ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ

0
42

ಬೆಂಗಳೂರು: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಶೀಘ್ರದಲ್ಲೇ ಘೋಷಣೆಯಾಗಲಿದೆ.
ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲೆ ರಚನೆಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ. ಸಚಿವ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳ ಸಚಿವ ಮಧುಸ್ವಾಮಿ, ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದ್ದು, ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ಸಿಗಲಿದೆ. ಜಿಲ್ಲೆಯ ರಚನೆ ಸಂಬಂಧ ಪ್ರಕ್ರಿಯೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದು ತಿಳಿಸಿದರು.
ಡಿಸೆಂಬರ್ 7ರಿಂದ 15ರವರೆಗೆ ವಿಧಾನಸಭೆಯ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಯಲಿದೆ ಎಂದು ತಿಳಿಸಿದರು.

“ಮರಾಠ ಅಭಿವೃದ್ಧಿ ಪ್ರಾಧಿಕಾರ ಅಲ್ಲ, ಸಮುದಾಯ ನಿಗಮ”

ಮರಾಠ ಅಭಿವೃದ್ಧಿ ಪ್ರಾಧಿಕಾರ ಹೆಸರು ಗೊಂದಲ ಹಿನ್ನಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ನಿರ್ಧರಿಸಲಾಗಿದೆ. ಇನ್ನು ಮುಂದೆ ಮರಾಠ ಸಮುದಾಯ ನಿಗಮ ಎಂದು ಬದಲಾವಣೆಯಾಗಲಿದೆ. ಮುಂದುವರಿದು ಮಾತನಾಡಿದ ಅವರು, ಮರಾಠ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರಾಧಿಕಾರ ಮಾಡಬೇಕಾದರೆ ಕಾನೂನು ಮಾಡಬೇಕು. ಆದರೆ ನಿಗಮಕ್ಕೆ ಸರ್ಕಾರವೇ ನಿರ್ಧಾರ ಕೈಗೊಳ್ಳಬಹುದು. ಹಣ ಎಷ್ಟು ನಿಗದಿ ಮಾಡಬೇಕು ಎಂಬುದು ಇನ್ನೂ ಚರ್ಚೆಯಾಗಿಲ್ಲ. ಒಂದು ಸಮುದಾಯದ ಅಭಿವೃದ್ಧಿ ವಿಷಯದಲ್ಲಿ ಯಾಕೆ ವಿರೋಧ ಮಾಡುತ್ತಿದ್ದಾರೋ ಗೊತ್ತಿಲ್ಲ. ಆದರೂ ಅಭಿವೃದ್ಧಿಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಪ್ರವಾಹ ಪೀಡಿತ ಜಿಲ್ಲೆಗೆ 1000 ಕೋಟಿ

ಪ್ರವಾಹ ಪೀಡಿತ ಜಿಲ್ಲೆಗಳಿಗೆ 1000 ಕೋಟಿ ರೂ. ಬಿಡುಗಡೆ ಮಾಡಿ ಪರಿಹಾರ ಕಾಮಗಾರಿ ಕೈಗೊಳ್ಳಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದರು. ಎಸ್‍ಸಿ- ಎಸ್‍ಟಿ ಮೀಸಲಾತಿ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿ, ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗುತ್ತದೆ. ಒಂದು ವಾರದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ. ಸಮಿತಿ ವರದಿ ಆಧರಿಸಿ ಮೀಸಲು ಹೆಚ್ಚಳ ಮಾಡಲಾಗುತ್ತದೆ ಎಂದರು.

ಕೃಷ್ಣಾ ಭಾಗ್ಯ ಜಲ ನಿಗಮ, ಕಾವೇರಿ ಅಭಿವೃದ್ಧಿ ನಿಗಮ ಮತ್ತು ವಿಶ್ವೇಶ್ವರಯ್ಯ ಅಭಿವೃದ್ಧಿ ನಿಗಮಕ್ಕೆ ಸಾಲ ಪಡೆಯಲು ಅನುಮತಿ ನೀಡಲಾಗಿದೆ. ಹೊಸಪೇಟೆಯಲ್ಲಿ 13 ಕೋಟಿ ಅಂದಾಜು ವೆಚ್ಚದಲ್ಕಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಮಾಡಲಾಗುವುದು. ಎಸ್‍ಸಿ-ಎಸ್‍ಟಿಗೆ ಮೀಸಲು ಪ್ರಮಾಣ ಹೆಚ್ಚಳ ನಿಗದಿಗೆ ಸಚಿವ ಸಂಪುಟ ಉಪಸಮಿತಿ ರಚನೆ ಮಾಡಲು ಸಿಎಂಗೆ ಅಧಿಕಾರ ನೀಡಲಾಗುವುದು ಎಂದರು.

