‘ಏಕಾಂಗಿ’ ಸಚಿವ ಸಂಪುಟದಲ್ಲಿ ಯಡ್ಡಿ ತೆಗೆದುಕೊಂಡ ನಿರ್ಣಯಗಳೇನು..?!

0
114

ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದೆ. ಅಚ್ಚರಿ ಎಂದರೆ ವಿಧಾನಸೌಧದಲ್ಲಿ ‘ಏಕಾಂಗಿ’ಯಾಗಿಯೇ ಅವರು ಮಹತ್ವದ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ 66 ಸಂಖ್ಯೆಯ ಸಣ್ಣ ನೀರಾವರಿ/ಜಿಲ್ಲಾ ಪಂಚಾಯತ್ ಕೆರೆಗಳನ್ನು ಮೂಡಿ ಗ್ರಾಮದ ಹತ್ತಿರ ವರದಾ ನದಿಯಿಂದ ನೀರನ್ನೆತ್ತಿ ತುಂಬಿಸುವ 285 ಕೋಟಿಗಳ ಮುಡಿ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡಲು ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಯಿತು. ಎನ್‍ಡಿಆರ್‍ಎಫ್‍ನ 6,200 ರೂಪಾಯಿಗಳೊಂದಿಗೆ ರಾಜ್ಯ ಸರ್ಕಾರದ 3800 ರೂಪಾಯಿಗಳನ್ನು ಸೇರಿಸಿ ಒಟ್ಟು 10,000 ರೂಪಾಯಿಗಳ ಪರಿಹಾರ ನಿರ್ಧಾರ ತೆಗೆದುಕೊಳ್ಳಲಾಯಿತು.

ಶಿವಮೊಗ್ಗ ಕಿರು ವಿಮಾನ ನಿಲ್ದಾಣವನ್ನ ರಾಜ್ಯ ಸರ್ಕಾರದ ಕೆಎಸ್ ಐಐಡಿಸಿ ಸಂಸ್ಥೆಯ ಮೂಲಕ 38 ಕೋಟಿಗಳ ಅಂದಾಜು ಮೊತ್ತದಲ್ಲಿ ಅಭಿವೃದ್ದಿ ಪಡಿಸಲು ಅನುಮೋದನೆ.

ಸತಾರೆಂ ಎಂಟಪ್ರ್ರೈಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯವರಿಗೆ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕವನ್ನು ಸ್ಥಾಪಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಶದಲ್ಲಿರುವ ಕನ್ನಹಳ್ಳಿಯಲ್ಲಿರುವ ಘನತ್ಯಾಜ್ಯ ಘಟಕದಲ್ಲಿನ 20 ಎಕರೆ ಜಾಗವನ್ನು 30 ವರ್ಷಗಳ ಅವಧಿಗೆ `ಉಪಯೋಗಕ್ಕೆ ಮಾತ್ರ’ ಆಧಾರದ ಮೇಲೆ ನೀಡಲು ತೀರ್ಮಾನಿಸಲಾಯಿತು.

LEAVE A REPLY

Please enter your comment!
Please enter your name here