ಬಿಬಿಎಂಪಿ ಕಡತದ ಕಚೇರಿಗೆ ಬೆಂಕಿ ಇಟ್ಟ ‘ಭ್ರಷ್ಟಾಚಾರಿ’ ಯಡ್ಡಿ ಸರ್ಕಾರದಲ್ಲಿ ಏನಾದ ಗೊತ್ತಾ..?!

0
768

ಡಿಕೆ ಶಿವಕುಮಾರ್ ಬಂಧನವಾದ ನಂತರ ಜೆಡಿಎಸ್ ನಾಯಕರಾದ ಎಚ್.ಡಿ ಕುಮಾರಸ್ವಾಮಿ ಮತ್ತು ಎಚ್.ಡಿ ದೇವೇಗೌಡರು ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ. ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿರುವ ಎಚ್‍ಡಿಕೆ ಕೆಲ ಸ್ಪೋಟಕ ಮಾಹಿತಿಗಳನ್ನು ಬಿಚ್ಚಿಟ್ಟಿದ್ದಾರೆ. ಈ ಹಿಂದೆ ಬೆಂಗಳೂರಿನ ಬಿಬಿಎಂಪಿಯಲ್ಲಿ ನಡೆದ ಕರ್ಮಕಾಂಡ ಮುಚ್ಚಿಹಾಕಲು ಕಡತದ ಕಚೇರಿಗೆ ಬೆಂಕಿ ಇಟ್ಟು ‘ಭ್ರಷ್ಟಾಚಾರದ ರೂವಾರಿ’ ಎನಿಸಿಕೊಂಡಿದ್ದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಎನ್ನುವ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಕಡತದ ಕಚೇರಿಗೆ ಬೆಂಕಿ ಇಟ್ಟು ಇಂದು ಯಡಿಯೂರಪ್ಪ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದರೆ, ಇನ್ನು ಬಿಜೆಪಿ ಸರ್ಕಾರದಲ್ಲಿ ಒಬ್ಬ ಪ್ರಾಮಾಣಿಕ ಮಂತ್ರಿಯೂ ಇಲ್ಲ. ಇನ್ನು ನಮ್ಮ ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದು ಏಕೆ ಎಂದು ಉಪಮುಖ್ಯಮಂತ್ರಿಗಳಾದ ಅಶ್ವತ್ಥ ನಾರಾಯಣ್ ಹೇಳಬೇಕು. ನನ್ನ ಬಗ್ಗೆ ಮಾತನಾಡಲು ಅವರಿಗೆ ಯಾವುದೇ ನೈತಿಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿದ್ದಾಗ ಅಕ್ರಮವಾಗಿದೆ ಎಂದು ಹೇಳುವ ಅಶ್ವತ್ಥ ನಾರಾಯಣ ಅದರ ಸಾಕ್ಷಿ ಬಹಿರಂಪಡಿಸಲಿ ಎಂದು ಸವಾಲು ಹಾಕಿದರು. ನೈತಿಕತೆ ಎಂದರೆ ಏನು ಎಂಬುದೇ ಗೊತ್ತಿಲ್ಲದಿರುವ ಅವರಿಂದ ನಾನು ಕಲಿಯಬೇಕಾದ್ದು ಏನು ಇಲ್ಲ ಎಂದು ಕಿಡಿಕಾರಿದರು.

ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‍ಡಿಕೆ, ನಾನು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಪಕ್ಷದ ಶಾಸಕರ ಖರೀದಿ ಯತ್ನ ಮಾಡಲಾಗಿತ್ತು. ಶಾಸಕರ ಖರೀದಿಗೆ ಬಳಸಿದ ಹಣ ಬ್ಲ್ಯಾಕ್ ಮನಿಯೋ, ವೈಟ್ ಮನಿಯೋ ಎಂಬುದನ್ನು ಬಿಜೆಪಿ ಬಹಿರಂಗಪಡಿಸಬೇಕು. ಇನ್ನು ಮೈತ್ರಿ ಸರ್ಕಾರ ಪತನಗೊಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ಶರಣಗೌಡರಿಗೆ ಆಮಿಷ ಒಡ್ಡಿರುವುದನ್ನು ಸ್ವತಃ ಅವರೆ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಆದರು ಇಡಿ, ಐಟಿ ಇಲಾಖೆ ಯಾಕೆ ದೂರು ದಾಖಲಿಸಿಕೊಂಡಿಲ್ಲ ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರ ಕೇವಲ ವಿಪಕ್ಷಗಳ ನಾಯಕರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ದ್ವೇಷ ಸಾಧಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮತ್ತಷ್ಟು ಸುದ್ದಿಗಳನ್ನು ಓದಲು ನಮ್ಮ ಪೇಜ್ ಲೈಕ್ ಮಾಡಿ ಹಾಗೂ ನಿಮ್ಮ ಅನಿಸಿಕೆಗಳನ್ನು ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ ಧನ್ಯವಾದಗಳು.(ಈ ಕೆಳಗಿರುವ ವಿಡಿಯೋ ನೋಡಿ)

LEAVE A REPLY

Please enter your comment!
Please enter your name here