ರಾಜ್ಯದ ಪ್ರಭಾವಿ ಬಿಜೆಪಿ ನಾಯಕ ಮತ್ತು ಲಿಂಗಾಯತ ಸಮುದಾಯದ ಪ್ರಶ್ನಾತೀತ ನೇತಾರ ಎಂದೇ ಗುರುತಿಸಿಕೊಂಡಿದ್ದ, ಬಿ.ಎಸ್. ಯಡಿಯೂರಪ್ಪ ಇದೀಗ ಬಿಜೆಪಿ ಹೈಕಮಾಂಡ್ ಕೈಯಲ್ಲಿರುವ ಆಟದ ಗೊಂಬೆಯಾಗಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೆಪಮಾತ್ರಕ್ಕೆ ಮುಖ್ಯಮಂತ್ರಿಯಾಗಿದ್ದು, ಅವರನ್ನು ಏನೂ ಕೇಳದೇ ಎಲ್ಲವನ್ನೂ ಬಿಜೆಪಿ ವರಿಷ್ಠರೇ ನಿರ್ಧರಿಸುತ್ತಿದ್ದಾರೆ. ‘ಅಮಿತ್ ಶಾ’ ಅಣಿತಿಯಂತೆ ಸರ್ಕಾರ ನಡೆಯುತ್ತಿದ್ದು, ಯಡಿಯೂರಪ್ಪ ಅಕ್ಷರಶಃ ಕಂಗಾಲಾಗಿದ್ದಾರೆ.

ಇತ್ತೀಚಿನ ರಾಜಕೀಯ ವಿದ್ಯಮಾನಗಳನ್ನು ಗಮನಿಸಿದರೆ ಈ ಮಾತು ಸತ್ಯ ಎನಿಸುತ್ತದೆ. ಮೂವರು ಡಿಸಿಎಂ, ಖಾತೆ ಹಂಚಿಕೆ, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಡಿಯೂರಪ್ಪ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಾಗಿಲ್ಲ. ಪಕ್ಷದ ವಲಯದಲ್ಲೇ ಈ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಪ್ರಮುಖ ನಿರ್ಧಾರ ಕೈಗೊಳ್ಳುವಲ್ಲಿ ಯಡಿಯೂರಪ್ಪ ಅವರ ಅಭಿಪ್ರಾಯವನ್ನು ಕಡೆಗಣಿಸಲಾಗುತ್ತಿದೆ.

ಸಿಎಂ ನಿರ್ಧಾರಕ್ಕೆ ಬೆಲೆ ಇಲ್ಲದಂತಾಗಿದೆ. ಎಲ್ಲದಕ್ಕೂ ಬಿ.ಎಸ್. ಯಡಿಯೂರಪ್ಪ ದೆಹಲಿ ಕಡೆ ಕೈ ತೋರಿಸುತ್ತಿರುವುದರಿಂದ ಪಕ್ಷದಲ್ಲಿ ಗೊಂದಲ ಉಂಟಾಗಿದೆ. ಸುಗಮವಾಗಿ ಸರ್ಕಾರ ನಡೆಸಲು ವರಿಷ್ಠರು ಸ್ಪಷ್ಟ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಸಿಎಂ ಕೂಡ ಗೊಂದಲದಲ್ಲಿದ್ದಾರೆ. ಒಟ್ಟಾರೆಯಾಗಿ ‘ಶಾ’ ಲೀಲೆಯಿಂದ ಯಡಿಯೂರಪ್ಪ ನೆಪ ಮಾತ್ರಕ್ಕೆ ಮುಖ್ಯಮಂತ್ರಿಯಾಗಿದ್ದಾರೆ.