ಪ್ರಧಾನಿ ಮೋದಿ ವಿರುದ್ದ ರೊಚ್ಚಿಗೆದ್ದ ಉತ್ತರ ಕರ್ನಾಟಕದ ಮಂದಿ..!

0
541

ಭೀಕರ ಪ್ರವಾಹ ಮತ್ತು ವರುಣನ ಆರ್ಭಟಕ್ಕೆ ಸಿಕ್ಕಿ ತತ್ತರಿಸಿರುವ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸದಿರುವುದಕ್ಕೆ ಉತ್ತರ ಕರ್ನಾಟಕದ ಮಂದಿ ರೊಚ್ಚಿಗೆದ್ದಿದ್ದಾರೆ. ಅನೇಕರು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.

ಇನ್ನು ರಾಜ್ಯದ 17 ಜಿಲ್ಲೆಗಳ 80 ತಾಲ್ಲೂಕುಗಳಲ್ಲಿ 45 ವರ್ಷಗಳ ನಂತರ ಭೀಕರ ಪ್ರವಾಹ ಸಂಭವಿಸಿ ಅಪಾರ ನಷ್ಟ ಉಂಟಾಗಿದೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಆರ್ಥಿಕ ನೆರವು ಘೋಷಣೆ ಮಾಡಬೇಕಿತ್ತೆಂಬ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿವೆ. ಇನ್ನು ಕಳೆದ ವರ್ಷ ತಮಿಳುನಾಡು, ಕೇರಳ, ಮಹಾರಾಷ್ಟ್ರದಲ್ಲಿ ಸಂಭವಿಸಿದ ಪ್ರವಾಹದ ವೇಳೆ ಪ್ರಧಾನಿ ಮೋದಿಯವರು ಭೇಟಿ ನೀಡಿ ಪರಿಹಾರ ಘೋಷಣೆ ಮಾಡಿದ್ದರು. ಈಗ ಇಂತಹ ತಾತ್ಸಾರ ಮನೋಭಾವನೆ ಏಕೆ ಎಂದು ಕನ್ನಡಿಗರು ಪ್ರಶ್ನಿಸುತ್ತಿದ್ದಾರೆ.

2009ರಲ್ಲಿ ರಾಜ್ಯದಲ್ಲೂ ಇದೇ ರೀತಿ ಪ್ರವಾಹ ಉಂಟಾಗಿತ್ತು. ಅಂದಿನ ಪ್ರಧಾನಿ ಮನಮೋಹನ್‍ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿ ರಾಜ್ಯಕ್ಕೆ ಎರಡು ಸಾವಿರ ಕೋಟಿ ಪರಿಹಾರ ಘೋಷಣೆ ಮಾಡಿದ್ದರು. ಆದರೆ ಈಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಆಗಮಿಸಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿಯನ್ನಷ್ಟೇ ಪಡೆದರು. ಆದರೆ, ಈವರೆಗೂ ಯಾವುದೇ ಹಣವನ್ನೂ ಘೋಷಣೆ ಮಾಡಿಲ್ಲ. ಇನ್ನು ಕೇಂದ್ರ ಸಚಿವರು ಆಗಮಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.

LEAVE A REPLY

Please enter your comment!
Please enter your name here