ಸಾಲಿನಲ್ಲಿ 21 ಸಾರ್ವತ್ರಿಕ ರಜೆ ಮತ್ತು19 ನಿರ್ಬಂಧಿತ ರಜೆ ನೀಡಲು ಅನುಮೋದನೆ ಸಿಕ್ಕಿದ್ದು, ಲೋಕಸೇವಾ ಆಯೋಗದ ಅನುಮತಿ ಇಲ್ಲದೆ ಸರ್ಕಾರಿ ನೌಕರರ ಮೇಲೆ ಕ್ರಮ ಕೈಗೊಳ್ಳಲು ನಿಯಮಾವಳಿ ತಿದ್ದುಪಡಿ ಮಾಡಲಾಗುತ್ತದೆ ಎಂದು ನುಡಿದರು.

ಮಕ್ಕಳ ಜ್ಞಾಪಕ ಶಕ್ತಿ, ಏಕಾಗ್ರತೆ, ಚುರುಕುತನ ಮತ್ತು ಕೌಶಲ್ಯ ಅಭಿವೃದ್ಧಿ ವೃದ್ಧಿಸಲು ಆಯುರ್ವೇದದ ಉತ್ಪನ್ನವಾದ ‘ಬ್ರಹ್ಮ ಶಂಕರ ‘ ಪರಿಹಾರ ಒದಗಿಸುತ್ತದೆ . ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನುರಿತ ಮತ್ತು ಅನುಭವಿ ಆಯುರ್ವೇದದ ತಜ್ಞ ವೈದ್ಯರ ಸಹಾಯದಿಂದ ನಿರಂತರ ಸಂಶೋಧನೆಗೆ ಪ್ರೋತ್ಸಾಹ ನೀಡಿದ ಪರಿಣಾಮವಾಗಿ ನೈಸರ್ಗಿಕವಾಗಿ ಬ್ರಹ್ಮ ಶಂಕರ ರೂಪುಗೊಂಡಿದೆ.

ಬ್ರಹ್ಮ ಶಂಕರದಲ್ಲಿ ಪ್ರಧಾನವಾಗಿ ಬ್ರಾಹ್ಮೀ ಎಲೆ, ಮಂಡೂಕ ಪರಿಣಿ,ಶಂಖ ಪುಷ್ಟಿ, ಅಶ್ವಗಂಧ,ಮಾಲ್ಕಂಗನಿ,ಜಟಮಾನಸಿ,ತಗರ್ ಅಥವಾ ಸುಗಂಧ ಬಾಲಾ, ಅಮೃತ ಬಳ್ಳಿ,ಸಂಜೆ,ವೀಟ್ ಜರ್ಮ್ ಅಥವಾ ಗೋಧಿ ಭ್ರೂಣವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಂಪೂರ್ಣ ನೈಸರ್ಗಿಕವಾಗಿ ಬ್ರಹ್ಮಶಂಕರದಲ್ಲಿ ಸೇರಿಸಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿದೆ.ಬ್ರಾಹ್ಮೀ ಎಂದರೆ ಸರಸ್ವತಿ . ಮಕ್ಕಳು ಬ್ರಾಹ್ಮೀ ಮುಹೂರ್ತದಲ್ಲಿ ಓದಿದರೆ ಮರೆಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಮಕ್ಕಳ ದೇಹ ಬಹಳ ಸೂಕ್ಷ್ಮವಾಗಿದ್ದು ಬಹುಬೇಗ ಜ್ವರ,ಕೆಮ್ಮು,ಸೋಂಕುಗಳಿಗೆ ತುತ್ತಾಗುತ್ತಾರೆ.ಬ್ರಹ್ಮಶಂಕರ ನಿಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರನ್ನು ಸಧೃಡ ರನ್ನಾಗಿ ಮಾಡುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.

ಒಂದು ಆರೋಗ್ಯವಂತ, ಜ್ಞಾನವಂತ , ಬುದ್ಧಿವಂತ ಸಮಾಜಕ್ಕಾಗಿ ‘ಬ್ರಹ್ಮ ಶಂಕರ ‘ ನಿಮ್ಮ ಮಕ್ಕಳಿಗೆ ಅತ್ಯವಶ್ಯಕವಾಗಿದೆ.

BUY NOW

 

LEAVE A REPLY

Please enter your comment!
Please enter your name here