ಶಿವಮೊಗ್ಗ ಜಿಲ್ಲೆಯಲ್ಲಿ ಟ್ರೆಕಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದಂತ ಪ್ರವಾಸಿ ತಾಣಗಳು ..!

0
340

ಶಿವಮೊಗ್ಗ ಮಲೆನಾಡಿನ ತಪ್ಪಲು,ಕವಿ ಉತ್ತಮರ ಬಿಡು ,ಸೈಹಾದ್ರಿ ಬೆಟ್ಟಗಳ ತಪ್ಪಲಿನಲ್ಲಿರುವ ಶಿವಮೊಗ್ಗ ಆನೆಕ ಪ್ರವಾಸಿ ತಾಣಗಳಿಗೆ ಹೆಸರುವಾಸಿ. ಶಿವಮೊಗ್ಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ 275 ಕಿಲೋ ಮೀಟರ್ ದೂರದಲ್ಲಿದೆ. ಮಲೆನಾಡಿನ ಭಾಗವಾಗಿರುವ ಶಿವಮೊಗ್ಗ ಪಶ್ಚಿಮಘಟ್ಟಗಳ ಸಾಲಿನಲ್ಲಿ ನೆಲೆ ನಿಂತಿದ್ದು ಸುಲಭವಾದ ಪ್ರಯಾಣಕ್ಕೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ರಸ್ತೆ ಮತ್ತು ರೈಲು ಮಾರ್ಗಗಳ ಸಂಪರ್ಕವನ್ನು ಹೊಂದಿದೆ. ಇದರಿಂದ ಇಲ್ಲಿ ಪ್ರವಾಸಕ್ಕೆ ಅನುಕೂಲಕರವಾದ ಎಲ್ಲಾ ತರಹದ ವಾತಾವರಣವಿದ್ದು ಕುಟುಂಬದ ಜೋತೆ ಕಾಲಕಳೆಯಲು,ಟ್ರೆಕಿಂಗ್ ಪ್ರಿಯರಿಗೆ ಹೇಳಿ ಮಾಡಿಸಿದಂತ ಜಾಗಗಳಿವೆ.

ಶಿವಮೊಗ್ಗ ಎಂಬ ಹೆಸರು ‘ಶಿವ-ಮುಖ’ ಎಂಬ ಪದಪುಂಜದಿಂದ ಬಂದದ್ದು. ಇನ್ನೊಂದು ವ್ಯುತ್ಪತ್ತಿಯಂತೆ ಇದು ‘ಸಿಹಿ-ಮೊಗೆ’ (ಸಿಹಿಯಾದ ಮೊಗ್ಗು) ಎಂದಿದ್ದು ಅದು ‘ಶಿವಮೊಗ್ಗ’ವಾಗಿ ಮಾರ್ಪಾಟುಹೊಂದಿದೆ ಶಿವಮೊಗ್ಗ ಆನೆಕ ಪ್ರವಾಸಿ ತಾಣಗಳು ಹಾಗು ದೇವಸ್ಥಾನಗಳು ಹಾಗು ಬೆಟ್ಟ ಗುಡ್ಡಗಳ ತಾಣ,ಜಿಲ್ಲೆಯಲ್ಲಿ 5 ನದಿಗಳು ಹರಿಯುತ್ತವೆ,ಶಿವಮೊಗ್ಗ ಮಲೆನಾಡಿನ ಅಡಿಕೆ ಕ್ರುಷಿಗೆ ಹೆಸರು ಪಡೆದಿದೆ.ಸಹ್ಯಾದ್ರಿ ಬೆಟ್ಟಗಳ ಸಾಲಿನಿಂದಾಗಿ ಶಿವಮೊಗ್ಗೆಯಲ್ಲಿ ಹರಿಯುವ ನದಿಗಳು ವರ್ಷಪೂರ್ತಿ ಮಳೆಯನ್ನು ಕಂಡು ತುಂಬಿ ಹರಿಯುತ್ತವೆ.

