ಬಿಜೆಪಿಯ ಯಡಿಯೂರಪ್ಪಗೆ ಬಿಗ್ ಶಾಕ್ ಸರ್ಕಾರ ಉರುಳಿಸುವ ಮಾತುಗಳನ್ನಾಡಿದ್ದು ಯಾರು ..?

0
305

ಶಾಸಕರುಗಳ ರಾಜೀನಾಮೆಯಿಂದಾಗಿ ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿದ್ದು, ಕುಮಾರಸ್ವಾಮಿ ರಾಜೀನಾಮೆ ನೀಡಿದ ಬಳಿಕ ಬಿಜೆಪಿಯ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾರೆ. ಅವರ ಸಚಿವ ಸಂಪುಟ ಇನ್ನೂ ವಿಸ್ತರಣೆಯಾಗದಿರುವ ಮಧ್ಯೆ, ಬಿಜೆಪಿ ಶಾಸಕರೊಬ್ಬರು ಸರ್ಕಾರ ಉರುಳಿಸುವ ಮಾತುಗಳನ್ನಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಹೌದು, ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಇಂತಹದೊಂದು ಸ್ಫೋಟಕ ಹೇಳಿಕೆ ನೀಡಿದ್ದು, ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರ ನೆರವಾಗದಿದ್ದರೆ, ಅವರುಗಳಿಗೆ ಮನೆ ಕಟ್ಟಿ ಕೊಡದಿದ್ದರೆ ಸರ್ಕಾರವನ್ನು ಉರುಳಿಸುತ್ತೇನೆ ಎಂದು ಹೇಳಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹತ್ವದ ಸಂಗತಿಯೆಂದರೆ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಳ್ಳಲು ಬಾಲಚಂದ್ರ ಜಾರಕಿಹೊಳಿ ಅವರ ಸಹೋದರ, ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ಕಾರಣರಾಗಿದ್ದರು. ಇದೀಗ ಬಾಲಚಂದ್ರ ಜಾರಕಿಹೊಳಿ ಸರ್ಕಾರ ಉರುಳಿಸುವ ಮಾತುಗಳನ್ನಾಡಿದ್ದಾರೆ. ಅವರ ಈ ಮಾತು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸ್ಪಷ್ಟನೆ ನೀಡಿರುವ ಬಾಲಚಂದ್ರ ಜಾರಕಿಹೊಳಿ, ಬಾಯಿ ತಪ್ಪಿನಿಂದ ಈ ಹೇಳಿಕೆ ಬಂದಿದೆ ಹೊರತು ಯಾವುದೇ ದುರುದ್ದೇಶದಿಂದಲ್ಲ ಎಂದು ಹೇಳಿದ್ದಾರೆ

LEAVE A REPLY

Please enter your comment!
Please enter your name here