ಕಾಂಗ್ರೆಸ್ ಯಾವ ಮುಖ ಇಟ್ಕೊಂಡು ಮತ ಕೇಳುತ್ತೆ..? ಗೆಲುವಿನ ಭ್ರಮೆಯಲ್ಲಿ ಬಿಜೆಪಿ: ಹೆಚ್.ಡಿ ಕುಮಾರಸ್ವಾಮಿ ಟಾಂಗ್

0
145

ಬೆಂಗಳೂರು: ಆರ್.ಆರ್ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಯಾವ ಮುಖ ಹೊತ್ತು ಮತ ಕೇಳುತ್ತೆ.. ಬಿಜೆಪಿ ಗೆಲುವಿನ ಭ್ರಮೆಯಲ್ಲಿ ಇದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಆರ್. ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಈ ಬಾರಿ ನಾನು ನಿಷ್ಟಾವಂತ ಕಾರ್ಯಕರ್ತನ ಪರ ಇರ್ತೇನೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ. ಆರ್,ಆರ್ ನಗರ 2008ರಲ್ಲಿ ರಚನೆಯಾಗಿತ್ತು. ಈವೆರೆಗೆ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಎರಡು ಬಾರಿ ಗೆಲುವು ಸಾಧಿಸಿದೆ ಎಂದರು.

ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟಿಕೊಂಡು ಮತ ಕೇಳುತ್ತಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದೇ ವೇಳೆ ಬಿಜೆಪಿ ವಿರುದ್ದವೂ ಕಿಡಿಕಾರಿದ ಹೆಚ್.ಡಿ ಕುಮಾರಸ್ವಾಮಿ, ಕೊರೋನಾ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿಯವರು ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.

ಮೂರು ಪಕ್ಷದ ಅಭ್ಯರ್ಥಿಗಳಿಂದ ಇಂದೇ ನಾಮಪತ್ರ ಸಲ್ಲಿಕೆ

ಬೆಂಗಳೂರಿನ ರಾಜರಾಜೇಶ್ವರಿ ನಗರದ ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು.ಇಂದು ಬೆಳಿಗ್ಗೆ 10.30ಕ್ಕೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಂದ ಬಿ ಫಾರಂ ಪಡೆದು ನಂತರ ಆರ್.ಆರ್ ನಗರ ಬಿಬಿಎಂಪಿ ಕಚೇರಿಗೆ ತೆರಳಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಕೃಷ್ಣಮೂರ್ತಿ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಾಥ್ ನೀಡಿದರು.

ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ನಾಮಪತ್ರ ಸಲ್ಲಿಸಿದರು‌. ಕುಸುಮಾಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಕೃಷ್ಣ ಭೈರೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಾಥ್ ನೀಡಿದರು.

ಇತ್ತ ಬಿಜೆಪಿ ಅಭ್ಯರ್ಥಿ ಮುನಿರತ್ನ ಸೈಕಲ್ ಸವಾರಿ ಹಾಕುವ ಮೂಲಕ ನಾಮಪತ್ರ ಸಲ್ಲಿಕೆಗೆ ಹೋದದ್ದು ಎಲ್ಲರನ್ನೂ ಆಕರ್ಷಿಸಿತು. ನಂತರ ಸಾಕಷ್ಟು ಕಾರ್ಯಕರ್ತರ ಸಮೂಹದೊಂದಿಗೆ ನಾಮ ಪತ್ರ ಸಲ್ಲಿಸಿ ತಮ್ಮ ಬಲ ಪ್ರದರ್ಶಿಸಿದರು.

ಇನ್ನು ಈ ಬಾರಿ ಆರ್ ಆರ್ ನಗರ ವಿಧಾನಸಭೆ ಉಪ ಚುನಾವಣೆ ಟಫ್ ಫೈಟ್ ಕೊಡಲಿದೆ ಎನ್ನಲಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ನಡುವೆ ಭಾರೀ ಫೈಪೋಟಿ ಕೊಡುವ ಸಾಧ್ಯತೆ ಇದ್ದು, ಯಾರನ್ನು
ಕ್ಷೇತ್ರದ ಜನ ಕೈ ಹಿಡಿಯುತ್ತಾರೆ ಅನ್ನೋದನ್ನು ಕಾದು ನೋಡ್ಬೇಕಿದೆ.

LEAVE A REPLY

Please enter your comment!
Please enter your name here