ಸಹ್ಯಾದ್ರಿ ಪರ್ವತಶ್ರೇಣಿ ಮತ್ತು ಅಲ್ಲಿ ಉಗಮಗೊಳ್ಳುವ ನದಿ-ಉಪನದಿಗಳು ಶಿವಮೊಗ್ಗಕ್ಕೆ ಯಥೇಚ್ಛ ನೈಸರ್ಗಿಕ ಸೌಂದರ್ಯವನ್ನು ತಂದುಕೊಟ್ಟಿವೆ. ಶಿವಮೊಗ್ಗದಿಂದ ೧೧೩ ಕಿಮೀ ದೂರದಲ್ಲಿರುವ ಜಗತ್ಪ್ರಸಿದ್ಧ ಜೋಗದಜಲಪಾತ ಪ್ರಕೃತಿಯ ಒಂದು ಅಪೂರ್ವ ದೃಶ್ಯ. ಇಲ್ಲಿ ಶರಾವತಿ ನದಿ ೨೩೫ ಮೀ ಎತ್ತರದಿಂದ ಸುಮನೋಹರವಾಗಿ ಧುಮುಕುತ್ತದೆ. ರಾಜ, ರಾಣಿ, ರೋರರ್ ಮತ್ತು ರಾಕೆಟ್ ಎಂಬ ನಾಲ್ಕು ವಿಭಿನ್ನ ಪ್ರವಾಹಗಳಾಗಿ ಧುಮುಕುವ ಶರಾವತಿ ಏಷ್ಯದ ಅತಿ ಎತ್ತರದ ಜಲಪಾತವನ್ನು ನಿರ್ಮಿಸಿದೆ. ಮಳೆಗಾಲದ ಸಮಯದಲ್ಲಿ ಕಾಮನ ಬಿಲ್ಲುಗಳನ್ನು ನಿರ್ಮಿಸಿಕೊಂಡು ಅತ್ಯದ್ಭುತ ದೃಶ್ಯವನ್ನು ಜಲಪಾತ ಪ್ರದರ್ಶಿಸುತ್ತದೆ.ತುಂಗಭದ್ರಾ, ಶರಾವತಿ, ಕುಮುದ್ವತಿ ಮತ್ತು ಇತರ ನದಿಗಳಿಂದ ಜಲಸರಬರಾಜಿನ ಸೌಕರ್ಯವುಳ್ಳ ಶಿವಮೊಗ್ಗ ಜಿಲ್ಲೆ ಕರ್ನಾಟಕದಅನ್ನದ ಬಟ್ಟಲು ಎನ್ನಿಸಿಕೊಂಡಿದೆ.

ಪ್ರವಾಸೀ ತಾಣಗಳು

೧ .ಮ೦ಡಗದ್ದೆಯ ಪಕ್ಷಿದಾಮ.

ಇದು ಪಕ್ಷಿ ಪ್ರೇಮಿಗಳಿಗೆ ಆರಾಧ್ಯ ಸ್ಥಳ. ಅದರಲ್ಲೂ ಮೇದಿಂದ ಅಕ್ಟೋಬರ್ ತಿಂಗಳು ಕಿವಿಗೆ ಇಂಪು, ಕಣ್ಣಿಗೆ ಆನಂದ ಉಣಬಡಿಸುವ ಬಾನಾಡಿಗಳ ದೃಶ್ಯಕಾವ್ಯ, ಮ೦ಡಗದ್ದೆಯ ಪಕ್ಷಿದಾಮ ಶಿವಮೊಗ್ಗ ಪಟ್ಟಣದಿಂದ 30 ಕಿ.ಮೀ ದೂರದಲ್ಲಿರುವ ಮ೦ಡಗದ್ದೆ ಗ್ರಾಮದ ಸಮೀಪವಿರುವ ಒಂದು ದ್ವೀಪವಾಗಿದೆ. ಈ ದ್ವೀಪವು 1.14 ಎಕರೆ ಪ್ರದೇಶವನ್ನು ವ್ಯಾಪಿಸಿದೆ ಮತ್ತು ಇದು ಅರಣ್ಯ ಮತ್ತು ತುಂಗಾ ಎಂಬ ನದಿಯಿಂದ ಆವೃತವಾಗಿದೆ.

