ಟೊಯೋಟ-ಕಿರ್ಲೋಸ್ಕರ್‌ ನಲ್ಲಿ ಬಿಕ್ಕಟ್ಟು: ಮುಷ್ಕರ ನಿಷೇಧಿಸಿ, ಲಾಕ್ ಔಟ್ ತೆರವಿದೆ ಆದೇಶ

0
67

ಬೆಂಗಳೂರು: ಟೊಯೋಟ-ಕಿರ್ಲೋಸ್ಕರ್‌ ನಲ್ಲಿ ಉಂಟಾಗಿದ್ದ ಬಿಕ್ಕಟ್ಟು ಪರಿಹರಿಸಿ, ಮುಷ್ಕರ ನಿಷೇಧಿಸಿ, ಲಾಕ್‌ಔಟ್‌ ತೆರವುಗೊಳಿಸಲಾಗಿದೆ.

ಬಿಕ್ಕಟ್ಟಿಗೆ ಕಾರಣ..?

ರಾಜ್ಯದ ಏಕೈಕ ಬೃಹತ್‌ ಆಟೋಮೊಬೈಲ್‌ ಕೈಗಾರಿಕೆಯಾಗಿರುವ ಟೊಯೋಟ-ಕಿರ್ಲೋಸ್ಕರ್‌ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಉಂಟಾದ ತಿಕ್ಕಾಟದಿಂದ ಸುಮಾರು 39 ಕಾರ್ಮಿಕರನ್ನು ಅಮಾನತು ಮಾಡಲಾಗಿತ್ತು. ಇದರಿಂದ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದರೆ, ಕಂಪನಿಯೂ ಲಾಕ್‌ಔಟ್‌ ಘೋಷಣೆ ಮಾಡಿತ್ತು.

ಕಾರ್ಮಿಕ ವ್ಯಾಜ್ಯ ಕಾಯ್ದೆ ಸೆಕ್ಷನ್‌ 10(3)ರ ಪ್ರಕಾರ ತೆರವು

ಡಿಸಿಎಂ, ರಾಮನಗರ ಜಿಲ್ಲಾ ಉಸ್ತುವಾರಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ಕಾರ್ಮಿಕರು ಮತ್ತು ಆಡಳಿತ ಮಂಡಳಿ ಒಳಗೊಂಡ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್‌, ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತರೊಂದಿಗೆ ತುರ್ತು ಸಭೆ ನಡೆಸಲಾಯಿತು. ಬಳಿಕ ಕಾರ್ಮಿಕ ವ್ಯಾಜ್ಯ ಕಾಯ್ದೆ ಸೆಕ್ಷನ್‌ 10(3)ರ ಪ್ರಕಾರ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ ಲಾಕ್‌ಔಟ್‌ ತೆರವುಗೊಳಿಸುವ ಮಹತ್ವದ ಆದೇಶವನ್ನು ಹೊರಡಿಸಲಾಯಿತು.‌ ನಾಳೆ ಬೆಳಗ್ಗೆಯಿಂದಲೇ ಕಂಪನಿಯ ಉತ್ಪಾದನಾ ಚಟುವಟಿಕೆ ಪುನಾರಂಭ ಆಗಬೇಕು. ಕೂಡಲೇ ಕೆಲಸಕ್ಕೆ ಹಾಜರಾಗಿ ಎಂದು ಕಾರ್ಮಿಕರಿಗೆ ಹಾಗೂ ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಡಳಿತ ಮಂಡಳಿಗೆ ಡಿಸಿಎಂ ಸೂಚಿಸಿದರು.

ಮುಷ್ಕರ, ಲಾಕ್‌ಔಟ್‌ ಎರಡೂ ಸರಿಯಲ್ಲ:

ಮೊದಲಿನಿಂದಲೂ ರಾಜ್ಯದಲ್ಲಿ ಉತ್ತಮ ಶ್ರಮಸಂಸ್ಕೃತಿ ಇದೆ. ಇದರಿಂದ ಕೈಗಾರಿಗೆಗಳ ಬೆಳವಣಿಗೆ ಉತ್ತಮವಾಗಿ ಆಗಿದೆ ಎಂದು ಹೇಳಬಹುದು. ಇಡೀ ಏಷ್ಯಾದಲ್ಲಿಯೇ ಉತ್ತಮ ಹೂಡಿಕೆ ಹಾಗೂ ಕೈಗಾರಿಕೆಗಳಿಗೆ ಪೂರಕ ವಾತಾವರಣ ರಾಜ್ಯದಲ್ಲಿದೆ. ಕೋವಿಡ್‌ ನಂತರ ಕುಸಿತ ಕಂಡಿರುವ ಆರ್ಥಿಕತೆಯನ್ನು ಮತ್ತೆ ಮೇಲೆತ್ತುವ ಕೆಲಸ ಎಲ್ಲರೂ ಮಾಡಬೇಕಿದೆ. ಆದರೆ, ಮುಷ್ಕರ ಮತ್ತು ಲಾಕ್‌ಔಟ್‌ನಿಂದ ನಾವು ಎಂಥ ಸಂದೇಶ ನೀಡಲು ಸಾಧ್ಯ? ಎಂದು ಡಿಸಿಎಂ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಮಿಕ ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಚೀನಾಕ್ಕೆ ಪರ್ಯಾಯವಾಗಿ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಆದರಲ್ಲೂ ಕರ್ನಾಟಕದಲ್ಲಿ ಇನ್ನಷ್ಟು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಜಪಾನ್‌, ದಕ್ಷಿಣ ಕೊರಿಯಾ, ತೈವಾನ್‌ನಂಥ ದಕ್ಷಿಣ ಆಸಿಯಾ ದೇಶಗಳು ತುದಿಗಾಲ ಮೇಲೆ ನಿಂತಿವೆ. ಇಂಥ ಹೊತ್ತಿನಲ್ಲಿ ಮುಷ್ಕರ, ಲಾಕ್‌ಡೌನ್‌ನಂಥ ಮಾತುಗಳು ಬರಲೇಬಾರದು ಎಂದ ಅವರು, ಜಪಾನಿಯರಲ್ಲಿ ಇರುವ ವರ್ಕ್‌ ಕಲ್ಚರ್‌ ನಮ್ಮಲ್ಲೂ ಬರಬೇಕು. ಇದು ಸ್ಪರ್ಧಾತ್ಮಕ ಜಗತ್ತು. ಮಾರಕಟ್ಟೆಯಲ್ಲಿ ನೂರೆಂಟು ಕಾರುಗಳಿವೆ. ಗ್ರಾಹಕನಿಗೆ ಆಯ್ಕೆ ಹೆಚ್ಚಾಗಿದೆ ಎಂಬುದನ್ನು ಮರೆಯಬಾರದು ಎಂದು ಕಾರ್ಮಿಕ ಪ್ರತಿನಿಧಿಗಳಿಗೆ ಹೇಳಿದರು.

