ಬಲಾತ್ಕಾರದ ಬಂದ್ ಮಾಡಿದ್ರೆ ಕಟ್ಟು ನಿಟ್ಟಿನ ಕ್ರಮ: ಬಿ. ಎಸ್ ಯಡಿಯೂರಪ್ಪ ಎಚ್ಚರಿಕೆ

0
64

ಬೆಂಗಳೂರು: ಬಲಾತ್ಕಾರದ ಬಂದ್ ಮಾಡಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಂದ್ ಕರೆ ಕೊಟ್ಟ ಸಂಘಟನೆ ಗಳಿಗೆ ಎಚ್ಚರಿಕೆ ನೀಡಿದ್ದಾರೆ.

“೫ನೇ ತಾರೀಖು ಬಂದ್ ಮಾಡುವ ಅಗತ್ಯತೆ ಇಲ್ಲ”

ಗೃಹ ಕಚೇರಿ ಕೃಷ್ಣ ಬಳಿ ಇಂದು ಮಾತನಾಡಿದ ಅವರು, ೫ನೇ ತಾರೀಖು ಬಂದ್ ಮಾಡುವ ಅಗತ್ಯತೆ ಇಲ್ಲ.
ಬಂದ್ ಕರೆ ನೀಡಿರುವವರಿಗೆ ನಾನು ಕೈ ಜೋಡಿಸಿ ಪ್ರಾರ್ಥನೆ ಮಾಡುತ್ತೇನೆ. ಸುಮ್ಮನೆ ಬಂದ್ ಹೆಸರಲ್ಲಿ ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಬೇಡಿ. ನಾವು ಮರಾಠಾ ಅಭಿವೃದ್ಧಿ ಗಾಗಿ ಪ್ರಾಧಿಕಾರ ರಚನೆ ಮಾಡ್ತಿದ್ದೇವೆ ವಿನಹ ಬೇರೆ ಕಾರಣಕ್ಕೆ ಅಲ್ಲ. ಬಲತ್ಕಾರದ ಬಂದ್ ಮಾಡಿದ್ರೆ ಕಟ್ಡು ನಿಟ್ಟಿನ ಕ್ರಮ ತೆಗೆದು ಕೊಳ್ಳಬೇಕಾಗುತ್ತದೆ
ಅದಕ್ಕೆ ಅವಕಾಶ ಮಾಡಿಕೊಡಬೇಡಿ ಎಂದ ಸಿಎಂ ಯಡಿಯೂರಪ್ಪ ಹೇಳಿದರು.

“ಮರಾಠಿಗುರು ಕಟ್ಟಾ ಹಿಂದುತ್ವ ವಾದಿಗಳು”

ಮಹಾಜನ್ ತೀರ್ಪು ಅಂತಿಮ ಇಡೀ ಜಗತ್ತಿಗೆ ಗೊತ್ತಿದೆ. ಮರಾಠಿಗರು ನಮ್ಮ ರಾಜ್ಯದ ಕನ್ನಡಿಗರೇ. ಇದು ಮರಾಠಾ ಅಭಿವೃದ್ಧಿ ಗಾಗಿ ಮಾಡಿರುವ ಪ್ರಾಧಿಕಾರ. ಮರಾಠಿಗುರು ಕೂಡ ಕಟ್ಟಾ ಹಿಂದುತ್ವದ ವಾದಿಗಳು.‌ ಬೆಳಗಾವಿಯ ವಿಶ್ವಸಮ್ಮೇಳನ ದಲ್ಲೂ ಅವರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ರು ಎಂದು ಹೇಳಿದರು.

ಮಹಾರಾಷ್ಟ್ರ ಡಿಸಿಎಂ ಪವಾರ್ ಖ್ಯಾತೆ ತೆಗೆದು ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಡಿಸಿಎಂ ಮಾತು ಉದ್ಧಟತನದ ಮಾತು. ಅವರು ಖ್ಯಾತೆ ತೆಗೆದು ಜನರಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡ್ತಿದ್ದಾರೆ ಎಂದು ಸಿಎಂ ಆರೋಪಿಸಿದರು.

ಸಂಪುಟ ವಿಸ್ತರಣೆಯೋ, ಪುನಾರಚನೆಯೋ..?

ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ದೆಹಲಿ ನಾಯಕರನ್ನು ಭೇಟಿ ಮಾಡಲು ತೆರಳಿದ್ದಾರೆ. ಈಗಾಗಲೇ ಸಚಿವಾಕಾಂಕ್ಷಿಗಳ ಪಟ್ಟಿಯನ್ನು ದೆಹಲಿ ನಾಯಕರಿಗೆ ನೀಡಿದ್ದು, ಹೈಕಮಾಂಡ್ ಒಪ್ಪಿಗೆಗೆ ಕಾಯುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಇಂದು ದೆಹಲಿಗೆ ಹೋಗ್ತಿದ್ದೇನೆ. ನಡ್ಡಾಜಿ ಸೇರಿದಂತೆ ಪ್ರಮುಖರ ಭೇಟಿ ಮಾಡ್ತೇನೆ. ಅವರ ಜೊತೆ ಚರ್ಚಿಸಿ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನ ಮಾಡ್ತೇನೆ. ಸಂಪುಟ ವಿಸ್ತರಣೆಯೋ, ಪುನಾರಚನೆಯೋ ಎಂಬುದು ದೆಹಲಿಗೆ ಹೋದ ಮೇಲೆ ಗೊತ್ತಾಗಲಿದೆ ಎಂದ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದರು.

ಮಕ್ಕಳ ಜ್ಞಾಪಕ ಶಕ್ತಿ, ಏಕಾಗ್ರತೆ, ಚುರುಕುತನ ಮತ್ತು ಕೌಶಲ್ಯ ಅಭಿವೃದ್ಧಿ ವೃದ್ಧಿಸಲು ಆಯುರ್ವೇದದ ಉತ್ಪನ್ನವಾದ ‘ಬ್ರಹ್ಮ ಶಂಕರ ‘ ಪರಿಹಾರ ಒದಗಿಸುತ್ತದೆ . ಶ್ರೀ ಶ್ರೀ ರವಿಶಂಕರ್ ಗುರೂಜಿಯವರು ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ನುರಿತ ಮತ್ತು ಅನುಭವಿ ಆಯುರ್ವೇದದ ತಜ್ಞ ವೈದ್ಯರ ಸಹಾಯದಿಂದ ನಿರಂತರ ಸಂಶೋಧನೆಗೆ ಪ್ರೋತ್ಸಾಹ ನೀಡಿದ ಪರಿಣಾಮವಾಗಿ ನೈಸರ್ಗಿಕವಾಗಿ ಬ್ರಹ್ಮ ಶಂಕರ ರೂಪುಗೊಂಡಿದೆ.

ಬ್ರಹ್ಮ ಶಂಕರದಲ್ಲಿ ಪ್ರಧಾನವಾಗಿ ಬ್ರಾಹ್ಮೀ ಎಲೆ, ಮಂಡೂಕ ಪರಿಣಿ,ಶಂಖ ಪುಷ್ಟಿ, ಅಶ್ವಗಂಧ,ಮಾಲ್ಕಂಗನಿ,ಜಟಮಾನಸಿ,ತಗರ್ ಅಥವಾ ಸುಗಂಧ ಬಾಲಾ, ಅಮೃತ ಬಳ್ಳಿ,ಸಂಜೆ,ವೀಟ್ ಜರ್ಮ್ ಅಥವಾ ಗೋಧಿ ಭ್ರೂಣವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಸಂಪೂರ್ಣ ನೈಸರ್ಗಿಕವಾಗಿ ಬ್ರಹ್ಮಶಂಕರದಲ್ಲಿ ಸೇರಿಸಿರುವುದರಿಂದ ಹೆಚ್ಚು ಪರಿಣಾಮಕಾರಿಯಾಗಿದೆ.ಬ್ರಾಹ್ಮೀ ಎಂದರೆ ಸರಸ್ವತಿ . ಮಕ್ಕಳು ಬ್ರಾಹ್ಮೀ ಮುಹೂರ್ತದಲ್ಲಿ ಓದಿದರೆ ಮರೆಯುವುದಿಲ್ಲ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.ಮಕ್ಕಳ ದೇಹ ಬಹಳ ಸೂಕ್ಷ್ಮವಾಗಿದ್ದು ಬಹುಬೇಗ ಜ್ವರ,ಕೆಮ್ಮು,ಸೋಂಕುಗಳಿಗೆ ತುತ್ತಾಗುತ್ತಾರೆ.ಬ್ರಹ್ಮಶಂಕರ ನಿಮ್ಮ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅವರನ್ನು ಸಧೃಡ ರನ್ನಾಗಿ ಮಾಡುತ್ತದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು.

ಒಂದು ಆರೋಗ್ಯವಂತ, ಜ್ಞಾನವಂತ , ಬುದ್ಧಿವಂತ ಸಮಾಜಕ್ಕಾಗಿ ‘ಬ್ರಹ್ಮ ಶಂಕರ ‘ ನಿಮ್ಮ ಮಕ್ಕಳಿಗೆ ಅತ್ಯವಶ್ಯಕವಾಗಿದೆ.

BUY NOW

LEAVE A REPLY

Please enter your comment!
Please enter your name here