೨.ಜೋಗದ ಜಲಪಾತ

ಜೋಗ ಜಲಪಾತ ಪ್ರಪಂಚದ ಪ್ರಸಿದ್ಧ ಜಲಪಾತಗಳಲ್ಲೊಂದು. ಇದು ಭಾರತದ ಎರಡನೆಯ ಅತಿ ಎತ್ತರದ ಜಲಪಾತ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ದಟ್ಟವಾದ ಕಾಡು ಹಾಗು ಗುಡ್ಡಗಳಿಂದ ಆವೃತ್ತವಾದ ಜೋಗ ಕರ್ನಾಟಕದ ಒಂದು ಪ್ರಮುಖ ಪ್ರವಾಸಿ ತಾಣ. ಇಲ್ಲಿ ಸುಮಾರು ೨೯೨ ಮೀ ಎತ್ತರದಿಂದ ಭೋರ್ಗರೆಯುತ್ತಾ ಶರಾವತಿ ನದಿಯು ನಾಲ್ಕು ಸೀಳಾಗಿ ಧುಮುಕುತ್ತದೆ. ವೈಭವದಿಂದ ಅವ್ಯಾಹತವಾಗಿ ಧುಮಕುವ ರಾಜ, ಜೋರಾಗಿ ಆರ್ಭಟಿಸುತ್ತ ಹಲವಾರು ಭಾರಿ ಚಿಮ್ಮುತ್ತ ಧುಮಕುವ ರೋರರ್, ಬಳಕುತ್ತಾ ಜಾರುವ ರಾಣಿ(ಲೇಡಿ) ಮತ್ತು ರಭಸದಿಂದ ಹಲವಾರು ಬಂಡೆಗಳನ್ನು ಚಿಮ್ಮುತ್ತಾ ನುಗ್ಗುವ ರಾಕೆಟ್ ಈ ನಾಲ್ಕು ಜಲ ಭಾಗಗಳಾಗಿವೆ. ಮಳೆಗಾಲದಲ್ಲಿ ಅತ್ಯ೦ತ ರಮಣೀಯರೂಪ ತೊಡುವ ಈ ಜಲಪಾತ ಬಿಳಿ ಮೋಡಗಳ ಹಿಂದೆ ಕಣ್ಣಾಮುಚ್ಚಾಲೆ ಆಡುತ್ತ ನೋಡುಗರ ಕಣ್ಮನ ಸೆಳೆಯುವುದು.

೩.ಕುಂದಾದ್ರಿ ಬೆಟ್ಟ

ಕುಂದಾದ್ರಿ ಬೆಟ್ಟವು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ಇದೆ. ತೀರ್ಥಹಳ್ಳಿಯಿಂದ ಆಗುಂಬೆ ಕಡೆ ಹೋಗುವಾಗ ಗುಡ್ಡೆಕೇರಿ ಎಂಬ ಗ್ರಾಮದಿಂದ ಸುಮಾರು ೯ ಕಿ.ಮೀ ದೂರದಲ್ಲಿ ಕುಂದಾದ್ರಿ ಬೆಟ್ಟವಿದೆ. ಬೆಟ್ಟವನ್ನು ತಲುಪಲು ಡಾಂಬರು ರಸ್ತೆಯಿದೆ ಹಾಗು ನಡೆದು ಹೋಗಲು ಕಾಲು ದಾರಿ ಕೂಡ ಇದೆ. ಕುಂದಾದ್ರಿ ಬೆಟ್ಟವು ಜೈನರ ಪವಿತ್ರ ಯಾತ್ರಾ ಸ್ಥಳವಾಗಿದೆ. ಬೆಟ್ಟದ ಮೇಲೆ ಪಾರ್ಶ್ವನಾಥ ಚೈತ್ಯಾಲಯವಿದೆ. ಇಲ್ಲಿಗೆ ಪ್ರತಿ ವರುಷ ಸಾವಿರಾರು ಪ್ರವಾಸಿಗರು ಬೇಟಿ ನೀಡುತ್ತಾರೆ ಹಾಗು ನೂರಾರು ಚಾರಣಿಗರು ಚಾರಣ ಮಾಡಲು ಬರುತ್ತಾರೆ. ಬೆಟ್ಟದ ಮೇಲಿನಿಂದ ಕಾಣುವ ಪ್ರಕೃತಿ ಸೌಂದರ್ಯ ಕಣ್ಣಿಗೆ ಹಬ್ಬವಾಗುತ್ತದೆ. ಎಲ್ಲಿ ನೋಡಿದರಲ್ಲಿ ದಟ್ಟ ಕಾಡು, ತೋಟಗಳು, ಹೊಲ-ಗದ್ದೆಗಳು. ಬೆಟ್ಟಕ್ಕೆ ಬೇಟಿ ನೀಡುವವರು ಊಟ ಮತ್ತು ನೀರಿನ ವ್ಯವಸ್ಥೆ ಮಾಡಿಕೊಂಡು ಬಂದರೆ ಉತ್ತಮ.