ಸಭೆಯಲ್ಲಿ ಮಾಗಡಿ ಶಾಸಕ ಮಂಜುನಾಥ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ್, ರಾಮನಗರ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಗಿರೀಶ್, ಹೆಚ್ಚುವರಿ ಕಾರ್ಮಿಕ ಆಯುಕ್ತ ಮಂಜುನಾಥ ಹಾಜರಿದ್ದರು.

ಮಕ್ಕಳ ಜ್ಞಾಪಕ ಶಕ್ತಿ, ಏಕಾಗ್ರತೆ, ಚುರುಕುತನ ಮತ್ತು ಕೌಶಲ್ಯ ಅಭಿವೃದ್ಧಿ ವೃದ್ಧಿಸಲು ಆಯುರ್ವೇದದ ಉತ್ಪನ್ನವಾದ ‘ಬ್ರಹ್ಮ ಶಂಕರ ‘ ಪರಿಹಾರ ಒದಗಿಸುತ್ತದೆ . ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನುರಿತ ಮತ್ತು ಅನುಭವಿ ಆಯುರ್ವೇದದ ತಜ್ಞ ವೈದ್ಯರ ಸಹಾಯದಿಂದ ನಿರಂತರ ಸಂಶೋಧನೆಗೆ ಪ್ರೋತ್ಸಾಹ ನೀಡಿದ ಪರಿಣಾಮವಾಗಿ ನೈಸರ್ಗಿಕವಾಗಿ ಬ್ರಹ್ಮ ಶಂಕರ ರೂಪುಗೊಂಡಿದೆ.

ಬ್ರಹ್ಮ ಶಂಕರದಲ್ಲಿ ಪ್ರಧಾನವಾಗಿ ಬ್ರಾಹ್ಮೀ ಎಲೆ, ಮಂಡೂಕ ಪರಿಣಿ,ಶಂಖ ಪುಷ್ಟಿ, ಅಶ್ವಗಂಧ,ಮಾಲ್ಕಂಗನಿ,ಜಟಮಾನಸಿ,ತಗರ್ ಅಥವಾ ಸುಗಂಧ ಬಾಲಾ, ಅಮೃತ ಬಳ್ಳಿ,ಸಂಜೆ,ವೀಟ್ ಜರ್ಮ್ ಅಥವಾ ಗೋಧಿ ಭ್ರೂಣವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಂಪೂರ್ಣ ನೈಸರ್ಗಿಕವಾಗಿ ಬ್ರಹ್ಮಶಂಕರದಲ್ಲಿ ಸೇರಿಸಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿದೆ.ಬ್ರಾಹ್ಮೀ ಎಂದರೆ ಸರಸ್ವತಿ . ಮಕ್ಕಳು ಬ್ರಾಹ್ಮೀ ಮುಹೂರ್ತದಲ್ಲಿ ಓದಿದರೆ ಮರೆಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಮಕ್ಕಳ ದೇಹ ಬಹಳ ಸೂಕ್ಷ್ಮವಾಗಿದ್ದು ಬಹುಬೇಗ ಜ್ವರ,ಕೆಮ್ಮು,ಸೋಂಕುಗಳಿಗೆ ತುತ್ತಾಗುತ್ತಾರೆ.ಬ್ರಹ್ಮಶಂಕರ ನಿಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರನ್ನು ಸಧೃಡ ರನ್ನಾಗಿ ಮಾಡುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.

ಒಂದು ಆರೋಗ್ಯವಂತ, ಜ್ಞಾನವಂತ , ಬುದ್ಧಿವಂತ ಸಮಾಜಕ್ಕಾಗಿ ‘ಬ್ರಹ್ಮ ಶಂಕರ ‘ ನಿಮ್ಮ ಮಕ್ಕಳಿಗೆ ಅತ್ಯವಶ್ಯಕವಾಗಿದೆ

BUY NOW

LEAVE A REPLY

Please enter your comment!
Please enter your name here