ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಕಳೆದ ಕೆಲ ದಿನಗಳಿಂದ ನಗರದ ಆಸ್ಪತ್ರೆಯಲ್ಲಿ ಹೃದಯ ಸಂಬಂದಿತವಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ವೈದ್ಯರು ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಮಾಡಲು ಮುಂದಾಗಿದ್ದಾರೆ ಎಂಬುದು ತಿಳಿದುಬಂದಿದೆ. ಮಲ್ಲೇಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಅಂಜಿಯೋಪ್ಲ್ಯಾಸ್ಟಿ ಶಸ್ತ್ರಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರನ್ನು ಡಿಸ್ಚಾರ್ಜ್ ಮಾಡುವಷ್ಟು ಗುಣವಾಗಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಸಿದ್ದರಾಮಯ್ಯನವರನ್ನು ಭೇಟಿಯಾಗಲು ಬರುವ ಪ್ರತಿಯೊಬ್ಬರನ್ನು ಖುಷಿಯಿಂದ, ಲವಲವಿಕೆಯಿಂದ ಮಾತನಾಡಸುತ್ತಿರುವುದನ್ನು ಗಮನಿಸಿ ಹೇಳುವುದಾದರೆ, ಅವರು ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲೇ ವಿಶ್ರಾಂತಿ ಪಡೆಯಬಹುದು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಇದೇ 11 ರಂದು ಹೆಚ್ಚಿನ ತಪ್ಪಾಸಣೆಗಾಗಿ ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದರು, ಆಸ್ಪತ್ರೆಯಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ತಿಳಿದುಬಂದ್ದದು. ಅವರ ಹೃದಯಕ್ಕೆ ರಕ್ತಪರಿಚನೆಯಲ್ಲಿ ತೊಂದರೆಯಾಗಿರುವುದು ಕಂಡ ಬಂದ ಕಾರಣ ಅಂಜಿಯೋ ಪ್ಲ್ಯಾಸ್ಟ್ರಿ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸ್ಟಂಟ್ ಅಳವಡಿಸಲಾಗಿತ್ತು. ಸದ್ಯ ಸಿದ್ದರಾಮಯ್ಯ ಅಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎಂಬುದು ತಿಳಿದುಬಂದಿದೆ.
ಸಿದ್ದರಾಮಯ್ಯ ಅಸ್ಪತ್ರೆಯಲ್ಲಿ ಇದ್ದ ದಿನಗಳಲ್ಲಿ ಅವರ ಆರೋಗ್ಯ ವಿಚಾರಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಈಶ್ವರಪ್ಪ ಹೂಗುಚ್ಚ ನೀಡಿ ಮಾತನಾಡಿಸಿದರು. ನಿನ್ನೆ ಸುತ್ತೂರು ಮಠಾಧೀಶರಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ದು ಅವರ ಆರೋಗ್ಯವನ್ನು ವಿಚಾರಿಸಿಕೊಂಡರು. ಕೆಲ ಸಮಯ ಅವರೊಡನೆ ಮಾತನಾಡಿ ಶೀಘ್ರ ಗುಣಮಖರಾಗಿ ಎಂದು ಹಾರೈಸಿದರು.