೪ .ಕೊಡಚಾದ್ರಿ

ಕೊಡಚಾದ್ರಿ ಬೆಟ್ಟ ಸಾಲುಗಳು ಕರ್ನಾಟಕ ರಾಜ್ಯದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇವೆ. ಇದರಲ್ಲಿ ಕೊಡಚಾದ್ರಿ ಬೆಟ್ಟದ ಎತ್ತರ ಸಮುದ್ರ ಮಟ್ಟದಿಂದ ಸುಮಾರು ೧೩೪೩ ಮೀ. ಕೊಡಚಾದ್ರಿಬೆಟ್ಟವು ಪ್ರಸಿದ್ದ ಯಾತ್ರಾ ಸ್ಥಳವಾದ ಕೊಲ್ಲೂರು ಮೂಕಾಂಬಿಕ ದೇವಸ್ಥಾನದ ಹಿನ್ನೆಲೆಯಲ್ಲಿ ಇದ್ದು ಪ್ರಕೃತಿ ಪ್ರಿಯರಿಗೆ ಹಾಗು ಚಾರಣಿಗರಿಗೆ ಹೇಳಿ ಮಾಡಿಸಿದ ಜಾಗ. ಕೊಡಚಾದ್ರಿ ಬೆಟ್ಟ ಸಾಲುಗಳು ಮೂಕಾಂಬಿಕ ವನ್ಯ ಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಬರುತ್ತದೆ. ಕೊಡಚಾದ್ರಿ ಬೆಟ್ಟದ ಮೇಲೆ ಸರ್ವಜ್ಞ ಪೀಠವೆಂಬ ಒಂದು ಸಣ್ಣ ದೇವಾಲಯವಿದೆ. ಈ ಜಾಗದಲ್ಲಿ ಭಗವಾನ್ ಶ್ರೀ ಶಂಕರಾಚಾರ್ಯರು ತಪಸ್ಸು ಮಾಡಿದ್ದರು ಎಂದು ಪ್ರತೀತಿ. ಸರ್ವಜ್ಞ ಪೀಠಕ್ಕಿಂತ ೨ ಕಿ.ಮೀ ಮೊದಲು ಮೂಲ ಮೂಕಾಂಬಿಕ ದೇವಸ್ಥಾನವಿದೆ. ಸರ್ವಜ್ಞ ಪೀಠದಿಂದ ಮುಂದಕ್ಕೆ ಕಡಿದಾದ ಬೆಟ್ಟವನ್ನು ಇಳಿದರೆ ಚಿತ್ರಮೂಲ ಎಂಬ ಸ್ಥಳ ತಲುಪಬಹುದು. ಇದು ಸೌಪರ್ಣಿಕ ನದಿಯ ಉಗಮ ಸ್ಥಾನ. ಈ ಜಾಗವು ಹಲವಾರು ಜಾತಿಯ ಸಸ್ಯಗಳಿಗೆ ಹೆಸರುವಾಸಿಯಾಗಿದೆ.

