ವಿಜಿ ಸಿದ್ದಾರ್ಥ್ ಅವರ ನಿಗೂಢ ಸಾವಿಗೆ ಗಣ್ಯಾದಿ ಗಣ್ಯರೆಲ್ಲ ಸಂತಾಪ ವ್ಯಕ್ತಪಡಿಸಿದ್ದಾರೆ.. ಎಸ್ಎಂ ಕೃಷ್ಣ ಅವರ ಅಳಿಯ ಹಾಗೂ ಕಾಫಿ ಡೇ ಸಂಸ್ಥಾಪಕರಾದ ವಿಜಿ ಸಿದ್ಧಾರ್ಥ ಅವರ ನಿಧನಕ್ಕೆ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸಿದ್ಧಾರ್ಥ್ ಅವರ ಸಾವು ತೀವ್ರ ಆಘಾತ ಹಾಗೂ ದುಃಖ ತಂದಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ ..
ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ದಾರ್ಥ್ ಅವರ ನಿಧನದ ಸುದ್ದಿ ತಿಳಿದು ಆಘಾತವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಅವರು ಸಹಿತ ಸಂತಾಪ ವ್ಯಕ್ತಪಡಿಸಿದ್ದಾರೆ ..
ಇನ್ನು ಇಡೀ ನಾಡಿನ ಅಸಂಖ್ಯಾತ ಕಾರ್ಮಿಕ ಬಂಧುಗಳು ಸಿದ್ಧಾರ್ಥ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ ..
ಇಂದು ಬೆಳಗ್ಗೆ ನೇತ್ರಾವತಿ ನದಿಯಲ್ಲಿ ವಿಜಿ ಸಿದ್ದಾರ್ಥ್ ಅವರ ಮೃತದೇಹ ಪತ್ತೆಯಾಗಿದ್ದು ಈಗ ಚಿಕ್ಕಮಗಳೂರಿನ ಚೇತನ ಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಯುತ್ತಿದೆ..
ಇದರ ಬೆನ್ನಲ್ಲೇ ಕಾಫಿ ಬೋರ್ಡ್ನ ಹಂಗಾಮಿ ಅಧ್ಯಕ್ಷರನ್ನಾಗಿ ಎಸ್ವಿ ರಂಗನಾಥ್ ಅವರನ್ನ ಮಾಡಲಾಗಿದೆ ಅಂತಾ ಸಂಸ್ಥೆ ತಿಳಿಸಿದೆ. ಜೊತೆಗೆ ನಿತಿನ್ ಬಾಗ್ಮನೆ ಅವರನ್ನ ಹಂಗಾಮಿ ಚೀಫ್ ಆಪರೇಟರ್ ಆಗಿ ನೇಮಕ ಮಾಡಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.