ಪ್ರಧಾನಿ ಮೋದಿಯಿಂದ ಮತ್ತೆ ಮತ್ತೆ ಸಿಎಂ ಯಡಿಯೂರಪ್ಪಗೆ ಅವಮಾನ..!

0
446

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಎಂದೇ ಗುರುತಿಸಿಕೊಂಡಿದ್ದ ಬಿ.ಎಸ್. ಯಡಿಯೂರಪ್ಪನವರಿಗೆ ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಕನಿಷ್ಠ ಗೌರವವೂ ಇಲ್ಲದಂತಾಗಿದೆ. ಮುಖ್ಯಮಂತ್ರಿ ಹುದ್ದೆ ಲಭಿಸಿದರು ಆಡಳಿತದ ಚುಕ್ಕಾಣಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೈಯಲ್ಲಿದೆ. ಹೀಗಾಗಿ ಯಡಿಯೂರಪ್ಪ ಇದೀಗ ‘ರಬ್ಬರ್ ಸ್ಟ್ಯಾಪ್’ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ ಗುಡುಗಿದರೆ, ವಿಧಾನಸೌಧ ನಡುಗುತ್ತದೆ ಎಂಬ ಮಾತಿತ್ತು. ಆದರೆ ಇದೀಗ ಯಡಿಯೂರಪ್ಪನವರಿಗೆ ಕನಿಷ್ಠ ಗೌರವವೂ ಇಲ್ಲದಂತಾಗಿದೆ.

ಯಡ್ಡಿ ಕೈಯಲ್ಲಿ ಯಾವುದೇ ಅಧಿಕಾರ ಇಲ್ಲ ಎನ್ನುವ ಸತ್ಯ ಬಿಜೆಪಿ ಶಾಸಕರಿಗೂ ಅರ್ಥವಾಗಿದೆ. ಹೀಗಾಗಿ ಎಲ್ಲ ಶಾಸಕರು ನೇರವಾಗಿ ಹೈಕಮಾಂಡ್ ಮಟ್ಟದಲ್ಲೇ ಲಾಬಿ ನಡೆಸುತ್ತಿದ್ದು, ಯಡಿಯೂರಪ್ಪಗೆ ಬೆಲೆ ಇಲ್ಲದಂತಾಗಿದೆ. ಇನ್ನು ಕೃಷ್ಣ ನದಿಯ ಪ್ರವಾಹದಿಂದಾಗಿ ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಇದುವರೆಗೂ ಪರಿಹಾರ ಬಂದಿಲ್ಲ. ವಿಪಕ್ಷಗಳು ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸುತ್ತಿದ್ದರು, ಕೇಂದ್ರ ಸರ್ಕಾರ ಮಾತ್ರ ಹಣ ನೀಡದೇ ಚಲ್ಲಾಟ ಆಡುತ್ತಿದೆ.

ಹೀಗಾಗಿಯೇ ಕೇಂದ್ರದ ಗಮನ ಸೆಳೆದು ಪ್ರಧಾನಿ ಮೋದಿಯವರನ್ನು ಸಿಎಂ ಬಿಎಸ್‍ವೈ ಅವರು ಭೇಟಿಯಾಗಿ ತುರ್ತು ಹಣ ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಲು ನಿರ್ಧರಿಸಿದ್ದರು. ಆದರೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸಲು ಬಿಎಸ್‍ವೈ ಸಮಯ ನೀಡಿಲ್ಲ. ಮೂಲಗಳ ಪ್ರಕಾರ ಕಳೆದ 10 ದಿನಗಳಿಂದ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಭೇಟಿಗಾಗಿ ಸಮಯ ಕೇಳುತ್ತಿದ್ದಾರೆ. ಆದರೆ ಪ್ರಧಾನಿಗಳು ಮಾತ್ರ ಸಮಯ ನೀಡುತ್ತಿಲ್ಲ ಎನ್ನಲಾಗಿದೆ. ಇನ್ನೂ ನಿನ್ನೆ ಸಮಯ ನಿಗದಿ ಮಾಡಲಾಗಿತ್ತು. ಮತ್ತೆ ಕೊನೆ ಕ್ಷಣದಲ್ಲಿ ಭೇಟಿ ರದ್ದು ಪಡಿಸಲಾಗಿದೆ.

President Barack Obama talks with Prime Minister Narendra Modi of India during their bilateral meeting in the Oval Office, Sept. 30, 2014. (Official White House Photo by Pete Souza)

ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ತಮ್ಮ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡುವ ಸಲುವಾಗಿ ಇಂದು ರಾತ್ರಿ ದೆಹಲಿಗೆ ತೆರಳಲು ಬಿಎಸ್‍ವೈ ಸಿದ್ಧರಾಗಿದ್ದರು, ಆದರೆ ಪ್ರಧಾನಿ ಮೋದಿ ಕಚೇರಿಯಿಂದ ಯಾವುದೇ ಮಾಹಿತಿ ಬಾರದ ಹಿನ್ನಲೆಯಲ್ಲಿ ಅವರು ಪ್ರವಾಸ ರದ್ದುಪಡಿಸಿದ್ದಾರೆ. ಹೀಗೆ ಮತ್ತೆ ಮತ್ತೆ ಯಡಿಯೂರಪ್ಪನವರಿಗೆ ಅವಮಾನ ಮಾಡಲಾಗುತ್ತಿದೆ. ಕನಿಷ್ಠ ಗೌರವನ್ನು ನೀಡಲಾಗುತ್ತಿಲ್ಲ ಎಂಬ ಮಾತುಗಳು ರಾಜ್ಯ ಬಿಜೆಪಿ ವಲಯದಿಂದಲೇ ಕೇಳಿ ಬರುತ್ತಿವೆ.

LEAVE A REPLY

Please enter your comment!
Please enter your name here