ಧಾರವಾಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಶಾಲಾ-ಕಾಲೇಜುಗಳಿಗೆ ರಜೆ

0
131

ಬೆಳಗಾವಿ, ಬಾಗಲಕೋಟ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಉತ್ತರ ಕರ್ನಾಟಕದ ಪ್ರಮುಖ ಜೀವಧಾರೆ ಕೃಷ್ಣೆ ಮೈದುಂಬಿ ಹರಿಯುತ್ತಿದೆ. ಈ ಮಧ್ಯೆ ಧಾರವಾಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಧಾರವಾಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಈ ಎರಡು ರಜಾ ದಿನಗಳನ್ನು ಮುಂಬರುವ ಭಾನುವಾರ ದಿನಗಳಂದು ಕರ್ತವ್ಯ ನಿರ್ವಹಿಸಿ ಅವಧಿಗಳನ್ನು ಸರಿದೂಗಿಸಿಕೊಳ್ಳಲು ಅವರು ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here