ಡಿಕೆಶಿ ತಾಯಿ ಅಂದು ಹೇಳಿದ ಮಾತು ಇದೀಗ ಬಿಜೆಪಿಗೆ ವರವಾಯ್ತು..! ಅಂದು ಡಿಕೆಶಿ ತಾಯಿ ಹೇಳಿದ್ದೇನು….?

0
1213

ಡಿಕೆ ಶಿವಕುಮಾರ್ ಅವರನ್ನು ಇಡಿ ಬಂಧಿಸಿದ ನಂತರ ದೇಶದಾದ್ಯಂತ ಕಾಂಗ್ರೆಸ್ ತೀವ್ರ ಪ್ರತಿಭಟನೆ ನಡೆಸಿದೆ. ರಾಜ್ಯದಲ್ಲಿಯೂ ಅನೇಕ ಕಡೆ ಪ್ರತಿಭಟನೆ ನಡೆಯುತ್ತಿದೆ. ಬಿಜೆಪಿಯೇ ದ್ವೇಷದ ರಾಜಕೀಯದಿಂದ ಡಿಕೆಶಿಯನ್ನು ಬಂಧಿಸಿದೆ ಎಂದು ಸಿದ್ದರಾಮಯ್ಯ ಸಹಿತ ಅನೇಕ ನಾಯಕರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಈ ಮಧ್ಯೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ಕಾಂಗ್ರೆಸ್ ನಾಯಕರಿಗೆ ಮುಜುಗರ ಉಂಟು ಮಾಡಿದೆ. ಅದುವೇ ಈ ಹಿಂದೆ ಡಿಕೆ ಶಿವಕುಮಾರ್ ಅವರ ತಾಯಿ ನೀಡಿದ್ದ ಹೇಳಿಕೆ.

ಹೌದು, ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ, ಡಿಕೆಶಿ ಮನೆಯ ಮೇಲೆ ಐಟಿ ದಾಳಿ ನಡೆಸಿದಾಗ ಡಿಕೆಶಿ ತಾಯಿ ಸಿದ್ದರಾಮಯ್ಯನವರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. “ನನ್ನ ಮಗನ ಕೈಯಲ್ಲಿ ಸಿದ್ದರಾಮಯ್ಯ ಎಲ್ಲ ಕೆಲಸವನ್ನು ಮಾಡಿಸಿಕೊಂಡು ನಂತರ ನಂಬಿಸಿ ಕತ್ತು ಕೊಯ್ಯುತ್ತಾನೆ. ಸಿದ್ದರಾಮಯ್ಯ ನಮ್ಮ ಪಾರ್ಟಿಯವನೇ ಆದ್ರು ನನಗೆ ಅವರ ಮೇಲೆ ಅಸಮಾಧಾನವಿದೆ. ನಮ್ಮ ಮನೆಯ ಮೇಲೆ ಐಟಿ ದಾಳಿ ಮಾಡಿರುವುದರ ಹಿಂದೆ ಸಿದ್ದರಾಮಯ್ಯನವರ ಕೈವಾಡ ಇರಬಹುದು ಎಂದು ಕಿಡಿಕಾರಿದ್ದರು.

ಸದ್ಯ ಈ ವಿಡಿಯೋವನ್ನೇ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆದಿದೆ. ಡಿಕೆಶಿ ಬಂಧನವಾಗಲು ಕಾಂಗ್ರೆಸ್ ನಾಯಕರೇ ಕಾರಣ ಎನ್ನುವ ಬಗ್ಗೆಯೂ ಚರ್ಚೆ ನಡೆದಿದ್ದು, ಈ ವಿಡಿಯೋ ಇದೀಗ ಕಾಂಗ್ರೆಸ್ ನಾಯಕರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಬಿಜೆಪಿ ನಾಯಕರು ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ.

ಮತ್ತಷ್ಟು ಸುದ್ದಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು.(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here