ಅಚ್ಚರಿ ನಿರ್ಧಾರ ಕೈಗೊಂಡ ಅನರ್ಹ ಶಾಸಕ ಎಂಟಿಬಿ ನಾಗರಾಜ್..!

0
2609

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ತಲೆನೋವಾಗಿ, ಸರ್ಕಾರವನ್ನು ಉರುಳಿಸಿದ ರಾಜ್ಯದ ಶ್ರೀಮಂತ ರಾಜಕಾರಣಿ ಎಂದೇ ಹೇಳಲಾಗುವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಡಲು ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಇದೀಗ ಗಾಂಧಿ ನಗರದಲ್ಲಿ ಭಾರೀ ಸದ್ದು ಮಾಡ್ತಿದೆ.

ಹೌದು, ಮತ್ತೋರ್ವ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಅವರ ಸಲಹೆ ಮೇರೆಗೆ ಸಿನಿಮಾ ನಿರ್ಮಾಣ ಮಾಡಲು ಎಂಟಿಬಿ ನಾಗರಾಜ್ ಆಸಕ್ತಿ ತೋರಿದ್ದು, ಸ್ಯಾಂಡಲ್ವುಡ್‍ಗೆ ನಿರ್ಮಾಪಕರಾಗಿ ಎಂಟ್ರಿ ಕೊಡಲಿದ್ದಾರೆ. ನಟ ಹಾಗೂ ನಿರ್ಮಾಪಕರಾಗಿರುವ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಜೊತೆಗೆ ಚರ್ಚೆ ನಡೆಸಿದ ಎಂಟಿಬಿ ನಾಗರಾಜ್, ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದು ಇದಕ್ಕಾಗಿ ತಯಾರಿ ನಡೆಸಿದ್ದಾರೆ. ತಮ್ಮ ಮೊದಲ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ಎಂಟಿಬಿ ನಿರ್ಧರಿಸಿದ್ದು, ಕಥೆ ಮತ್ತು ನಿರ್ದೇಶಕರ ಹುಡುಕಾಟದಲ್ಲಿದ್ದಾರೆ. ಇನ್ನು ಇತ್ತೀಚೆಗಷ್ಟೇ ಬಹುಕೋಟಿ ರೂಪಾಯಿ ಮೌಲ್ಯದ ರೋಲ್ಸ್ ರಾಯ್ ಕಾರು ಖರೀದಿಸಿ ಎಂಟಿಬಿ ನಾಗರಾಜ್ ಸುದ್ದಿಯಾಗಿದ್ದರು.

LEAVE A REPLY

Please enter your comment!
Please enter your name here