‘ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡದಿದ್ರೆ ಬಿಜೆಪಿಗೆ ತಕ್ಕ ಪಾಠ’ ವಾಲ್ಮೀಕಿ ಶ್ರೀ ಎಚ್ಚರಿಕೆ..!

0
461

ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಇಲಾಖೆ ಸಚಿವ ಶ್ರೀರಾಮುಲು ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಡ ಹೆಚ್ಚಾಗಿದೆ. ವಾಲ್ಮೀಕಿ ಸಮುದಾಯ ಒಕ್ಕರೊಲಿನಿಂದ ಡಿಸಿಎಂ ಸ್ಥಾನಕ್ಕಾಗಿ ಆಗ್ರಹಿಸುತ್ತಿದೆ.

ವಾಲ್ಮೀಕಿ ಸಮಾಜದ ಪ್ರಮುಖ ನಾಯಕ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಇಲ್ಲದಿದ್ದರೆ ನಮ್ಮ ಸಮಾಜದ ಜನ ಬಿಜೆಪಿಗೆ ತಕ್ಕ ಪಾಠ ಕಲಿಸುವರು ಎಂದು ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಸಮಾಜದ ಶೇಕಡ 60 ರಷ್ಟು ಜನ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹೀಗಾಗಿ ವಾಲ್ಮೀಕಿ ಸಮಾಜದ ಮೂವರಿಗೆ ಸಚಿವ ಸ್ಥಾನ, ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಕೋರಲಾಗಿತ್ತು. ಆದರೆ, ಈಗ ಉಪಮುಖ್ಯಮಂತ್ರಿ ಸ್ಥಾನ ನೀಡದಿರುವುದರಿಂದ ಸಮಾಜದ ಜನರಲ್ಲಿ ಬೇಸರ ತಂದಿದೆ. ಇನ್ನಾದರೂ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸಮಾಜದ ಜನಪ್ರತಿನಿಧಿಗಳಿಗೆ ಸೂಕ್ತ ಸ್ಥಾನ ನೀಡಬೇಕು. ಇಲ್ಲದಿದ್ದರೆ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಇನ್ನು ನಿನ್ನೆ ಮೈಸೂರಿಗೆ ಆಗಮಿಸಿದ ಸಿಎಂ ಯಡಿಯೂರಪ್ಪನವರ ಕಾರನ್ನು ಮುತ್ತಿಗೆ ಹಾಕಿ ಡಿಸಿಎಂ ಸ್ಥಾನ ನೀಡುವಂತೆ ಪ್ರತಿಭಟಿಸಲಾಗಿದೆ.

LEAVE A REPLY

Please enter your comment!
Please enter your name here