ಯಡ್ಡಿಯ ದೆಹಲಿ ಭೇಟಿಯ ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಕುಮಾರಸ್ವಾಮಿ..!

0
322

ಸಿಎಂ ಯಡಿಯೂರಪ್ಪ ಕಳೆದ ವಾರದಿಂದ ದೆಹಲಿಗೆ ತೆರಳಲು ಕಾತುರರಾಗಿದ್ದರು. ಇನ್ನೊಂದೆಡೆ ಉಪಚುನಾವಣೆ ಘೋಷಣೆಯಾದ ನಂತರ ಆ ಕಾತುರ ಮತ್ತಷ್ಟು ಹೆಚ್ಚಿತು. ಎಲ್ಲ ನಿರ್ಧಾರಗಳಿಗೂ ದೆಹಲಿಯಿಂದ ಅಪ್ಪಣೆ ಪಡೆಯಬೇಕಾದ ಅನಿವಾರ್ಯತೆಯಲ್ಲಿರುವ ಸಿಎಂ ಯಡಿಯೂರಪ್ಪನವರಿಗೆ ದೆಹಲಿ ಭೇಟಿ ಅತಿ ಮುಖ್ಯವಾಗಿತ್ತು. ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಅವರು ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಅಮಿತ್ ಶಾ ಭೇಟಿಯಾಗಿ ಸುದಿರ್ಘ ಮಾತುಕತೆ ನಡೆಸಿದ್ದಾರೆ.

ಇನ್ನು ಸಿಎಂ ಮಾಜಿ ಎಚ್. ಡಿ. ಕುಮಾರಸ್ವಾಮಿ ಅವರು ಸಿಎಂ ಯಡಿಯೂರಪ್ಪ ದೆಹಲಿ ಭೇಟಿಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, “ಆಪರೇಷನ್ ಕಮಲದ ಸಂತ್ರಸ್ತರ ರಕ್ಷಣೆಗಾಗಿ ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ನೆರೆ ಸಂತ್ರಸ್ತರ ಪರಿಹಾರ ಧನ ಸಹಾಯ ಕೋರಲು ದೆಹಲಿಗೆ ತೆರಳಿದ್ದೇನೆ ಎಂದಿರುವುದು ಒಂದು ರಾಜಕೀಯ ನಾಟಕ” ಎಂದು ಆರೋಪಿಸಿದ್ದಾರೆ.

ಅದೇ ರೀತಿ “ಅಮಿತ್ ಶಾ ರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲಷ್ಟೇ ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ” ಎಂದು ಟೀಟ್‍ನಲ್ಲಿ ಟೀಕಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿ ಒಂದು ತಿಂಗಳು ಕಳೆದರೂ ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ನೀಡಿಲ್ಲ. ಸಿಎಂ ಯಡಿಯೂರಪ್ಪ ಸ್ವಪಕ್ಷದ ಪ್ರಧಾನಿಯನ್ನು ಭೇಟಿಯಾಗಲು ಹೆಣಗಾಡುತ್ತಿದ್ದಾರೆ. ಇನ್ನು ರಾಜ್ಯ ಯಾವೊಬ್ಬ ಸಂಸದನು ಕೂಡಾ ಮೋದಿ ಮತ್ತು ಅಮಿತ್ ಶಾ ಮುಂದೆ ಮಾತನಾಡುವ ಧೈರ್ಯ ತೋರುತ್ತಿಲ್ಲ. ಹೀಗಾಗಿ ರಾಜ್ಯದ ಜನತೆ ಮನೆ-ಮಠ ಕಳೆದುಕೊಂಡು ಪರದಾಡುತ್ತಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ ಮಾತ್ರ ಕಣ್ಣು ಮುಚ್ಚಿ ಕುಳಿತಿದೆ.

LEAVE A REPLY

Please enter your comment!
Please enter your name here