೫.ಆಗುಂಬೆ ಸೂರ್ಯಾಸ್ತ

ಆಗುಂಬೆ, ತೀರ್ಥಹಳ್ಳಿ ತಾಲೂಕಿನ ಒಂದು ಊರು. ಪಶ್ಚಿಮ ಘಟ್ಟದಲ್ಲಿರುವ ಈ ಊರು ಒಂದು ಪ್ರವಾಸಿ ಸ್ಥಳ. ಇಲ್ಲಿನ ಪ್ರಕೃತಿ ಸೌಂದರ್ಯ ಅದ್ವಿತೀಯ. ಸಾಯಂಕಾಲದಲ್ಲಿ ಸೂರ್ಯಾಸ್ತದ ದೃಶ್ಯ,ವನ್ನು ನೋಡಲು ಸಾವಿರಾರು ಜನ ಬರುತ್ತಾರೆ. ಅಕ್ಟೋಬರ್ ತಿಂಗಳಿನಲ್ಲಿ ಆಕಾಶ ನಿರ್ಮಲವಾಗಿರುವುದರಿಂದ, ಮುಳುಗುವ ಸೂರ್ಯನ ದೃಶ್ಯ ಅತ್ಯಂತ ಮುದನೀಡುತ್ತದೆ. ಆದರೆ ಮಳೆಯೇ ಮಲೆನಾಡಿನ ಜೀವಾಳ. ಮಳೆಗಾಲದಲ್ಲಿ ಕಾದಿದ್ದು, ಸೂರ್ಯಾಸ್ತವನ್ನು ಕಾಣುವುದೇ ಒಂದು ಸಡಗರದ ಸನ್ನಿವೇಶ.

೬ .ವನಕೆ-ಅಬ್ಬೆ ಜಲಪಾತ
ಈ ಜಲಪಾತವು ಆಗುಂಬೆಯಿಂದ 4 ಕಿ.ಮೀ ದೂರದಲ್ಲಿದೆ, ತೀರ್ಥಹಳ್ಳಿ ತಾಲ್ಲೂಕಿನಲ್ಲಿರುವ ಸೂರ್ಯಾಸ್ತದ ಸ್ಥಳವಾಗಿದೆ. ಈ ಜಲಪಾತವು ಸಮೃದ್ಧ ಹಸಿರು ಮರಗಳಿಂದ ಮತ್ತು ನೈಸರ್ಗಿಕ ಸೌಂದರ್ಯದಿಂದ ಸುತ್ತುವರಿದಿದೆ.

೭ .ಲಿಂಗನಮಕ್ಕಿ ಅಣೆಕಟ್ಟು

ಲಿಂಗನಮಕ್ಕಿ ಜಲಾಶಯವು ಕರ್ನಾಟಕದ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡವಾಗಿ ೧೯೬೪ರಲ್ಲಿ ನಿರ್ಮಿತವಾದ ಒಂದು ಅಣೆಕಟ್ಟು. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 70 ಕಿಲೋಮೀಟರ್ಗಳಷ್ಟು ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ.

೮.ತಾವರೆ ಕೊಪ್ಪದ ಸಿಂಹ ಧಾಮ

ಶಿವಮೊಗ್ಗ ಪಟ್ಟಣದಿಂದ ಸುಮಾರು 10.0 ಕಿಮೀ ಮತ್ತು ಬೆಂಗಳೂರಿನಿಂದ 275.0 ಕಿಮೀ ದೂರದಲ್ಲಿದೆ. 1988 ರಲ್ಲಿ ಬೆಂಗಳೂರಿನ ಬಳಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ನಂತರ ಕರ್ನಾಟಕದ ಎರಡನೇ ಸಫಾರಿ ಪಾರ್ಕ್ ಆಗಿದೆ. ಈ ಹೆಸರಿನ ಹೊರತಾಗಿಯೂ, ಸಿಂಹ ಮತ್ತು ಹುಲಿಗಳು ಇಲ್ಲಿರುವ ಒಂದೇ ಪ್ರಾಣಿಗಳಲ್ಲ.

