಮಾಡಿ ಸಮಾಜವನ್ನು ಒಡೆಯಲು ಹೊರಟಿದೆ. ಬಡತನದ ನಿರ್ಮೂಲನೆಯ ಕಾರ್ಯಕ್ರಮಗಳಿಗೆ ವೈಜ್ಞಾನಿಕವಾದ ಅಧ್ಯಯನ ಆಧಾರಿತವಾಗಬೇಕು.ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಡತನ ನಿರ್ಮೂಲನೆಯ ಪ್ರಾಮಾಣಿಕ ಕಾಳಜಿ ಹೊಂದಿದ್ದರೆ, ಈಗಾಗಲೇ ಅವರ ಮುಂದಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಒಪ್ಪಿಕೊಂಡು ಕಾರ್ಯಕ್ರಮಗಳನ್ನು ರೂಪಿಸಲಿ ಎಂದರು

ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆಗೆ ನಮ್ಮ ವಿರೋಧ ಇಲ್ಲ. ಬಡತನ ಎಂಬುದು ಜಾತಿ-ಧರ್ಮಗಳನ್ನು ಮೀರಿದ್ದು. ಕೇವಲ ತಳಸಮುದಾಯಗಳಲ್ಲಿ ಮಾತ್ರವಲ್ಲ ಮೇಲ್ಜಾತಿಗಳಲ್ಲಿಯೂ ಬಡವರಿದ್ದಾರೆ. ಎಲ್ಲ ಜಾತಿ-ಧರ್ಮಗಳ ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ರೂಪಿಸುವ ಕಾರ್ಯಕ್ರಮಗಳನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕೇವಲ ರಾಜಕೀಯ ಲಾಭಕ್ಕಾಗಿ ನಡೆಸುವ ಇಂತಹ ಕ್ಷುಲಕ ಬುದ್ದಿಯ ಕಸರತ್ತುಗಳನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದರು.

ನಾನು ಮುಖ್ಯಮಂತ್ರಿಯಾಗಿ ಅನುಷ್ಠಾನಗೊಳಿಸಿರುವ ಅನ್ನಭಾಗ್ಯ,ಕ್ಷೀರಭಾಗ್ಯ,ಕ್ಷೀರಧಾರೆ,ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಯಾವ ಕಾರ್ಯಕ್ರಮವೂ ನಿರ್ದಿಷ್ಠ ಜಾತಿ-ಧರ್ಮಕ್ಕೆ ಸೀಮಿತವಾದುದಲ್ಲ. ಇವೆಲ್ಲವೂ ಸರ್ವಾಜನಾಂಗದ ಬಡವರ ಕಲ್ಯಾಣ ಕಾರ್ಯಕ್ರಮಗಳು. ರಾಜಕೀಯ ದ್ವೇಷದಿಂದ ಈ ಕಾರ್ಯಕ್ರಮಗಳನ್ನು ನಿರ್ಲಕ್ಷಿಸುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಬಜೆಟ್ ಬೆಂಬಲ ಇಲ್ಲದ ಯೋಜನೆಗಳನ್ನು ಘೋಷಿಸುವ ಗಿಮಿಕ್ ಮಾಡುತ್ತಿದೆ.

ಮೀಸಲಾತಿ, ಸಾಮಾಜಿಕ ನ್ಯಾಯದ ಬಗ್ಗೆ ನಾವು ಮಾತನಾಡಿದಾಗ ನಮ್ಮನ್ನು ಜಾತಿವಾದಿಗಳೆಂದು ಟೀಕಿಸುವ, ಹಂಗಿಸುವ ಬಿಜೆಪಿ ಈಗ ಮಾಡುತ್ತಿರುವುದೇನು? ಜಾತಿ-ಜಾತಿ ನಡುವೆ ಮಾತ್ರವಲ್ಲ ಭಾಷೆ-ಭಾಷೆ ನಡುವೆ ಕೂಡಾ ಜಗಳ ಹುಟ್ಟುಹಾಕುತ್ತಿದೆ. ಇಂತಹ ತುಘಲಕ್ ನಿರ್ಧಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.

ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಯೋಗ್ಯತೆ ಇಲ್ಲ. ವೃದ್ಧಾಪ್ಯವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕೆ ದುಡ್ಡಿಲ್ಲ, ಅತಿವೃಷ್ಟಿಯಿಂದ ಕಷ್ಟನಷ್ಟಕ್ಕೀಡಾಗಿರುವ ಜನ ಬೀದಿಯಲ್ಲಿದ್ದಾರೆ, ಕೋರೊನಾ ಸೋಂಕಿನಿಂದ ಜನ ಸಾಯುತ್ತಿದ್ದಾರೆ. ಇವೆಲ್ಲಕ್ಕೂ ಸರ್ಕಾರದ ಬಳಿ ಹಣ ಇಲ್ಲ, ಜಾತಿ ನಿಗಮ-ಪ್ರಾಧಿಕಾರಕ್ಕೆ ನೂರಾರು ಕೋಟಿ ಎಲ್ಲಿಂದ ಬಂತು? ಎಂದು‌ ಪ್ರಶ್ನಿಸಿದರು.

 

ಮಕ್ಕಳ ಜ್ಞಾಪಕ ಶಕ್ತಿ, ಏಕಾಗ್ರತೆ, ಚುರುಕುತನ ಮತ್ತು ಕೌಶಲ್ಯ ಅಭಿವೃದ್ಧಿ ವೃದ್ಧಿಸಲು ಆಯುರ್ವೇದದ ಉತ್ಪನ್ನವಾದ ‘ಬ್ರಹ್ಮ ಶಂಕರ ‘ ಪರಿಹಾರ ಒದಗಿಸುತ್ತದೆ . ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನುರಿತ ಮತ್ತು ಅನುಭವಿ ಆಯುರ್ವೇದದ ತಜ್ಞ ವೈದ್ಯರ ಸಹಾಯದಿಂದ ನಿರಂತರ ಸಂಶೋಧನೆಗೆ ಪ್ರೋತ್ಸಾಹ ನೀಡಿದ ಪರಿಣಾಮವಾಗಿ ನೈಸರ್ಗಿಕವಾಗಿ ಬ್ರಹ್ಮ ಶಂಕರ ರೂಪುಗೊಂಡಿದೆ.

ಬ್ರಹ್ಮ ಶಂಕರದಲ್ಲಿ ಪ್ರಧಾನವಾಗಿ ಬ್ರಾಹ್ಮೀ ಎಲೆ, ಮಂಡೂಕ ಪರಿಣಿ,ಶಂಖ ಪುಷ್ಟಿ, ಅಶ್ವಗಂಧ,ಮಾಲ್ಕಂಗನಿ,ಜಟಮಾನಸಿ,ತಗರ್ ಅಥವಾ ಸುಗಂಧ ಬಾಲಾ, ಅಮೃತ ಬಳ್ಳಿ,ಸಂಜೆ,ವೀಟ್ ಜರ್ಮ್ ಅಥವಾ ಗೋಧಿ ಭ್ರೂಣವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಂಪೂರ್ಣ ನೈಸರ್ಗಿಕವಾಗಿ ಬ್ರಹ್ಮಶಂಕರದಲ್ಲಿ ಸೇರಿಸಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿದೆ.ಬ್ರಾಹ್ಮೀ ಎಂದರೆ ಸರಸ್ವತಿ . ಮಕ್ಕಳು ಬ್ರಾಹ್ಮೀ ಮುಹೂರ್ತದಲ್ಲಿ ಓದಿದರೆ ಮರೆಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಮಕ್ಕಳ ದೇಹ ಬಹಳ ಸೂಕ್ಷ್ಮವಾಗಿದ್ದು ಬಹುಬೇಗ ಜ್ವರ,ಕೆಮ್ಮು,ಸೋಂಕುಗಳಿಗೆ ತುತ್ತಾಗುತ್ತಾರೆ.ಬ್ರಹ್ಮಶಂಕರ ನಿಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರನ್ನು ಸಧೃಡ ರನ್ನಾಗಿ ಮಾಡುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.

BUY NOW
ಒಂದು ಆರೋಗ್ಯವಂತ, ಜ್ಞಾನವಂತ , ಬುದ್ಧಿವಂತ ಸಮಾಜಕ್ಕಾಗಿ ‘ಬ್ರಹ್ಮ ಶಂಕರ ‘ ನಿಮ್ಮ ಮಕ್ಕಳಿಗೆ ಅತ್ಯವಶ್ಯಕವಾಗಿದೆ

LEAVE A REPLY

Please enter your comment!
Please enter your name here