ವಿದ್ಯಾರ್ಥಿಗಳಿಗೆ ಈ ನಗರಗಳು ಬೆಸ್ಟ್..!

0
117

ವಿದ್ಯಾರ್ಥಿಗಳಿಗಾಗಿ ಅತ್ಯುತ್ತಮ ನಗರಗಳ ಪಟ್ಟಿಯನ್ನು ಖಾಸಗಿ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬೆಂಗಳೂರು ಭಾರತದಲ್ಲೇ ಪ್ರಥಮ ಸ್ಥಾನ ಪಡೆದಿದೆ.

‘ಗ್ಲೋಬಲ್ ಕನ್ಸಲ್ಟೆನ್ಸಿ ಸಂಸ್ಥೆ ಕ್ವಾಕ್ವೇರ್ಲಿ ಸೈಮಂಡ್’ ಎಂಬ ಖಾಸಗಿ ಸಂಸ್ಥೆ ಈ ಸಮೀಕ್ಷೆ ನಡೆಸಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಲಂಡನ್ ಪ್ರಥಮ ಸ್ಥಾನದಲ್ಲಿದೆ. ಇನ್ನು ಮುಂಬೈ, ದೆಹಲಿ ಮತ್ತು ಚೆನ್ನೈ ಟಾಪ್ 120 ಯಲ್ಲಿ ಸ್ಥಾನ ಪಡೆದಿವೆ. ವಿಶ್ವವಿದ್ಯಾಲಯಗಳ ಸಂಖ್ಯೆ, ಅವುಗಳ ಸಾಧನೆ, ಉದ್ಯೋಗಾವಕಾಶ, ನಗರದ ಜೀವನ ಶೈಲಿ, ಅಲ್ಲಿ ದೊರೆಯುವ ಅನುಕೂಲಗಳನ್ನು ಆಧರಿಸಿ ಪಟ್ಟಿ ತಯಾರಿಸಲಾಗಿದೆ. ಜಾಗತಿಕ ಮಟ್ಟದಲ್ಲಿ ಬೆಂಗಳೂರಿಗೆ 81 ಸ್ಥಾನ ಲಭಿಸಿದೆ.

LEAVE A REPLY

Please enter your comment!
Please enter your name here