೯.ಸಿಗಂದೂರು

ಸಿಗಂದೂರು ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ. ಚೌಡೇಶ್ವರಿ ಅಮ್ಮನವರ ದೇವಾಲಯ ಇಲ್ಲಿದೆ. ಸಿಗಂದೂರೇಶ್ವರಿ ಎಂದೂ ಈ ಅಮ್ಮನವರನ್ನು ಕರೆಯುತ್ತಾರೆ. ಮಕರ ಸಂಕ್ರಾಂತಿ ವೇಳೆ ಇಲ್ಲಿ ಜಾತ್ರೆನಡೆಯುತ್ತದೆ. ಸಿಗಂದೂರು ಸಾಗರದಿಂದ ಸುಮಾರು ೩೨ ಕಿ.ಮಿ. ದೂರದಲ್ಲಿದೆ. ಸಾಗರದಿಂದ ಆವಿನಹಳ್ಳಿ ದಾರಿಯಾಗಿ ಹೊಳೆಬಾಗಿಲುವರೆಗೆ ರಸ್ತೆಯಿದೆ. ಹೊಳೆಬಾಗಿಲಿನಲ್ಲಿ ಲಿಂಗನಮಕ್ಕಿ ಅಣೆಕಟ್ಟಿನ ಹಿನ್ನೀರು ಎದುರಾಗುತ್ತದೆ. ಇಲ್ಲಿ ಮುಂದೆ ಸೇತುವೆ ಇಲ್ಲ. ಕಡವನ್ನು (Launch/Barge) ಬಳಸಿಕೊಂಡು ಹಿನ್ನೀರನ್ನು ದಾಟಬೇಕಾಗುತ್ತದೆ. ಈ ದಾರಿಯಾಗಿ ಬರುವ ಎಲ್ಲಾ ವಾಹನಗಳಿಗೂ ಈ ಕಡವನ್ನು ಬಳಸುವುದು ಅನಿವಾರ್ಯ. ಹಿನ್ನೀರು ಸುಮಾರು ೨ ಕಿ.ಮಿ. ಅಗಲವಿದೆ. ಕಡವು ನಿಗದಿತ ಸಮಯಗಳಲ್ಲಿ ಮಾತ್ರ ಲಭ್ಯ. ಇನ್ನೊಂದು ದಡದಲ್ಲಿರುವ ಕಳಸವಳ್ಳಿಯಿಂದ ದೇವಸ್ಥಾನ ಸುಮಾರು ೨ ಕಿ.ಮಿ. ದೂರದಲ್ಲಿದೆ.

೧೦ .ಸಕ್ಕರೆಬೈಲು ಆನೆ ಬಿಡಾರ

ಗಾಜನೂರು ಅಣೆಕಟ್ಟೆಯ ಸಮೀಪದಲ್ಲಿರುವ ಈ ಶಿಬಿರದಲ್ಲಿ ಆನೆಗಳ ತರಬೇತಿ ಹಾಗೂ ಪ್ರವಾಸಿಗಳಿಗೆ ಆನೆ ಸವಾರಿ ಮೊದಲಾದ ಚಟುವಟಿಕೆಗಳು ನಡೆಯುತ್ತವೆ. ಪ್ರತಿ ದಿನ ಬೆಳಿಗ್ಗೆ ೮ ರಿಂದ ೧೧ ರ ವರೆಗೆ ಪ್ರವಾಸಿಗಳಿಗೆ ಈ ಶಿಬಿರ ತೆರೆದಿರುತ್ತದೆ. ಈ ಸಮಯದ ನಂತರ ಆನೆಗಳನ್ನು ಕಾಡಿನಲ್ಲಿ ಬಿಡಲಾಗುತ್ತದೆ. ರಾತ್ರಿಯಿಡಿ ಕಾಡಿನಲ್ಲಿಯೇ ಇರುವ ಆನೆಗಳನ್ನು ಮತ್ತೆ ಮುಂಜಾನೆ ಶಿಬಿರಕ್ಕೆ ಕರೆತರಲಾಗುತ್ತದೆ

