ಸಿದ್ದು-ದೇವೇಗೌಡರ ವಾಕ್ಸಮರದ ಹಿಂದಿದೆ ಈ ರಾಜಕೀಯ ಲೆಕ್ಕಾಚಾರ..!

0
364

ಮಾಜಿ ಸಿಎಂ ಸಿದ್ಧರಾಮಯ್ಯ ಮತ್ತು ಜೆಡಿಎಸ್ ವರಿಷ್ಠರಾದ ದೇವೇಗೌಡರು – ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿದೆ. ಸಿದ್ಧರಾಮಯ್ಯ ಅವರ ಮೇಲೆ ಜೆಡಿಎಸ್ ನಾಯಕರು ಕೆಂಡಕಾರುತ್ತಿದ್ದಾರೆ. ಅದಕ್ಕೆ ಪ್ರತ್ಯುತ್ತರವಾಗಿ ಸಿದ್ದರಾಮಯ್ಯ ಕೂಡಾ ಜೆಡಿಎಸ್ ನಾಯಕರ ವಿರುದ್ದ ಕಿಡಿಕಾರುತ್ತಿದ್ದಾರೆ. ಅಚ್ಚರಿ ಎಂದರೆ ಈ ರಾಜಕೀಯ ವಾಕ್ಸಮರದ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಸಂಘಟನೆ ಬಲಪಡಿಸುವ ಲೆಕ್ಕಾಚಾರ ಅಡಗಿದೆ ಎನ್ನಲಾಗಿದೆ.

ಹೌದು, ಹಳೆ ಮೈಸೂರು ಭಾಗದಲ್ಲಿ ಹಿಡಿತ ಕಳೆದುಕೊಂಡಿದ್ದ ಕಾಂಗ್ರೆಸ್ ಮತ್ತೆ ಅಧಿಪತ್ಯ ಸ್ಥಾಪಿಸಲು ತಂತ್ರ ಹೆಣೆದಿದೆ. ಇದು ಗೊತ್ತಾಗುತ್ತಿದ್ದಂತೆ ಹಳೆ ಮೈಸೂರು ಭಾಗದಲ್ಲಿ ಹಿಡಿತ ಸಾಧಿಸಲು ಜೆಡಿಎಸ್ ಕೂಡ ಪೈಪೋಟಿ ನಡೆಸಿದ್ದು, ಅದಕ್ಕೆ ಪ್ರತಿತಂತ್ರವಾಗಿ ವಾಕ್ಸಮರ ತಂತ್ರ ಹೆಣೆದಿದೆ. ಇನ್ನು ಜೆಡಿಎಸ್ ಹಳೆ ಮೈಸೂರು ಭಾಗದಲ್ಲಿ ಪ್ರಬಲ ಒಕ್ಕಲಿಗ ಸಮುದಾಯವನ್ನು ಒಂದುಗೂಡಿಸಲು ಪ್ರಯತ್ನ ನಡೆಸುತ್ತಿದೆ. ಇನ್ನೊಂದೆಡೆ ಸಿದ್ದರಾಮಯ್ಯ ಅಹಿಂದ ಮತಗಳನ್ನು ಒಟ್ಟುಗೂಡಿಸುವ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಇನ್ನು ಒಕ್ಕಲಿಗ ಸಮುದಾಯದ ಮನವೊಲಿಸಲು ಸಿದ್ದರಾಮಯ್ಯ ಪ್ರಯತ್ನ ನಡೆಸಿದ್ದು, ಇದನ್ನು ಮನಗಂಡು ಜೆಡಿಎಸ್ ನಾಯಕರು ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಇದರ ನಡುವೆ ಉಪ ಚುನಾವಣೆಗೂ ತಯಾರಿ ನಡೆಸಲಾಗಿದೆ. ಇದರ ಭಾಗವಾಗಿಯೇ ನಾಯಕರ ನಡುವೆ ವಾಕ್ಸಮರ ನಡೆದಿದೆ ಎನ್ನಲಾಗಿದೆ. ಈ ಎಲ್ಲ ರಾಜಕೀಯ ಲೆಕ್ಕಾಚಾರ ವಾಕ್ಸಮರಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here