೧೧.ಶಿವಪ್ಪನಾಯಕನ ಕೋಟೆ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಹೊಸನಗರದಿಂದ ೧೫ ಕಿಮೀ ಒಂದು ಗ್ರಾಮ. ಇದರ ಹಿಂದಿನ ಹೆಸರು ಬಿದನೂರು, ಬಿದಿರೂರು. ಹಲವು ಶಾಸನಗಳಲ್ಲಿ ಈ ಊರನ್ನು ವೇಣುಪುರ ಎಂದೂ ಕರೆದಿದೆ. ಕೆಳದಿ ಇಕ್ಕೇರಿಗಳಲ್ಲಿ ಆಳಿದ ಅರಸರು ೧೬೪೦ರ ಹೊತ್ತಿಗೆ ಇದನ್ನು ತಮ್ಮ ರಾಜಧಾನಿಯನ್ನಾಗಿ ಮಾಡಿಕೊಂಡು ಬಿದನೂರ ಅರಸರಾದರು. ಘಟ್ಟದ ಕೆಳಗೆ ಇಳಿಯುವ ಹೊಸಂಗಡಿ ಘಾಟಿಯ ದಾರಿಯಲ್ಲಿದ್ದು ವ್ಯಾಪಾರ ಕೇಂದ್ರವೂ ಆದುದರಿಂದ ಬಹುಬೇಗನೆ ಬೆಳೆದು ದೊಡ್ಡ ನಗರವಾಯಿತು. ಕೋಟೆಕೊತ್ತಲಗಳು ಅರಮನೆಗಳು ರಚಿತವಾದುವು.

೧೨ .ಕವಲೇದುರ್ಗ
ತೀರ್ಥಹಳ್ಳಿ ತಾಲ್ಲೂಕಿನ ಹಸಿರು ಸಿರಿಯಿಂದ ಸಮೃದ್ಧವಾದ ಮೋಹಕ ತಾಣ.ತೀರ್ಥಹಳ್ಳಿಯಿಂದ ೧೮ ಕಿ.ಮೀ ಹಾಗೂ ಶಿವಮೊಗ್ಗದಿಂದ ಸುಮಾರು ೮೦ ಕಿ.ಮೀ ದೂರದಲ್ಲಿದೆ. ತೀರ್ಥಹಳ್ಳಿ – ಸಾಲೂರು ಮಾರ್ಗವಾಗಿ ದಟ್ಟ ಕಾಡುಗಳಿಂದ ಕೂಡಿದ ಸಹ್ಯಾದ್ರಿ ಶ್ರೇಣಿಯ ಮಡಿಲಲ್ಲಿ ಸಾಗಿದಾಗ ಈ ದುರ್ಗ ಎದುರಾಗುತ್ತದೆ. ಇದೊಂದು ಪೌರಾಣಿಕ ಮತ್ತು ಐತಿಹಾಸಿಕ ಮಹತ್ವದ ನೈಸರ್ಗಿಕ ಸುಂದರ ತಾಣ.ಇಲ್ಲಿ ೯ನೇ ಶತಮಾನದ ಕೋಟೆ ಇದೆ.

ಇನ್ನೂ ಆನೆಕ ಪ್ರಮುಕ ಯಾತ್ರ ಸ್ಥಳಗಳನ್ನ ಇಲ್ಲಿ ಹೆಸರಿಸಲಾಗಿದೆ. ಅ೦ಬುತೀರ್ಥ, ಶರಾವತಿಯ ಉಗಮ ಸ್ಥಾನ,ಹಿಡ್ಲುಮನೆ ಜಲಪಾತ (ನಿಟ್ಟೂರು),ಸಿರಿಮನೆ ಜಲಪಾತ ,, ಸೊರಬ ತಾಲೂಕಿನಲ್ಲಿರುವ ಗುಡವಿ ಪಕ್ಷಿಧಾಮ ಸೆಳೆಯುವ ಪ್ರಮುಕ ತಾಣಗಳು.

LEAVE A REPLY

Please enter your comment!
Please enter your name here